Skip to content
The Believer's Library

Biblica® Open Kannada Contemporary Version 2022

1 Chronicles 17 OKCV

Show OKCV only
Verse × ×
1 After David settled in his house, he told Nathan the prophet, "Look, I live in a cedar house, but the ark of our Father's covenant sits under tent curtains." ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, ಒಂದು ದಿನ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.
2 Nathan replied to David, "Do all that is in your heart, for our Father is with you." ಆಗ ನಾತಾನನು ದಾವೀದನಿಗೆ, “ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು; ಏಕೆಂದರೆ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.
3 But that night the word of our Father came to Nathan: ಅದೇ ರಾತ್ರಿಯಲ್ಲಿ ಯೆಹೋವ ದೇವರ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನೆಂದರೆ:
4 Go tell David my servant: "This is what your Father says: You are not the one to build me a house to live in." “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಿಸಬೇಡ.
5 I haven't lived in a house from the day I brought Israel up to now—I've moved tent to tent, dwelling to dwelling. ಏಕೆಂದರೆ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು, ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಒಂದು ಗುಡಾರದ ಸ್ಥಳದಿಂದ ಇನ್ನೊಂದು ಗುಡಾರದ ಸ್ಥಳಕ್ಕೂ, ಒಂದು ತಂಗುವ ಸ್ಥಳದಿಂದ ಇನ್ನೊಂದು ತಂಗುವ ಸ್ಥಳಕ್ಕೂ ಹೋಗುತ್ತಿದ್ದೆನು.
6 Wherever I moved with all Israel, did I ever speak a word to any of Israel's judges, whom I commanded to shepherd my people, asking, 'Why haven't you built me a cedar house?' ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’
7 So tell my servant David: "This is what the Father of heaven's armies says: I took you from the pasture, from following the flock, to be ruler over my people Israel. “ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.
8 I've been with you everywhere you went, and cut off all your enemies before you. Now I'll make your name like the name of earth's greatest ones. ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.
9 I will appoint a place for my people Israel and plant them there, to live in their own home, never disturbed again. Wicked people will no longer wear them down as before, ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.
10 since I appointed judges over my people Israel, I will subdue all your enemies. I tell you: your Father will build you a house. ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದೆ. ಆ ದಿವಸದಿಂದ ಈಚೆಗೆ, ದುಷ್ಟರು ಇನ್ನು ಮೇಲೆ ಇಸ್ರಾಯೇಲರನ್ನು ಕುಗ್ಗಿಸದೆ ಇರುವರು. ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. “ ‘ಯೆಹೋವ ದೇವರಾದ ನಾನು ನಿನಗೆ ಮನೆಯನ್ನು ಕಟ್ಟುವೆನು, ಎಂದು ನಿನಗೆ ತಿಳಿಸುತ್ತೇನೆ.
11 When your days end and you go to be with your ancestors, I will raise your offspring after you, one of your sons, and I will establish his kingdom. ನಿನ್ನ ಆಯುಷ್ಕಾಲವು ಮುಗಿದ ಮೇಲೆ, ನೀನು ನಿನ್ನ ಪಿತೃಗಳ ಬಳಿಗೆ ಹೋಗಿ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.
12 He is the one who will build me a house, and I will establish his throne forever. ಅವನೇ ನನಗೆ ದೇವಾಲಯವನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.
13 I will be his Father; he will be my son. I won't remove my covenant love from him as I removed it from the one before you. ನಾನು ಅವನ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನ ಮೇಲಿಂದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ.
14 I will set him over my house and my kingdom forever; his throne will stand firm forever." ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾಕಾಲಕ್ಕೂ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.
