Skip to content
The Believer's Library

Indian Revised Version (IRV) Kannada - 2019

Psalms 9 IRVKan

Side by side with the Father's Heart Bible™

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ.

ನ್ಯಾಯಸ್ಥಾಪಕನಾದ ಯೆಹೋವನನ್ನು ಕೊಂಡಾಡುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ

1ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.

2ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು;ನಿನ್ನ ಹೆಸರನ್ನು ಕೀರ್ತಿಸುವೆನು.

3ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.

4ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ;ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.

5ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ,ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.

6ಶತ್ರುಗಳು ನಿಶ್ಶೇಷವಾದರು;ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು.ಅವರ ಸ್ಮರಣೆಯೇ ಇಲ್ಲವಾಯಿತು.

7ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು,ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.

8ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು;ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.

9ಯೆಹೋವನು ಕುಗ್ಗಿದವರಿಗೆ ಆಶ್ರಯವೂ,ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.

10ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರುನಿನ್ನಲ್ಲಿ ಭರವಸವಿಡುವರು;ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.

11ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ;ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.

12ಆತನು ಕುಗ್ಗಿದವರ ಮೊರೆಯನ್ನು ಮರೆಯದೆಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.

13ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ;ನನ್ನನ್ನು ಉದ್ಧರಿಸುವವನೇ, ಕನಿಕರಿಸು;ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.

14ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು;ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.

15ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು;ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.

16ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ;ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ

17ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾಪಾತಾಳಕ್ಕೆ ಇಳಿದುಹೋಗುವರು.

18ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ;ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.

19ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು.ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.

20ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು;ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]