Skip to content
The Believer's Library

Indian Revised Version (IRV) Kannada - 2019

Psalms 29 IRVKan

Side by side with the Father's Heart Bible™

ದಾವೀದನ ಕೀರ್ತನೆ.

ಮೇಘಮಂಡಲದಲ್ಲಿ ಕಾಣಿಸುವ ಯೆಹೋವನ ಮಹಿಮೆ

1ದೇವದೂತರುಗಳಿರಾ, ಪರಮಪ್ರಭಾವವು,ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.

2ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ;ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.

3ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ;ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ;ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.

4ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು,ಎಷ್ಟೋ ಗಂಭೀರವಾದದ್ದು.

5ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ;ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.

6ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವುಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.

7ಯೆಹೋವನ ಗರ್ಜನೆಗೆ ಮಿಂಚುಗಳುಥಳಥಳನೆ ಹೊಳೆಯುತ್ತವೆ.

8ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ;ಕಾದೇಶ್ ಅರಣ್ಯವು ಕಂಪಿಸುತ್ತದೆ.

9ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ;ಕಾಡಿನ ಮರಗಳು ಬರಿದಾಗುತ್ತವೆ.ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ.

10ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು;ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.

11ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು;ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]