Skip to content
The Believer's Library

Indian Revised Version (IRV) Kannada - 2019

Ruth 3 IRVKan

Show IRVKan only
Verse × ×
1 Then her mother-in-law Naomi said, "My daughter, shouldn't I seek a home for you, so it goes well for you? ನವೊಮಿಯು ಸೊಸೆಗೆ, “ನನ್ನ ಮಗಳೇ, ನಿನಗೆ ಒಳ್ಳೆಯದಾಗುವುದಕ್ಕಾಗಿ, ನೀನು ಗೃಹಿಣಿಯಾಗಿ ಸುಖದಿಂದಿರುವುದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ?
2 Isn't Boaz, whose young women you were with, our relative? Tonight he winnows barley at the threshing floor. ಈಗ ನೀನು ಯಾರ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.
3 Wash, perfume yourself, put on your cloak, and go down to the threshing floor. Don't reveal yourself to the man until he finishes eating and drinking. ನೀನು ಸ್ನಾನಮಾಡಿ, ಸುಗಂಧತೈಲವನ್ನು ಹಚ್ಚಿಕೊಂಡು, ಶ್ರೇಷ್ಠವಸ್ತ್ರಗಳನ್ನು ಧರಿಸಿಕೊಂಡು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು.
4 When he lies down, note the place; go uncover his feet and lie down—he'll tell you what to do." ಅವನು ಮಲಗಿದ ಸ್ಥಳವನ್ನು ತಿಳಿದುಕೊಂಡು ಹೋಗಿ ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದು ಬಿಟ್ಟು ಅಲ್ಲೇ ಮಲಗಿಕೋ; ಆ ಮೇಲೆ ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುವನು” ಅಂದಳು.
5 And Ruth said to her, "All that you say I will do." ಅದಕ್ಕೆ ರೂತಳು “ನೀನು ಹೇಳಿದ ಹಾಗೆಯೇ ಮಾಡುವೆನು” ಎಂದು ಹೇಳಿದಳು.
6 So she went down to the threshing floor and did everything her mother-in-law had told her. ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ,
7 Boaz ate, drank, and felt good, then lay down at the end of the grain heap. She came secretly, uncovered his feet, and lay down. ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು, ಕಾಲ್ಬದಿಯಲ್ಲಿ ಮಲಗಿದಳು.
8 At midnight the man was startled, turned over, and there lay a woman at his feet! ಮಧ್ಯರಾತ್ರಿಯಲ್ಲಿ ಎಚ್ಚರವಾದಾಗ ಬೋವಜನು ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವ ಹೆಂಗಸನ್ನು ಕಂಡು,
9 "Who are you?" he asked. "I am Ruth, your servant," she said. "Spread your cloak's corner over your servant, for you are a redeemer." ಹೆದರಿ ಆಕೆಯನ್ನು “ನೀನು ಯಾರು?” ಎಂದು ಕೇಳಲು ಆಕೆಯು “ನಾನು ನಿನ್ನ ದಾಸಿಯಾದ ರೂತಳು, ನೀನು ಸಮೀಪಬಂಧುವಾಗಿರುವುದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು” ಅಂದಳು.
10 He said, "Blessed are you by our Father, my daughter. This last kindness is better than the first, since you didn't chase young men, poor or rich. ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮೊದಲಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.
11 Now, my daughter, don't be afraid. I'll do all you ask, for my whole town knows you're a worthy woman. ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.
12 Now it is true that I am a redeemer, yet there is a redeemer nearer than I. ನಾನು ಸಮೀಪಬಂಧುವೆಂಬುದು ನಿಜ; ಆದರೂ ನನಗಿಂತ ಸಮೀಪ ಬಂಧು ಒಬ್ಬನಿದ್ದಾನೆ.
13 Stay tonight. In the morning, if he'll redeem you—good, let him redeem. If not, as our Father lives, I will redeem you. Lie down until morning." ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು.
14 She lay at his feet until morning, rose before anyone was recognizable, for he said, "No one may know a woman came to the threshing floor." ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬುವುದು ಯಾರಿಗೂ ಗೊತ್ತಾಗಬಾರದೆಂದು ಅವನು ಹೇಳಿದ್ದರಿಂದ ಗುರುತು ಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು.
15 He said, "Bring the shawl you're wearing; hold it out." She held it out. He measured six portions of barley, put it on her, and went into the city. ಆಗ ಅವನು ಆಕೆಗೆ “ನಿನ್ನ ಮೇಲ್ಹೊದಿಕೆಯನ್ನು ಹಾಸು” ಎಂದು ಹೇಳಿದನು, ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿ ಕಳುಹಿಸಿದನು. ಆಕೆಯು ಊರೊಳಕ್ಕೆ ಹೋದಳು.
16 When Ruth came to her mother-in-law, Naomi asked, "How did it go, my daughter?" She told her all the man had done for her. ಅತ್ತೆಯ ಬಳಿಗೆ ಬಂದಾಗ, ಅತ್ತೆಯು “ನನ್ನ ಮಗಳೇ, ನೀನು ಹೋಗಿದ್ದ ಕಾರ್ಯವೇನಾಯಿತು?” ಎಂದು ಕೇಳಲು ಆಕೆಯು ಆ ಮನುಷ್ಯನು ಮಾಡಿದ್ದೆಲ್ಲವನ್ನೂ ತಿಳಿಸಿ,
17 She said, "He gave me these six measures of barley, saying, 'Don't return to your mother-in-law empty-handed.'" “‘ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು’ ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟನು” ಅಂದಳು.
18 Naomi said, "Wait, my daughter, until you know the outcome, for the man won't rest until he settles it today." ಅತ್ತೆಯು “ನನ್ನ ಮಗಳೇ, ಈ ಕಾರ್ಯವು ಏನಾಗುವುದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ವಿಷಯವನ್ನು ಇತ್ಯರ್ಥ ಮಾಡುವವರೆಗೂ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]