Skip to content
The Believer's Library

Biblica® Open Kannada Contemporary Version 2022

1 Chronicles 9 OKCV

Show OKCV only
Verse × ×
1 All Israel was registered by genealogy, recorded in the Book of the Kings of Israel. And Judah was exiled to Babylon for their unfaithfulness. ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.
2 The first to resettle their own property in their cities were Israel, the priests, the Levites, and the temple servants. ತಮ್ಮ ಸ್ವಾಸ್ತ್ಯಗಳಲ್ಲಿ, ತಮ್ಮ ಪಟ್ಟಣಗಳಲ್ಲಿ ಮೊದಲು ವಾಸವಾಗಿದ್ದವರಲ್ಲಿ ಕೆಲವರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ ಮತ್ತು ದೇವಾಲಯದ ಸೇವಕರೂ ಆಗಿದ್ದರು.
3 And in Jerusalem lived some of the people of Judah, of Benjamin, and of Ephraim and Manasseh: ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ, ಬೆನ್ಯಾಮೀನನ ಮಕ್ಕಳೂ, ಎಫ್ರಾಯೀಮ್, ಮನಸ್ಸೆ ಎಂಬವರ ಮಕ್ಕಳು ಯಾರೆಂದರೆ:
4 Uthai son of Ammihud son of Omri son of Imri son of Bani, of the sons of Perez son of Judah. ಯೆಹೂದನ ಮಗನಾದ ಪೆರೆಚನ ಮಕ್ಕಳಲ್ಲಿ ಒಬ್ಬನಾದ ಬಾನೀಯ ಮಗನಾದ ಇಮ್ರಿಯು, ಇವನ ಮಗನಾದ ಒಮ್ರಿ, ಇವನ ಮಗನು ಅಮ್ಮೀಹೂದನು, ಇವನ ಮಗನು ಉತೈ.
5 And of the Shilonites: Asaiah the firstborn, and his sons. ಶೇಲಾಹನರಲ್ಲಿ ಚೊಚ್ಚಲಮಗನಾದ ಅಸಾಯನು, ಅವನ ಪುತ್ರರು.
6 From Zerah's sons: Jeuel and their relatives, 690. ಜೆರಹನ ಪುತ್ರರಲ್ಲಿ ಯೆಯೂವೇಲನೂ, ಅವನ ಸಹೋದರರೂ 690 ಮಂದಿ.
7 And of Benjamin's sons: Sallu son of Meshullam, son of Hodaviah, son of Hassenuah, ಬೆನ್ಯಾಮೀನ್ಯರಲ್ಲಿ ಹಸ್ಸೆನುವಾಹನ ಮಗನು ಹೋದವ್ಯನ ಮಗನು ಮೆಷುಲ್ಲಾಮನ ಮಗ ಸಲ್ಲು,
8 Ibneiah son of Jeroham; Elah son of Uzzi son of Michri; Meshullam son of Shephatiah son of Reuel son of Ibnijah, ಯೆರೋಹಾಮನ ಮಗ ಇಬ್ನೇಯಾಹನೂ; ಮಿಕ್ರಿಯ ಮಗ ಉಜ್ಜೀಯ ಮಗ ಏಲಾನೂ; ಇಬ್ನಿಯನ ಮಗ ರೆಯೂವೇಲನ ಮಗ, ಶೆಫಟ್ಯನ ಮಗ ಮೆಷುಲ್ಲಾಮನೂ,
9 and their relatives, listed by family line, 956. All these were heads of their ancestral families. ಅವರ ಸಹೋದರರೂ ತಮ್ಮ ವಂಶಗಳ ಪ್ರಕಾರ 956 ಮಂದಿ. ಇವರೆಲ್ಲರು ತಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದರು.
