Skip to content
The Believer's Library

Biblica® Open Kannada Contemporary Version 2022

1 Chronicles 22 OKCV

Show OKCV only
Verse × ×
1 David said, "This is the house of our Father, and this the altar of burnt offering for Israel." ಆಗ ದಾವೀದನು, “ಇದೇ ದೇವರಾದ ಯೆಹೋವ ದೇವರ ಆಲಯ, ಮತ್ತು ಇದೇ ಇಸ್ರಾಯೇಲರ ದಹನಬಲಿಪೀಠ,” ಎಂದನು.
2 David ordered the foreigners in Israel gathered, then appointed stonecutters to cut dressed stones for building the house of our Father. ದಾವೀದನು ಇಸ್ರಾಯೇಲ್ ದೇಶದಲ್ಲಿರುವ ಪರದೇಶಸ್ಥರನ್ನು ಕೂಡಿಸಲು ಹೇಳಿ, ದೇವರ ಆಲಯವನ್ನು ಕಟ್ಟಿಸುವುದಕ್ಕೆ ಕೆತ್ತಿದ ಕಲ್ಲುಗಳನ್ನು ಕಡಿಯುವ ಹಾಗೆ ಕಲ್ಲುಕುಟಿಗರನ್ನು ನೇಮಿಸಿದನು.
3 David provided abundant iron for gate-door nails and clamps, and abundant bronze beyond weighing, ದಾವೀದನು ಬಾಗಿಲುಗಳ ಕದಗಳನ್ನು ಜೋಡಿಸುವುದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಬಹಳ ಕಬ್ಬಿಣವನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ ಸಿದ್ಧಮಾಡಿಸಿದನು.
4 and cedar timbers beyond counting, for the Sidonians and Tyrians brought David cedar logs in abundance. ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿಸಿದನು. ಏಕೆಂದರೆ ಸೀದೋನ್ಯರೂ, ಟೈರಿನವರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು.
5 For David said, "My son Solomon is young and untested, and the house built for our Father must be truly great, famed, and glorious in every land. Let me prepare for it." So David laid in vast provisions before he died. ದಾವೀದನು, “ನನ್ನ ಮಗ ಸೊಲೊಮೋನನು ಎಳೆಯ ಪ್ರಾಯದವನಾಗಿದ್ದಾನೆ. ಯೆಹೋವ ದೇವರಿಗೆ ಕಟ್ಟಬೇಕಾದ ಆಲಯವು ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ, ಸೌಂದರ್ಯದಲ್ಲಿಯೂ ಅಧಿಕ ಘನವುಳ್ಳದ್ದಾಗಿರಬೇಕು. ನಾನು ಅದಕ್ಕೋಸ್ಕರ ಈಗ ಸಿದ್ಧಮಾಡುವೆನು,” ಎಂದು ಹೇಳಿದನು. ಆದ್ದರಿಂದ ದಾವೀದನು ಸಾಯುವುದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
6 Then he called Solomon his son and charged him to build a house for our Father of Israel. ತನ್ನ ಮಗ ಸೊಲೊಮೋನನನ್ನು ಕಳುಹಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಆಲಯವನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
7 David told Solomon, "My son, I had it in my heart to build a house for my Father's name. ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬೇಕೆಂಬುದು ನನ್ನ ಹೃದಯದಲ್ಲಿ ಇತ್ತು.
8 The word of our Father came to me: 'You have shed much blood and fought great wars. You will not build a house for my name, because you have shed so much blood on the earth before me.' ಆದರೆ ಯೆಹೋವ ದೇವರಿಂದ ನನಗೆ ಉಂಟಾದ ವಾಕ್ಯವೇನೆಂದರೆ: ‘ನೀನು ಬಹು ರಕ್ತವನ್ನು ಚೆಲ್ಲಿದ್ದೀಯೆ; ಮಹಾ ಯುದ್ಧಗಳನ್ನು ಮಾಡಿದ್ದೀಯೆ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ. ಏಕೆಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಚೆಲ್ಲಿದಿ.
9 A son will be born to you, a man of rest; I will give him rest from all his enemies around him. His name will be Solomon; I will give Israel peace and quiet in his days. ಶಾಂತಿ ಸಮಾಧಾನದ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು. ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ವಿಶ್ರಾಂತಿಯನ್ನು ಕೊಡುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಶಾಂತಿ ಸಮಾಧಾನವನ್ನೂ ಕೊಡುವೆನು.
