Skip to content
The Believer's Library

Indian Revised Version (IRV) Kannada - 2019

Romans 2 IRVKan

Show IRVKan only
Verse × ×
1 So you have no excuse, whoever you are, when you judge another—in judging them you condemn yourself, since you do the same things. ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.
2 Now we know that our Father's judgment rightly falls on those who do such things. ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.
3 Do you think, whoever judges others for such things while doing them yourself, that you'll escape our Father's judgment? ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?
4 Or do you despise the riches of his kindness and restraint and patience, not realizing that our Father's kindness is meant to lead you to repentance? ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?
5 But because of your hard, unrepentant heart, you are storing up wrath for yourself, for the day of wrath when our Father's righteous judgment will be revealed. ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
6 He will repay each person according to what they have done. ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು,
7 To those who through persistent good work seek glory, honor, and immortality, he will give eternal life. ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.
8 But those who are self-seeking, reject the truth, and follow wickedness face wrath and rage. ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.
9 Trouble and distress for everyone who does evil—the Jew first, then the Greek, ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.
10 but glory, honor, and peace for all who do good—Jew first, then Greek too. ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು.
11 For our Father shows no favoritism. ದೇವರಲ್ಲಿ ಪಕ್ಷಪಾತವಿಲ್ಲ.
12 Sinners without the law also perish without it; sinners under the law will be judged by it. ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.
13 For not those who hear the law are righteous before our Father, but those who obey it will be justified. ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
14 Indeed, when Gentiles, who do not have the law, do by nature what the law requires, the law is at work within them, even though they do not have the law. ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ.
15 They show the law's work written on their hearts, their conscience bearing witness, and their conflicting thoughts accusing or defending them. ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.
16 This happens on the day our Father judges everyone's secrets through Jesus Christ—so my gospel says. ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
17 But if you call yourself a Jew, rely on the law, and boast in our Father, ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,
18 if you know our Father's will and approve what is excellent because you are instructed by the law, ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ.
19 if you're convinced you are a guide for the blind, a light for those in darkness, ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,
20 a corrector of the foolish, teacher of the immature, holding in the law the shape of knowledge and truth. ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ,
21 You teach others—do you not teach yourself? You preach against stealing—do you steal? ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?
22 You who tell others not to commit adultery—do you commit it? You who detest idols—do you rob temples? ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು?
23 You who boast in the law, do you dishonor our Father by breaking the law? ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?
24 As it is written: "Our Father's name is blasphemed among the nations because of you." “ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ.
25 Circumcision helps if you keep the law; break it, and your circumcision becomes being uncircumcised. ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.
26 So if the uncircumcised keep the law's requirements, won't their uncircumcision be counted as circumcision? ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ?
27 The physically uncircumcised who keep the law will judge you who, with the letter and circumcision, break the law. ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.
28 For being a Jew isn't merely about the outside, nor circumcision merely about the body. ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.
29 Rather, one is a Jew inwardly, circumcision being of the heart, by the Spirit, not the written code; that one's praise is not from people but from our Father. ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]