10 And of the priests: Jedaiah, Jehoiarib, Jachin, ಯಾಜಕರಲ್ಲಿ ಯಾರೆಂದರೆ ಯೆದಾಯನೂ, ಯೆಹೋಯಾರೀಬನೂ, ಯಾಕೀನನೂ;
11 and Azariah son of Hilkiah, son of Meshullam, son of Zadok, son of Meraioth, son of Ahitub, chief officer of our Father's house. ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗ ಮೆರಾಯೋತನ ಮಗ ಚಾದೋಕನ ಮಗ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;
12 Adaiah son of Jeroham, of Pashhur, of Malchijah; and Maasai son of Adiel, of Jahzerah, of Meshullam, of Meshillemith, of Immer; ಮಲ್ಕೀಯನ ಮಗ ಪಷ್ಹೂರನ ಮಗ ಯೆರೋಹಾಮನ ಮಗ ಅದಾಯನು. ಇಮ್ಮೇರನ ಮಗ ಮೆಷಿಲ್ಲೇಮೋತನ ಮಗ ಮೆಷುಲ್ಲಾಮನ ಮಗ ಯಹ್ಜೇರನ ಮಗ ಅದೀಯೇಲನ ಮಗ ಮಾಸೈಯನೂ;
13 and their relatives—heads of their families—1,760, capable men for serving in the house of our Father. ಅವರ ಸಹೋದರರೂ ತಮ್ಮ ಕುಟುಂಬಗಳಲ್ಲಿ ಯಜಮಾನರು 1,760 ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿಗಳಾಗಿದ್ದರು.
14 Of the Levites: Shemaiah son of Hasshub, son of Azrikam, son of Hashabiah, of the sons of Merari, ಲೇವಿಯರಲ್ಲಿ ಯಾರೆಂದರೆ: ಮೆರಾರೀಯ ಪುತ್ರರಲ್ಲಿ ಒಬ್ಬನಾದ ಹಷ್ಷೂಬನ ಮಗ ಅಜ್ರೀಕಾಮನ ಮಗ ಹಷಬ್ಯನ ಮಗ ಶೆಮಾಯನೂ;
15 and Bakbakkar, Heresh, Galal, and Mattaniah son of Mica, son of Zichri, son of Asaph; ಬಕ್ಬಕ್ಕರನೂ, ಹೆರೆಷನೂ, ಗಲಾಲನೂ, ಆಸಾಫನ ಮಗ, ಜಿಕ್ರಿಯ ಮಗ, ಮೀಕನ ಮಗ ಮತ್ತನ್ಯನೂ;
16 and Obadiah son of Shemaiah, son of Galal, son of Jeduthun, and Berechiah son of Asa, son of Elkanah, who lived in the villages of the Netophathites. ಯೆದುತೂನನ ಮಗ, ಗಲಾಲನ ಮಗ, ಶೆಮಾಯನ ಮಗ, ಓಬದ್ಯನೂ; ಎಲ್ಕಾನನ ಮಗ ಆಸನ ಮಗ ಬೆರೆಕ್ಯನೂ ಇವರು ನೆಟೋಫದವರ ಊರುಗಳಲ್ಲಿ ವಾಸವಾಗಿದ್ದರು.
17 The gatekeepers: Shallum, Akkub, Talmon, Ahiman, and their relatives; Shallum was chief. ದ್ವಾರಪಾಲಕರು ಯಾರೆಂದರೆ: ಶಲ್ಲೂಮನೂ, ಅಕ್ಕೂಬನೂ, ಟಲ್ಮೋನನೂ, ಅಹೀಮನ್‌ನೂ, ಅವರ ಸಹೋದರರೂ. ಅವರಲ್ಲಿ ಶಲ್ಲೂಮನು ಮುಖ್ಯಸ್ಥನಾಗಿದ್ದನು.
18 To this day they stand at the King's Gate, on the east side. These were the gatekeepers of the Levite camps. ಇವರು ಈವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲಲ್ಲಿ ಕಾದುಕೊಂಡಿದ್ದರು. ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.
