Skip to content
The Believer's Library

Biblica® Open Kannada Contemporary Version 2022

1 Chronicles 5 OKCV

Show OKCV only
Verse × ×
1 The sons of Reuben, Israel's firstborn—he was indeed the firstborn, but since he violated his father's bed, his birthright went to the sons of Joseph son of Israel, so he could not be listed as the firstborn in the genealogy. ಇಸ್ರಾಯೇಲಿನ ಚೊಚ್ಚಲಮಗನಾದ ರೂಬೇನನ ಪುತ್ರರು ಇವರು: ಅವನು ಚೊಚ್ಚಲ ಮಗನಾಗಿದ್ದನು. ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರ ಮಾಡಿದ್ದರಿಂದ ಅವನ ಚೊಚ್ಚಲುತನದ ಹಕ್ಕು ಇಸ್ರಾಯೇಲಿನ ಮಗ ಯೋಸೇಫನ ಪುತ್ರರಿಗೆ ಕೊಡಲಾಗಿತ್ತು. ಆದ್ದರಿಂದ ಈ ವಂಶಾವಳಿಯು ಚೊಚ್ಚಲುತನದ ಪ್ರಕಾರ ಬರೆದಿರುವುದಿಲ್ಲ.
2 Though Judah grew strong among his brothers and a ruler came from him, the birthright was Joseph's. ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.
3 The sons of Reuben the firstborn of Israel: Hanoch, Pallu, Hezron, and Carmi. ಇಸ್ರಾಯೇಲಿನ ಚೊಚ್ಚಲ ಮಗ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನನು, ಕರ್ಮೀ.
4 The sons of Joel: Shemaiah his son, Gog his son, Shimei his son, ಯೋಯೇಲನ ವಂಶಜರು: ಅವನ ಮಗ ಶೆಮಾಯನು; ಅವನ ಮಗ ಗೋಗನು; ಅವನ ಮಗ ಶಿಮ್ಮೀಯಿ.
5 Micah his son, Reaiah his son, Baal his son, ಅವನ ಮಗ ಮೀಕಾಯನು; ಅವನ ಮಗ ರೆವಾಯನು, ಅವನ ಮಗ ಬಾಳನು.
6 and Beerah his son, whom Tiglath-pileser king of Assyria exiled—he led the Reubenites. ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರಿನಿಂದ ಸೆರೆಯಾಗಿ ಒಯ್ದ ಅವನ ಮಗ ಬೇರನು; ಅವನೇ ರೂಬೇನ್ಯರಲ್ಲಿ ನಾಯಕನಾಗಿದ್ದನು.
7 His relatives by their clans, as listed in the genealogical records: Jeiel the chief, Zechariah, ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾವಳಿಯನ್ನು ಲೆಕ್ಕಿಸಿದ ಅವನ ಮುಖ್ಯಸ್ಥರು ಯಾರೆಂದರೆ, ಯೆಹಿಯೇಲ್, ಜೆಕರ್ಯ,
8 and Bela son of Azaz, son of Shema, son of Joel. They settled in Aroer, to Nebo and Baal-meon. ಅಜಾಜನ ಮಗನೂ ಶೆಮಯನ ಮಗನೂ ಯೋಯೇಲನ ಮಗನೂ ಆದ ಬೆಳ. ಇವರು ಅರೋಯೇರು ಮೊದಲ್ಗೊಂಡು ನೆಬೋ, ಬಾಳ್ ಮೆಯೋನ್ ಎಂಬ ಸ್ಥಳಗಳವರೆಗೂ ವಾಸವಾಗಿದ್ದರು.
9 They also settled eastward to the edge of the desert that stretches to the Euphrates, since their livestock had multiplied in Gilead. ಗಿಲ್ಯಾದಿನ ದೇಶದಲ್ಲಿ ಅವನ ಪಶುಗಳು ಹೆಚ್ಚಾದುದರಿಂದ, ಅವನು ಪೂರ್ವದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲ್ಗೊಂಡು ಮರುಭೂಮಿಯ ಪ್ರದೇಶದವರೆಗೂ ವಾಸವಾಗಿದ್ದನು.
