Skip to content
The Believer's Library

Indian Revised Version (IRV) Kannada - 2019

Psalms 6 IRVKan

Side by side with the Father's Heart Bible™

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ.

ಕಷ್ಟಪೀಡಿತನಾದ ಭಕ್ತನ ಪ್ರಾರ್ಥನೆ

1ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ;ರೋಷದಿಂದ ನನ್ನನ್ನು ದಂಡಿಸಬೇಡ.

2ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ.ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.

3ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ.ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?

4ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು;ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.

5ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ;ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?

6ನಾನು ನರಳಿ ನರಳಿ ದಣಿದಿದ್ದೇನೆ;ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ.ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.

7ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು;ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.

8ಧರ್ಮವನ್ನು ಮೀರಿ ನಡೆಯುವವರೇ,ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ;ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.

9ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ;ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.

10ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು;ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]