19 Shallum son of Kore, of Ebiasaph, of Korah, and his relatives of his father's house, the Korahites, oversaw the work of service, guarding the tent's thresholds; their fathers oversaw the camp of our Father, guarding the entrance. ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮೊಮ್ಮಗನೂ ಕೋರೇಯನ ಮರಿಮಗನಾದ ಶಲ್ಲೂಮನೂ, ಅವನ ತಂದೆಯ ಮನೆಯವರಾಗಿರುವ ತನ್ನ ಸಹೋದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲಿದ್ದು, ದೇವದರ್ಶನ ಗುಡಾರದ ಬಾಗಿಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಯೆಹೋವ ದೇವರ ಗುಡಾರದ ದ್ವಾರಗಳ ಕಾವಲಿನವರಾಗಿದ್ದರು.
20 Phinehas son of Eleazar was leader over them formerly; our Father was with him. ಎಲಿಯಾಜರನ ಮಗನಾದ ಫೀನೆಹಾಸನು ಮುಂಚೆ ಅವರ ಮೇಲೆ ಅಧಿಕಾರಿಯಾಗಿದ್ದನು. ಯೆಹೋವ ದೇವರು ಅವರ ಸಂಗಡ ಇದ್ದರು.
21 Zechariah the son of Meshelemiah was gatekeeper at the entrance of the tent of meeting. ಮೆಷೆಲೆಮ್ಯನ ಮಗನಾದ ಜೆಕರ್ಯನು ದೇವದರ್ಶನ ಗುಡಾರದ ದ್ವಾರಪಾಲಕನಾಗಿದ್ದನು.
22 All of them, chosen as gatekeepers of the gates, numbered 212, registered by genealogy in their villages. David and Samuel the seer had appointed them to this trusted office. ಬಾಗಿಲುಗಳಲ್ಲಿ ದ್ವಾರಪಾಲಕರಾಗಿರಲು ಆಯ್ಕೆಯಾದ ಇವರೆಲ್ಲರು 212 ಮಂದಿಯಾಗಿದ್ದರು. ಇವರು ಹೆಸರುಗಳು ಅವರವರ ಗ್ರಾಮಗಳಲ್ಲಿ ಅವರ ವಂಶಾವಳಿಯ ಪ್ರಕಾರ ಲಿಖಿತವಾಗಿದ್ದವು. ಇವರು ನಂಬಿಗಸ್ತರಾದ್ದರಿಂದ ದಾವೀದನೂ, ದರ್ಶಿಯಾದ ಸಮುಯೇಲನೂ ಇವರನ್ನು ಜವಾಬ್ದಾರಿಯ ಸ್ಥಾನಗಳಿಗೆ ನೇಮಿಸಿದರು.
23 They and their sons guarded the gates of the house of our Father, the house of the tent, as guards. ಹೀಗೆಯೇ ಅವರಿಗೂ, ಅವರ ಮಕ್ಕಳಿಗೂ ಯೆಹೋವ ದೇವರ ಮನೆಯ ಬಾಗಿಲು ಕಾವಲಿತ್ತು. ಅದು ದೇವದರ್ಶನ ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರರಿಂದ ಕಾಯಬೇಕಾಗಿತ್ತು.
24 The gatekeepers were posted on the four sides: east, west, north, and south. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.
25 Their relatives in their villages were to come every seven days, from time to time, to be with them. ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು.
26 The four chief gatekeepers, Levites, were entrusted with the chambers and treasuries of the house of our Father. ಏಕೆಂದರೆ ದ್ವಾರಪಾಲಕರಲ್ಲಿರುವ ನಾಲ್ಕು ಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯದ ಉಗ್ರಾಣಗಳ ಮೇಲೆಯೂ ಬೊಕ್ಕಸಗಳ ಜವಾಬ್ದಾರಿಯನ್ನು ವಹಿಸಲಾಗಿತ್ತು.
27 They stayed the night around our Father's house, since the guard duty was theirs, and the opening, morning by morning. ಅವರು ದೇವರ ಆಲಯದ ಸುತ್ತಲೂ ರಾತ್ರಿಯನ್ನು ಕಳೆಯುತ್ತಿದ್ದರು, ಏಕೆಂದರೆ ಅವರು ಅದನ್ನು ಕಾವಲು ಕಾಯಬೇಕಾಗಿತ್ತು. ಮತ್ತು ಪ್ರತಿದಿನ ಬೆಳಿಗ್ಗೆ ಬಾಗಿಲುಗಳನ್ನು ತೆರೆಯುತ್ತಿದ್ದರು.
