Skip to content
The Believer's Library

Indian Revised Version (IRV) Kannada - 2019

Psalms 17 IRVKan

Side by side with the Father's Heart Bible™

ದಾವೀದನ ಪ್ರಾರ್ಥನೆ.

ಶತ್ರುಗಳಿಂದ ಕಾಪಾಡಬೇಕೆಂಬ ನಿರಪರಾಧಿಯ ಬೇಡಿಕೆ

1ಯೆಹೋವನೇ, ನ್ಯಾಯವಾದುದನ್ನು ಆಲೈಸು;ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು;ಅದು ಕಪಟವಾದ ಬಾಯಿಂದ ಬಂದದ್ದಲ್ಲ.

2ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ;ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.

3ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ,ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ,ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ;ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.

4ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆನಿನ್ನ ಮಾತನ್ನೇ ಅನುಸರಿಸಿದ್ದೇನೆ.

5ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ;ನನ್ನ ಕಾಲು ಜಾರಲಿಲ್ಲ.

6ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ,ಕಿವಿಗೊಟ್ಟು ಕೇಳು.

7ಭುಜಬಲವನ್ನು ಪ್ರಯೋಗಿಸಿ,ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ,ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.

8ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ,ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.

9ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ;ಕಣ್ಣು ಗುಡ್ಡಿನಂತೆಯೇ ಕಾಪಾಡು.

10ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ;ಅಹಂಕಾರದಿಂದ ಮಾತನಾಡುತ್ತಾರೆ.

11ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ;ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.

12ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ,ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.

13ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು;ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.

14ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದುನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು;ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ.ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.

15ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು.ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]