Skip to content
The Believer's Library

Indian Revised Version (IRV) Kannada - 2019

Psalms 27 IRVKan

Side by side with the Father's Heart Bible™

ದಾವೀದನ ಕೀರ್ತನೆ.

ಗಂಡಾಂತರದಲ್ಲಿ ಭಕ್ತನ ನಂಬಿಕೆ

1ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;ನಾನು ಯಾರಿಗೆ ಭಯಪಟ್ಟೆನು?ಯೆಹೋವನು ನನ್ನ ಪ್ರಾಣದ ಆಧಾರವು;ನಾನು ಯಾರಿಗೆ ಹೆದರೇನು?

2ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳುನನ್ನನ್ನು ನುಂಗಿಬಿಡಬೇಕೆಂದು ಬಂದು,ತಾವೇ ನೆಲಕ್ಕೆ ಬಿದ್ದುಹೋದರು.

3ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ;ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ,ಭರವಸವುಳ್ಳವನಾಗಿಯೇ ಇರುವೆನು.

4ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ,ಆತನ ಪ್ರಸನ್ನತೆಯನ್ನು ನೋಡುವುದಕ್ಕೂ,ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನುಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.

5ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು;ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು;ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.

6ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ,ನನ್ನ ತಲೆ ಎತ್ತಲ್ಪಟ್ಟಿರುವುದು;ನಾನು ಯೆಹೋವನ ಗುಡಾರದಲ್ಲಿ,ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು.ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.

7ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ;ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು.

8“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ,ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.

9ನನಗೆ ವಿಮುಖನಾಗಿರಬೇಡ;ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ.ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ;ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.

10ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು;ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.

11ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು;ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.

12ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ;ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.

13ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನುಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.

14ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು;ನಿನ್ನ ಹೃದಯವು ಧೈರ್ಯದಿಂದಿರಲಿ;ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]