10 He will build a house for my name. He will be my son, and I his father. I will secure his royal throne over Israel forever. ಅವನು ನನ್ನ ನಾಮಕ್ಕೆ ಆಲಯವನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದು ಹೇಳಿದ್ದಾರೆ.
11 Now, my son, may our Father be with you, so that you may succeed and build the house of your Father, as he said about you. “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಕುರಿತು ಹೇಳಿದ ಪ್ರಕಾರ, ನೀನು ಕೃತಾರ್ಥನಾಗಿ, ನೀನು ನಿನ್ನ ದೇವರಾದ ಯೆಹೋವ ದೇವರ ಆಲಯವನ್ನು ಕಟ್ಟಿಸುವಂತೆ ಅವರು ನಿನ್ನ ಸಂಗಡ ಇರಲಿ.
12 Only, may our Father give you wisdom and understanding when he puts you in charge of Israel, to keep the law of your Father. ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ.
13 Then you'll prosper, if you carefully keep the statutes and rules our Father commanded Moses for Israel. Be strong and brave. Don't be afraid or discouraged. ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.
14 See, with great effort I've provided for the house of our Father nearly 4,000 tons of gold, about 34,000 tons of silver, and bronze and iron beyond weighing—there's so much. I've also provided timber and stone; you may add to them. “ಇಗೋ, ಕಷ್ಟಪಟ್ಟು ನಾನು ಯೆಹೋವ ದೇವರ ಆಲಯಕ್ಕೋಸ್ಕರ ಮೂರು ಸಾವಿರದ ನಾನೂರ ಎಪ್ಪತ್ತು ಮೆಟ್ರಿಕ್ ಟನ್ ಬಂಗಾರವನ್ನೂ, ಮೂವತ್ತ ನಾಲ್ಕು ಸಾವಿರದ ಐನೂರು ಮೆಟ್ರಿಕ್ ಟನ್ ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ, ಕಬ್ಬಿಣವನ್ನೂ ಮರಗಳನ್ನೂ, ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಸೇರಿಸಬಹುದು.
15 You have many workers with you: stonecutters, masons, carpenters, and all kinds of craftsmen skilled in every trade. ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ, ಕಲ್ಲು ಕೆಲಸದವರೂ, ಕಲ್ಲುಕುಟಿಗರೂ, ಬಡಗಿಯವರೂ, ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.
16 Skilled with gold, silver, bronze, and iron beyond count. Rise up and work; may our Father be with you." ಚಿನ್ನ, ಬೆಳ್ಳಿ, ಕಂಚು, ಕಬ್ಬಿಣ, ಮುಂತಾದವುಗಳಲ್ಲಿ ನಿಪುಣರು ಲೆಕ್ಕವಿಲ್ಲದಷ್ಟು ಇದ್ದಾರೆ. ಎದ್ದು ಕೆಲಸ ಮಾಡು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.
17 David also commanded all the leaders of Israel to help Solomon his son, saying, ಇದಲ್ಲದೆ, ದಾವೀದನು ತನ್ನ ಮಗ ಸೊಲೊಮೋನನಿಗೆ ಸಹಾಯಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ,
18 "Isn't your Father with you? Hasn't he given you rest on every side? For he has given the land's people into my hand, and the land is subdued before our Father and his people. “ನಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ, ಅಲ್ಲವೇ? ಎಲ್ಲಾ ಕಡೆಗಳಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾರೆ, ಅಲ್ಲವೇ? ನಿಶ್ಚಯವಾಗಿ ಅವರು ದೇಶ ನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ, ದೇಶವು ಯೆಹೋವ ದೇವರ ಮುಂದೆಯೂ, ಅವರ ಜನರ ಮುಂದೆಯೂ ಸ್ವಾಧೀನವಾಯಿತು.
19 Now set your heart and soul to seek your Father. Arise and build the sanctuary of our Father, to bring the ark of his covenant and his holy vessels into the house built for his name." ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]