10 In Saul's days they fought the Hagrites, who fell to them; they lived in the Hagrites' tents across the whole region east of Gilead. ಸೌಲನ ದಿವಸಗಳಲ್ಲಿ ರೂಬೇನ್ ವಂಶದವರು ಹಗ್ರೀಯರ ಸಂಗಡ ಯುದ್ಧಮಾಡಿ, ಅವರ ಕೈಯಲ್ಲಿ ಸೋತುಹೋದರು. ರೂಬೇನ್ ವಂಶದವರು ಗಿಲ್ಯಾದಿನ ಸಮಸ್ತ ಪೂರ್ವ ದಿಕ್ಕಿನಾದ್ಯಂತ ಹಗ್ರೀಯರ ವಾಸಸ್ಥಾನಗಳನ್ನು ಆಕ್ರಮಿಸಿಕೊಂಡರು.
11 The sons of Gad lived next to them in the land of Bashan as far as Salcah: ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದವರೆಗೂ ವಾಸವಾಗಿದ್ದರು.
12 Joel the chief, Shapham the second-in-command, then Janai and Shaphat in Bashan. ಬಾಷಾನಿನಲ್ಲಿ ಮುಖ್ಯನಾದವನು ಯೋಯೇಲನು, ಎರಡನೆಯವನು ಶಾಫಾಮನು, ಅನಂತರ ಯನ್ನೈ, ಶಾಫಾಟನು.
13 Their relatives, by their fathers' households, were Michael, Meshullam, Sheba, Jorai, Jacan, Zia, and Eber—seven. ಕುಟುಂಬಗಳಾಗಿ ಅವರ ಬಂಧುಗಳು: ಮೀಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈನು, ಯಕ್ಕಾನನು, ಜೀಯನು, ಏಬೆರನು; ಒಟ್ಟು ಏಳುಮಂದಿ.
14 These were sons of Abihail son of Huri, son of Jaroah, son of Gilead, son of Michael, son of Jeshishai, son of Jahdo, son of Buz. ಇವರು ಹೂರಿಯ ಮಗ ಅಬೀಹೈಲನ ಪುತ್ರರು: ಈ ಹೂರೀಯು ಯಾರೋಹನ ಮಗನು, ಅವನು ಗಿಲ್ಯಾದನ ಮಗನು, ಅವನು ಮೀಕಾಯೇಲನ ಮಗನು, ಅವನು ಯೆಷೀಷೈಯನ ಮಗನು, ಅವನು ಯಹ್ದೋವಿನ ಮಗನು, ಅವನು ಬೂಜನ ಮಗನು.
15 Ahi son of Abdiel, son of Guni, was the head of their fathers' households. ಅಬ್ದಿಯೇಲನ ಮಗನೂ ಗೂನೀಯ ಮೊಮ್ಮಗನೂ ಆದ ಅಹೀಯು ಈ ಗೋತ್ರದ ಮುಖ್ಯಸ್ಥನು.
16 They lived in Gilead, in Bashan and its villages, and across all Sharon's pasturelands to their borders. ಅವರು ಗಿಲ್ಯಾದಿನಲ್ಲಿರುವ ಬಾಷಾನಿನಲ್ಲಿಯೂ, ಅವರ ಊರುಗಳಲ್ಲಿಯೂ, ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.
17 All these were listed in genealogies during the reigns of Jotham king of Judah and Jeroboam king of Israel. ಇವರೆಲ್ಲರು ಯೆಹೂದದ ಅರಸನಾದ ಯೋತಾಮನ ದಿವಸಗಳಲ್ಲಿಯೂ, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ಲಿಖಿತರಾದರು.
