Skip to content
The Believer's Library

Indian Revised Version (IRV) Kannada - 2019

Psalms 15 IRVKan

Side by side with the Father's Heart Bible™

ದಾವೀದನ ಕೀರ್ತನೆ.

ಯೆಹೋವನ ಸನ್ನಿಧಿಗೆ ಬರಲು ಯೋಗ್ಯರಾದವರು

1ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು?ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?

2ಅವನು ಸಜ್ಜನನೂ, ನೀತಿವಂತನೂ,ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.

3ಅವನು ಚಾಡಿಯನ್ನು ಹೇಳದವನೂ,ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ,ಯಾರನ್ನೂ ನಿಂದಿಸದವನೂ ಆಗಿರಬೇಕು.

4ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ,ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ,ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.

5ಅವನು ಸಾಲಕ್ಕೆ ಬಡ್ಡಿ ಕೇಳದವನೂ,ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು.ಇಂಥವನು ಎಂದಿಗೂ ಕದಲುವುದಿಲ್ಲ.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]