Skip to content
The Believer's Library

Indian Revised Version (IRV) Kannada - 2019

Psalms 21 IRVKan

Side by side with the Father's Heart Bible™

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.

ಅರಸನ ವಿಜಯದಲ್ಲಿ ಯೆಹೋವನನ್ನು ಸ್ತುತಿಸುವ ಕೀರ್ತನೆ

1ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ;ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.

2ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ,ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ

3ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ;ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.

4ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು,ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.

5ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು;ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.

6ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ;ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.

7ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ;ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.

8ಶತ್ರುಗಳೆಲ್ಲರು ನಿನಗೆ ಸಿಕ್ಕುವರು;ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.

9ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ.ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು;ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.

10ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ;ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.

11ಅವರು ತಂತ್ರೋಪಾಯಗಳನ್ನು ಕಲ್ಪಿಸಿ,ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.

12ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು,ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ.

13ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ;ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]