Skip to content
The Believer's Library

Indian Revised Version (IRV) Kannada - 2019

Psalms 23 IRVKan

Side by side with the Father's Heart Bible™

ದಾವೀದನ ಕೀರ್ತನೆ.

ಭಕ್ತರೆಂಬ ಕುರಿಗಳಿಗೆ ಒಳ್ಳೆಯ ಕುರುಬನಾದ ಯೆಹೋವನು

1ಯೆಹೋವನು ನನಗೆ ಕುರುಬನು; ಕೊರತೆಪಡೆನು.

2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ;ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.

3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.

4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.

5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ;ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ,ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು.ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]