Skip to content
The Believer's Library

Indian Revised Version (IRV) Kannada - 2019

Ruth 2 IRVKan

Show IRVKan only
Verse × ×
1 Naomi had a relative through her husband, a prominent, wealthy man from Elimelech's clan, named Boaz. ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು.
2 Ruth the Moabite said to Naomi, "Let me glean grain behind anyone who favors me." She said, "Go, my daughter." ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.
3 So she went out and gleaned behind the harvesters, and she happened to come to the field belonging to Boaz, of Elimelech's family. ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.
4 Just then Boaz came from Bethlehem, telling the harvesters, "May our Father be with you." "Our Father bless you," they replied. ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು.
5 Then Boaz said to his foreman, "Whose young woman is this?" ತೆನೆ ಕೊಯ್ಯುವವರ ಜೊತೆಯಲ್ಲಿ ರೂತಳನ್ನು ನೋಡಿ ಬೋವಜನು ತೆನೆ ಕೊಯ್ಯುವವರನ್ನು ನಿರ್ವಹಿಸಲು ನೇಮಿಸಿದ್ದ ತನ್ನ ಸೇವಕನನ್ನು, “ಈ ಹೆಂಗಸು ಯಾರು?” ಎಂದು ಕೇಳಿದ್ದಕ್ಕೆ
6 The foreman answered, "She's the young Moabite woman who returned with Naomi from Moab's country. ಅವನು “ಈಕೆಯು ಮೋವಾಬ್ ಸೀಮೆಯಿಂದ ನವೊಮಿಯ ಸಂಗಡ ಬಂದ ಮೋವಾಬ್ ಸ್ತ್ರೀ.” ಎಂದನು.
7 She said, 'Please let me glean and gather among the sheaves behind the harvesters.' She came and has stayed from morning till now, resting only briefly in the shelter." ಇವಳು ತೆನೆ “ಕೊಯ್ಯುವವರೊಂದಿಗೆ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ಅಪ್ಪಣೆ ನೀಡಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ. ಸದ್ಯಕ್ಕೆ ಮನೆಯಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ” ಅಂದನು.
8 Boaz said to Ruth, "Listen, my daughter. Don't glean in another field or leave here; stay close to my young women. ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು.
9 Watch the field they harvest and follow behind them. I've told the young men not to touch you. When thirsty, drink from the jars the young men filled." ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು.
10 She bowed facedown to the ground and asked him, "Why have I found favor in your eyes that you notice me, a foreigner?" ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.
11 Boaz answered, "I've heard all you did for your mother-in-law since your husband died—how you left your father, mother, and homeland to come to a people you didn't know before. ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.
12 May our Father repay your deed; may our Father, the God of Israel, under whose wings you've come for refuge, reward you fully." ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.
13 "May I find favor in your eyes, my lord," she said, "for you've comforted me and spoken kindly to your servant, though I'm not one of your servants." ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.
14 At mealtime Boaz said, "Come here, eat some bread, dip your piece in the wine vinegar." She sat beside the harvesters; he passed her roasted grain. She ate her fill and had some left. ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು.
15 When she rose to glean, Boaz ordered his young men, "Let her glean even among the sheaves; don't shame her. ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅಡ್ಡಿ ಮಾಡಬೇಡಿರಿ;
16 Instead, pull stalks from the bundles for her and leave them for her to pick up, and don't correct her." ಸಿವುಡುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ” ಎಂದು ಆಜ್ಞಾಪಿಸಿದನು.
17 She gleaned in the field till evening, then beat out what she'd gathered—about twenty quarts of barley. ರೂತಳು ಸಾಯಂಕಾಲದ ವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು.
18 She carried it to town; her mother-in-law saw how much she'd gleaned. She also brought out and gave her what she'd saved after eating her fill. ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು, ಆಕೆ ಹಕ್ಕಲಾಯ್ದದು ಸಂಗ್ರಹಿಸಿದ್ದನ್ನು ತನ್ನ ಅತ್ತೆಗೆ ತೋರಿಸಿದಳು. ತಾನು ಉಳಿಸಿಟ್ಟಿದ್ದ ಸುಟ್ಟ ತೆನೆಯನ್ನು ರೂತಳು ತನ್ನ ಅತ್ತೆಗೆ ಕೊಟ್ಟಳು.
19 Her mother-in-law asked, "Where did you gather today? Where did you work? Blessed be the man who noticed you!" Ruth named whose field: "The man I worked with today is Boaz." ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ದ ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು.
20 Naomi told her daughter-in-law, "May our Father bless him, whose kindness hasn't left the living or the dead." She added, "He's a close relative, one of our redeemers." ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.
21 Then Ruth the Moabite said, "He even told me, 'Stay with my workers until they finish all my harvest.'" ಆಗ ಮೋವಾಬ್ಯಳಾದ ರೂತಳು “ಇದಲ್ಲದೆ ಆ ಮನುಷ್ಯನು ನನಗೆ, ‘ಸುಗ್ಗಿ ಮುಗಿಯುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರು ಎಂದು ಹೇಳಿದ್ದಾನೆ’” ಎಂದಳು.
22 Naomi told her daughter-in-law Ruth, "Good, my daughter—go out with his young women, so you won't be harmed in another field." ನವೊಮಿಯು ತನ್ನ ಸೊಸೆಯಾದ ರೂತಳಿಗೆ “ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವುದು ಒಳ್ಳೆಯದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು” ಎಂದು ಹೇಳಿದಳು.
23 She stayed close to Boaz's young women, gleaning until the barley and wheat harvests ended, and lived with her mother-in-law. ಅದರಂತೆಯೇ ರೂತಳು ಅತ್ತೆಯ ಜೊತೆಯಲ್ಲಿದ್ದುಕೊಂಡು ಜವೆಗೋದಿಯ ಮತ್ತು ಗೋದಿಯ ಸುಗ್ಗಿ ಮುಗಿಯುವ ವರೆಗೆ ಬೋವಜನ ಹೆಣ್ಣಾಳುಗಳ ಸಂಗಡಲೇ ಹೋಗಿ ಹಕ್ಕಲಾಯುತ್ತಿದ್ದಳು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]