Skip to content
The Believer's Library

Indian Revised Version (IRV) Kannada - 2019

Romans 3 IRVKan

Show IRVKan only
Verse × ×
1 What advantage, then, does the Jew have? Or what is the value of circumcision? ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?
2 Much in every way. First of all, they were entrusted with the very words of our Father. ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.
3 What then? If some were unfaithful, will their unfaithfulness nullify the faithfulness of our Father? ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.
4 No! Let our Father be true, though every person is a liar. As it is written: "You are proven right in your words, and win when judged." ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
5 But if our wrongdoing highlights our Father's righteousness, what do we say? Is our Father unjust to bring wrath on us? (I speak in human terms.). ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
6 Certainly not! For then how could our Father judge the world? ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?
7 But if my lie makes our Father's truth overflow to his glory, why am I still judged as a sinner? ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?
8 Why not say, as some slander us as saying, "Let's do evil so good may come"? Their judgment is deserved. “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.
9 What then? Are we better off? Not at all—we've already charged that Jews and Greeks alike are all under sin's grip, ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
10 as it is written: "There is no one righteous, not even one; ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
11 no one understands; no one seeks our Father. ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.
12 All have turned away; together they have become worthless; no one does good, not even one. ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
13 Their throat is an open grave; they use their tongues to deceive." "The venom of snakes is under their lips. ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.
14 Their mouth is full of cursing and bitterness. ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ.
15 Their feet are swift to shed blood; ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.
16 ruin and misery mark their ways, ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ.
17 and the way of peace they have not known. ಸಮಾಧಾನದ ಮಾರ್ಗವನ್ನೇ ಅರಿಯರು.
18 There is no fear of our Father before their eyes." ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.
19 We know whatever the law says applies to those under it, so every mouth is silenced and the whole world stands accountable to our Father. ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
20 No one is made right before him by works of the law; the law brings awareness of sin. ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
21 But now, apart from the law, our Father's righteousness has been revealed, testified to by the Law and the Prophets. ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.
22 This righteousness of our Father comes through faith in Jesus Christ, to all who believe, for there's no distinction, ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
23 since all have sinned and fall short of the glory of our Father, ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
24 and are justified freely by his grace through the redemption that is in Christ Jesus. ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
25 Our Father presented him as the atoning sacrifice, through faith in his blood, to show his righteousness, since in his patience he had passed over sins committed before, ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
26 to show his righteousness now, so he is both just and the justifier of whoever trusts in Jesus. ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.
27 Where then is boasting? Excluded. By what law? Of works? No—by the law of faith. ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
28 For we maintain that a person is justified by faith apart from works of the law. ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ
29 Or is our Father the Father of Jews only? Not the Father of Gentiles too? Yes, of Gentiles too, ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.
30 since our Father is one, he will justify the circumcised by faith and the uncircumcised through faith. ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.
31 Do we cancel the law through this faith? Never—we confirm the law. ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]