Skip to content
The Believer's Library

Indian Revised Version (IRV) Kannada - 2019

Psalms 3 IRVKan

Side by side with the Father's Heart Bible™

ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ.

ಶತ್ರುಬಾಧಿತನಾದ ದೈವಭಕ್ತನ ಉದಯಗೀತೆ

1ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ;ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ.

2ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ

3ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ;ನೀನು ನನ್ನ ಗೌರವಕ್ಕೆ ಆಧಾರನೂ,ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.

4ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ,ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.

5ಯೆಹೋವನು ನನ್ನನ್ನು ಕಾಪಾಡುವವನು,ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.

6ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.

7ಯೆಹೋವನೇ, ನನ್ನ ದೇವರೇ,ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ,ಎದ್ದು ಬಂದು ನನ್ನನ್ನು ರಕ್ಷಿಸು.

8ಜಯವು ಯೆಹೋವನಿಂದಲೇ ಉಂಟಾಗುವುದು.ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]