Skip to content
The Believer's Library

Biblica® Open Kannada Contemporary Version 2022

1 Chronicles 28 OKCV

Show OKCV only
Verse × ×
1 David assembled at Jerusalem all Israel's officials: officials of the tribes, commanders of the divisions serving the king, commanders of thousands and hundreds, stewards over all the king's and his sons' property and livestock, with the court officials, the mighty men, and all valiant warriors. ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನ ಗೋತ್ರಗಳ ಪ್ರಧಾನರನ್ನೂ, ವರ್ಗ ವರ್ಗವಾಗಿ ಅರಸನನ್ನು ಸೇವೆಮಾಡಿದ ಸಭೆಗಳ ಪ್ರಧಾನರನ್ನೂ, ಸಹಸ್ರಾಧಿಪತಿಗಳನ್ನೂ, ಶತಾಧಿಪತಿಗಳನ್ನೂ ಅರಸನ ಸ್ವತ್ತಿನ ಮೇಲೆಯೂ, ಅವನ ಪುತ್ರರ ಸ್ವತ್ತಿನ ಮೇಲೆಯೂ ಪಶುಗಳ ಮೇಲೆಯೂ ಇರುವ ಪ್ರಧಾನರನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಶೂರರನ್ನೂ ಯೆರೂಸಲೇಮಿನಲ್ಲಿ ಕೂಡಿ ಬರಲು ಕರೆಸಿದನು.
2 King David rose to his feet and said, "Listen to me, my brothers and my people. I had it in my heart to build a house of rest for the ark of our Father's covenant, the footstool for his feet, and I prepared to build it. ಆಗ ಅರಸನಾದ ದಾವೀದನು ಎದ್ದು ನಿಂತು, “ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ. ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ನಿಮಿತ್ತವಾಗಿಯೂ, ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಗೆ ಆಲಯವನ್ನು ನಾನು ಕಟ್ಟಿಸಲು ಮನಸ್ಸು ಮಾಡಿ, ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.
3 But our Father told me, 'You won't build a house for my name, because you're a man of war who has shed blood.' ಆಗ ದೇವರು ನನಗೆ, ‘ನೀನು ಮಹಾ ಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.
4 Yet our Father of Israel chose me, from my whole father's house, to reign over Israel forever. For our Father chose Judah to lead, and within Judah's house, chose my father's house; and of my father's sons he delighted to make me king over all Israel. “ಆದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರೊಳಗಿಂದ ನನ್ನನ್ನು ಆರಿಸಿಕೊಂಡರು. ಏಕೆಂದರೆ ಅವನು ನಾಯಕನಾಗಿರಲು ಯೆಹೂದ ಗೋತ್ರವನ್ನೂ, ಯೆಹೂದ ಗೋತ್ರದಿಂದ ನನ್ನ ಕುಟುಂಬವನ್ನೂ ಆದುಕೊಂಡು, ನನ್ನ ತಂದೆಯ ಪುತ್ರರಲ್ಲಿ ನನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಲು ಚಿತ್ತವುಳ್ಳವರಾಗಿದ್ದರು.
5 Of all my sons—our Father has given me many—he chose Solomon my son to sit on the throne of our Father's kingdom over Israel. ಯೆಹೋವ ದೇವರು ನನಗೆ ಅನೇಕ ಪುತ್ರರನ್ನು ಕೊಟ್ಟಿರುವಾಗ, ನನ್ನ ಸಮಸ್ತ ಪುತ್ರರಲ್ಲಿ ಇಸ್ರಾಯೇಲಿನ ಮೇಲಿಗಾಗಿ, ಯೆಹೋವ ದೇವರ ರಾಜ್ಯದ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೆ ನನ್ನ ಮಗ ಸೊಲೊಮೋನನನ್ನು ಆದುಕೊಂಡರು.
6 He told me, 'Solomon your son will build my house and my courts, for I chose him as my son, and I will be his father.' ಇದಲ್ಲದೆ ದೇವರು ನನಗೆ, ‘ನಿನ್ನ ಮಗ ಸೊಲೊಮೋನನು ತಾನೇ ನನ್ನ ಆಲಯವನ್ನೂ, ನನ್ನ ಅಂಗಳಗಳನ್ನೂ ಕಟ್ಟಿಸುವನು. ಏಕೆಂದರೆ ಅವನನ್ನು ನನಗೆ ಮಗನಾಗಿರಲು ಆಯ್ದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
7 I will establish his kingdom forever if he stays firm to keep my commands and judgments, as he does today. ಈ ಹೊತ್ತಿನ ಹಾಗೆ ನನ್ನ ಆಜ್ಞೆಗಳನ್ನೂ, ನನ್ನ ನ್ಯಾಯಗಳನ್ನೂ ಅವನು ನಡೆಸಲು ದೃಢನಾಗಿದ್ದರೆ, ಅವನ ರಾಜ್ಯವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದರು.
8 "So now, before all Israel, the assembly of our Father, and in his hearing, keep and seek out every command of your Father, so you may possess this good land and leave it to your children after you forever. “ಆದ್ದರಿಂದ ನೀವು ಈ ಉತ್ತಮ ದೇಶವನ್ನು ಸ್ವಾಧೀನಮಾಡಿಕೊಂಡು, ಅದನ್ನು ನಿರಂತರದಲ್ಲಿ ನಿಮ್ಮ ತರುವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ, ಯೆಹೋವ ದೇವರ ಸಭೆಯಾದ ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿಯೂ, ನಮ್ಮ ದೇವರು ಕೇಳಿಸುವಂತೆ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಗೊಳ್ಳಿರಿ ಎಂದು ಎಚ್ಚರಿಸುತ್ತೇನೆ.
9 You, Solomon my son, know the God of your father, and serve him with a whole heart and willing mind—our Father searches every heart, understands every plan and thought. Seek him and you'll find him; abandon him and he'll reject you forever. “ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.