15 Nathan reported to David all these words and this entire vision. ನಾತಾನನು ಈ ಸಮಸ್ತ ಪ್ರಕಟಣೆಯ ಮಾತುಗಳನ್ನು ದಾವೀದನಿಗೆ ತಿಳಿಸಿದನು.
16 Then King David went in, sat before our Father, and said, "Who am I, my Father, and what is my house, that you have brought me this far? ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರೇ, ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?
17 And as if this were a small thing in your eyes, my Father—you have spoken of your servant's house reaching into the distant future, and you have looked on me as the greatest of men, my Father. ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಯೆಹೋವ ದೇವರೇ, ನೀವು ನನ್ನನ್ನು ಮನುಷ್ಯರಲ್ಲಿ ಅತ್ಯುನ್ನತ ವ್ಯಕ್ತಿಯಂತೆ ನೋಡಿರುವಿರಿ.
18 What more can David say to you for honoring your servant? For you know your servant. “ನಿಮ್ಮ ಸೇವಕನ ಘನತೆಯ ನಿಮಿತ್ತ, ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ.
19 My Father, for your servant's sake and by your own heart, you have done all these great things, revealing all these great promises. ಯೆಹೋವ ದೇವರೇ, ನಿಮ್ಮ ಸೇವಕನ ನಿಮಿತ್ತವಾಗಿಯೂ, ನಿಮ್ಮ ಚಿತ್ತಾನುಸಾರವಾಗಿಯೂ ಈ ಮಹಾಕಾರ್ಯಗಳನ್ನೆಲ್ಲಾ ನಡೆಸಿ, ಎಲ್ಲ ವಾಗ್ದಾನಗಳನ್ನು ತಿಳಿಯಪಡಿಸಿರುವಿರಿ.
20 My Father, none is like you, no Father besides you, as all we've heard with our ears. “ಯೆಹೋವ ದೇವರೇ, ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.
21 Who is like your people Israel, the one nation on earth our Father went to redeem as a people for himself, making yourself a name by great and awesome deeds, driving out nations before your people, whom you redeemed from Egypt? ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ದೇವರಾದ ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?
22 You made your people Israel your very own forever, and you, my Father, became their Father. ನೀವು ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಮಾಡಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ.
23 Now, my Father, let the word you spoke about your servant and his house stand forever; do as you have spoken. “ಈಗ ಯೆಹೋವ ದೇವರೇ, ನೀವು ನಿಮ್ಮ ಸೇವಕನನ್ನು ಕುರಿತೂ, ಅವನ ಕುಟುಂಬವನ್ನು ಕುರಿತೂ ಮಾಡಿದ ವಾಗ್ದಾನವನ್ನು ನೆರವೇರಿಸಿ ಅದನ್ನು ಶಾಶ್ವತವಾಗಿ ಸ್ಥಿರಪಡಿಸಿರಿ.
24 Let it stand, and your name grow great forever, so it's said, 'The Father of heaven's armies is our Father over Israel.' Let your servant David's house be established before you. ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲ್ ದೇವರಾಗಿದ್ದಾರೆಂದು ನಿಮ್ಮ ನಾಮವು ಶಾಶ್ವತವಾಗಿ ಘನಪಡಲಿ,’ ಎಂದು ಜನರು ಹೇಳಲಿ. ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರಲಿ.
25 For you, my Father, revealed to your servant that you will build him a house—so your servant found courage to pray before you. “ಏಕೆಂದರೆ ನನ್ನ ದೇವರೇ, ನೀವು ನಿಮ್ಮ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಪ್ರಕಟ ಮಾಡಿದ್ದರಿಂದ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು.
26 Now, my Father, you are our Father; you promised your servant this good thing. ಯೆಹೋವ ದೇವರೇ, ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ.
27 Now you have chosen to bless your servant's house, so it may continue before you forever; for you, my Father, have blessed it, and it is blessed forever." ಈಗ ನಿಮ್ಮ ಸೇವಕನ ಮನೆಯು ನಿಮ್ಮ ಮುಂದೆ ಶಾಶ್ವತವಾಗಿ ಇರುವ ಹಾಗೆ, ಅದನ್ನು ಆಶೀರ್ವದಿಸಲು ಸಂತೋಷಪಡಿರಿ; ಯೆಹೋವ ದೇವರೇ, ನೀವು ಆಶೀರ್ವದಿಸಿದ್ದೀರಿ, ಅದು ನಿತ್ಯ ಆಶೀರ್ವಾದ ಹೊಂದಿರುವುದು.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]