18 The Reubenites, Gadites, and half-tribe of Manasseh had capable men bearing shield and sword, drawing the bow, trained for war—44,760 ready for battle. ರೂಬೇನ್ಯರಲ್ಲಿಯೂ, ಗಾದ್ಯರಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ, ಗುರಾಣಿಯನ್ನೂ, ಖಡ್ಗವನ್ನೂ ಹಿಡಿಯುವುದಕ್ಕೆ ಬಿಲ್ಲೆಸೆಯುವುದಕ್ಕೆ ಯುದ್ಧದಲ್ಲಿ ಪ್ರವೀಣರಾದ ಪರಾಕ್ರಮಶಾಲಿಗಳಾದ ಯುದ್ಧಕ್ಕೆ ಹೊರಡುವವರು 44,760 ಮಂದಿಯಾಗಿದ್ದರು.
19 They waged war against the Hagrites, and against Jetur, Naphish, and Nodab. ಇವರು ಹಗ್ರೀಯರಾದ ಯೆಟೂರನು, ನಾಫೀಷನು, ನೊದಾಬನು ಎಂಬವರ ವಿರುದ್ಧ ಯುದ್ಧಮಾಡಿದರು.
20 They were helped against them; the Hagrites and all their allies were given into their hand, because they cried out to our Father in battle. He answered them, for they trusted in him. ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.
21 They captured the Hagrites' livestock: 50,000 camels, 250,000 sheep, 2,000 donkeys, and 100,000 people. ಅವರು ವೈರಿಗಳಿಂದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಐವತ್ತು ಸಾವಿರ ಒಂಟೆಗಳನ್ನು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳನ್ನು, ಎರಡು ಸಾವಿರ ಕತ್ತೆಗಳನ್ನು ಅಲ್ಲದೆ, ಒಂದು ಲಕ್ಷ ಜನರನ್ನು ಯುದ್ಧ ಕೈದಿಗಳನ್ನಾಗಿ ಸೆರೆಹಿಡಿದರು.
22 Many fell dead, for the battle was our Father's; they lived there until the exile. ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.
23 Manasseh's half-tribe lived in the land, growing numerous from Bashan to Baal-hermon, Senir, and Mount Hermon. ಮನಸ್ಸೆಯ ಅರ್ಧ ಗೋತ್ರದ ಜನರು ದೇಶದಲ್ಲಿ ವಾಸಮಾಡಿ, ಬಾಷಾನ್ ಮೊದಲುಗೊಂಡು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಬೆಟ್ಟದವರೆಗೂ ಹಬ್ಬಿಕೊಂಡರು.
24 Heads of their fathers' households: Epher, Ishi, Eliel, Azriel, Jeremiah, Hodaviah, and Jahdiel—mighty warriors, famous men, heads of their fathers' households. ಅವರ ಪಿತೃಗಳ ಮನೆಯಲ್ಲಿರುವ ಯಜಮಾನರು ಯಾರೆಂದರೆ: ಏಫೆರ್, ಇಷ್ಷೀ, ಎಲೀಯೇಲ್, ಅಜ್ರಿಯೇಲ್, ಯೆರೆಮೀಯ, ಹೋದವ್ಯ, ಯೆಹ್ತೀಯೇಲ್. ಇವರು ಪರಾಕ್ರಮಶಾಲಿಗಳಾಗಿಯೂ, ಹೆಸರುಗೊಂಡವರಾಗಿಯೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರಾಗಿಯೂ ಇದ್ದರು.
25 But they were unfaithful to their ancestors' God and prostituted themselves to the gods of the land's peoples, whom our Father had destroyed before them. ಆದರೆ ಅವರು ತಮ್ಮ ಪಿತೃಗಳ ದೇವರಿಗೆ ದ್ರೋಹಿಗಳಾಗಿದ್ದರು. ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.
26 So our Father of Israel stirred up the spirit of Pul king of Assyria—Tiglath-pileser king of Assyria—and he exiled the Reubenites, Gadites, and half-tribe of Manasseh to Halah, Habor, Hara, and the river Gozan, where they remain to this day. ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]