10 Take note, since our Father chose you to build a house for the sanctuary. Be strong, act." ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು.
11 David gave Solomon his son the plan of the portico of the temple, its buildings, its storerooms, its upper rooms, its inner rooms, and the room of the mercy seat, ಆಗ ದಾವೀದನು ತನ್ನ ಮಗ ಸೊಲೊಮೋನನಿಗೆ, “ದ್ವಾರಾಂಗಳದ ಮಾದರಿಯನ್ನೂ, ಅದರ ಮನೆಗಳು, ಅದರ ಉಗ್ರಾಣಗಳು, ಅದರ ಮೇಲಿನ ಕೊಠಡಿಗಳು, ಅದರ ಅಂತರಂಗದ ಕೊಠಡಿಗಳು, ಕರುಣಾಸನದ ಸ್ಥಾನವು,
12 and the plan of all he had in mind for the courts of our Father's house, for all the surrounding rooms, for the storerooms of his house, and for the storerooms of the dedicated gifts; ಯೆಹೋವ ದೇವರ ಮನೆಯ ಅಂಗಳಗಳು, ಸುತ್ತಲಿರುವ ಕೊಠಡಿಗಳಾದ ಯೆಹೋವ ದೇವರ ಮನೆಯ ಉಗ್ರಾಣಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿಯನ್ನೂ ಕೊಟ್ಟನು.
13 for the divisions of the priests and Levites, for all the work of service in our Father's house, and all the vessels for service in his house. ಇದಲ್ಲದೆ ಯಾಜಕರ, ಲೇವಿಯರ ವರ್ಗಗಳಿಗೋಸ್ಕರವೂ, ಯೆಹೋವ ದೇವರ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಯೆಹೋವ ದೇವರ ಮನೆಯಲ್ಲಿರುವ ಸೇವೆ ಮಾಡುವ ಸಮಸ್ತ ಪಾತ್ರೆಗಳಿಗೋಸ್ಕರವೂ ಸೂಚನೆಗಳನ್ನು ಕೊಟ್ಟನು.
14 He gave gold by weight for each gold article for every kind of service, and silver by weight for each silver article for every kind of service. ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಲಕರಣೆಗಳಿಗೋಸ್ಕರ ಬಂಗಾರವನ್ನೂ, ಸಕಲ ವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿಕೊಟ್ಟನು.
15 The weight for the gold lampstands and their gold lamps, the weight of gold for each gold lampstand and its lamps, and the weight of silver for each silver lampstand and its lamps, according to each lampstand's use. ಹೇಗೆಂದರೆ, ಬಂಗಾರದ ದೀಪಸ್ತಂಭಗಳಿಗೋಸ್ಕರವೂ, ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕವಾಗಿ ತೂಗಿಕೊಟ್ಟನು. ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪಸ್ತಂಭಕ್ಕೂ, ಅದರ ದೀಪಗಳಿಗೂ ಒಂದೊಂದು ದೀಪಸ್ತಂಭದ ಕೆಲಸದ ಪ್ರಕಾರ ಅಳತೆಮಾಡಿ ತೂಗಿಕೊಟ್ಟನು.
16 Gold's weight for each table of the bread of the Presence; and silver for the silver tables. ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು. ಬೆಳ್ಳಿಯ ಮೇಜುಗಳಿಗೋಸ್ಕರ ಬೆಳ್ಳಿಯನ್ನು ತೂಗಿಕೊಟ್ಟನು.
17 The forks, basins, and pitchers of pure gold; the weight for each gold dish; the weight for each silver dish; ಅದೇ ಪ್ರಕಾರ ಮುಳ್ಳುಗಳೂ, ಪಾತ್ರೆಗಳೂ, ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿಗೋಸ್ಕರ, ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ; ಬೆಳ್ಳಿಯ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಕೊಟ್ಟನು.
18 refined gold by weight for the incense altar; gold for the design of the chariot—the cherubim spreading their wings and covering the ark of the covenant of our Father. ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ, ರೆಕ್ಕೆಗಳನ್ನೂ ಚಾಚಿಕೊಂಡು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.
19 "All this," David said, "I have in writing from our Father's hand, who gave me understanding of all the plan's details." “ಯೆಹೋವ ದೇವರು ತಮ್ಮ ಕೈಯನ್ನು ನನ್ನ ಮೇಲೆ ಇರಿಸಿ, ಈ ಯೋಜನೆಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದರು,” ಎಂದರು.
20 David told his son Solomon, "Be strong and courageous; do the work. Don't fear or be discouraged, for my Father is with you. He won't fail or abandon you until all the work for the service of the house of our Father is finished. ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.
21 Look—the priests and Levites are divided, ready for all the service of our Father's house. Every skilled, willing man will join you in any task, with the officials and all the people, fully at your command." ಇಗೋ, ಯೆಹೋವ ದೇವರ ಆಲಯದ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲಸಕ್ಕೂ, ಎಲ್ಲಾ ವಿಧವಾದ ಸೇವೆಗೂ, ಸಿದ್ಧ ಮನಸ್ಸುಳ್ಳಂಥ ಜಾಣತನದಿಂದ ಕೆಲಸ ಮಾಡುವವರು ನಿನ್ನ ಸಂಗಡ ಇದ್ದಾರೆ. ಇದಲ್ಲದೆ ಪ್ರಧಾನರೂ, ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ವಿಧೇಯರಾಗಿರುವರು.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]