Skip to content
The Believer's Library

Indian Revised Version (IRV) Kannada - 2019

Psalms 16 IRVKan

Side by side with the Father's Heart Bible™

ದಾವೀದನ ಕಾವ್ಯ.

ಯೆಹೋವನ ಸೇವೆಯು ಪೂರ್ಣಾನಂದಕರವಾದದ್ದು

1ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.

2ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು;ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.

3ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ,“ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.

4ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು.ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ;ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.

5ನನ್ನ ಪಾಲೂ, ನನ್ನ ಪಾನವೂ ಯೆಹೋವನೇ,ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.

6ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು;ಅದು ನನಗೆ ಸಂತೃಪ್ತಿಕರವಾಗಿದೆ.

7ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ;ನಾನು ಆತನನ್ನು ಕೊಂಡಾಡುವೆನು.ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.

8ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ;ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.

9ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ;ನನ್ನ ಮನವು ಉಲ್ಲಾಸಗೊಳ್ಳುತ್ತದೆ;ನನ್ನ ಶರೀರವೂ ಸುರಕ್ಷಿತವಾಗಿರುವುದು.

10ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ;ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.

11ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ;ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]