Skip to content
The Believer's Library

Indian Revised Version (IRV) Kannada - 2019

Psalms 28 IRVKan

Side by side with the Father's Heart Bible™

ದಾವೀದನ ಕೀರ್ತನೆ.

ಭಕ್ತನ ಸ್ತುತಿ

1ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ;ಕೇಳದೆ ಇರಬೇಡ.ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.

2ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ;ನನ್ನ ವಿಜ್ಞಾಪನೆಯನ್ನು ಲಾಲಿಸು.

3ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂನನ್ನನ್ನೂ ಎಳೆದುಕೊಂಡು ಹೋಗಬೇಡ.ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ,ಒಳಗೆ ಕೇಡಾಗಲಿ ಎಂದು ಯೋಚಿಸುವವರು.

4ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು;ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.

5ಅವರು ಯೆಹೋವನ ಕಾರ್ಯಗಳನ್ನೂ ಮತ್ತುಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು;ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.

6ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ;ಆತನಿಗೆ ಸ್ತೋತ್ರವಾಗಲಿ.

7ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ;ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು.ಆದಕಾರಣ ನನ್ನ ಹೃದಯವು ಹರ್ಷಿಸುವುದು;ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

8ಯೆಹೋವನು ತನ್ನ ಜನರಿಗೆ ಬಲವೂ,ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.

9ಯೆಹೋವನೇ, ನಿನ್ನ ಜನರನ್ನು ರಕ್ಷಿಸು;ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು.ನೀನು ಅವರ ಕುರುಬನಾಗಿರು;ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]