28 Some were in charge of the service vessels, counting them in and out. ಸೇವೆಯ ಸಲಕರಣೆಗಳನ್ನು ಒಳಗೆ ಲೆಕ್ಕದ ಪ್ರಕಾರ ತರುವುದಕ್ಕೂ, ಹೊರಗೆ ಲೆಕ್ಕದ ಪ್ರಕಾರ ತರುವುದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು.
29 Others were in charge of the furnishings, sacred utensils, fine flour, wine, oil, incense, and spices. ಅವರಲ್ಲಿ ಕೆಲವರು ಸಲಕರಣೆಗಳನ್ನೂ, ಪರಿಶುದ್ಧ ಸ್ಥಾನದಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ, ನಯವಾದ ಹಿಟ್ಟನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಸಾಂಬ್ರಾಣಿಯನ್ನೂ, ಸುಗಂಧಗಳನ್ನೂ ಕಾಯಲು ನೇಮಕರಾಗಿದ್ದರು.
30 And some of the priests' sons blended the spices. ಯಾಜಕರ ಪುತ್ರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.
31 Mattithiah, one of the Levites, firstborn of Shallum the Korahite, was in charge of baking the flat cakes. ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ಲೇವಿಯರಲ್ಲಿ ಒಬ್ಬನಾಗಿದ್ದು, ತಟ್ಟೆಗಳ ಮೇಲೆ ಮಾಡುವ ಭಕ್ಷ್ಯಗಳ ಕೆಲಸದ ಮೇಲ್ವಿಚಾರಕನಾಗಿದ್ದನು.
32 Some Kohathite relatives were responsible for preparing the rows of bread every Sabbath. ಕೊಹಾತ್ಯರ ಪುತ್ರರಾದ ಅವರ ಸಹೋದರರಲ್ಲಿ ಇನ್ನೂ ಕೆಲವರು ಸಮ್ಮುಖದ ರೊಟ್ಟಿಯನ್ನು ಪ್ರತಿ ಸಬ್ಬತ್ ದಿನದಲ್ಲಿ ಸಿದ್ಧಮಾಡುವ ಜವಾಬ್ದಾರಿಯನ್ನು ಹೊಂದಿದ್ದರು.
33 These singers, heads of Levite families, stayed in the temple chambers, exempt from other duties—on duty day and night. ಇದಲ್ಲದೆ ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು, ಸ್ವತಂತ್ರವಾದ ಕೊಠಡಿಗಳಲ್ಲಿ ವಾಸವಾಗಿದ್ದರು. ಏಕೆಂದರೆ ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
34 These were heads of Levite families, leaders listed by family line; and they lived in Jerusalem. ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
35 In Gibeon lived Jeiel the father of Gibeon, and the name of his wife was Maacah, ಇದಲ್ಲದೆ ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
36 and his firstborn son was Abdon, then Zur, Kish, Baal, Ner, Nadab, ಅವನ ಚೊಚ್ಚಲ ಮಗನು ಅಬ್ದೋನನು ನಂತರ ಚೂರನು, ಕೀಷನು, ಬಾಳನು, ನೇರನು, ನಾದಾಬನು.
37 Gedor, Ahio, Zechariah, and Mikloth. ಗೆದೋರನು, ಅಹಿಯೋನು, ಜೆಕರೀಯನು, ಮಿಕ್ಲೋತನು.
38 Mikloth fathered Shimeam; they too lived with their relatives in Jerusalem, opposite their relatives. ಮಿಕ್ಲೋತನು ಶಿಮಾಮನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ತಮ್ಮ ಸಹೋದರರ ಸಂಗಡ ವಾಸವಾಗಿದ್ದರು.
39 And Ner fathered Kish, Kish fathered Saul, and Saul fathered Jonathan, Malchi-shua, Abinadab, and Esh-baal. ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು.
40 And the son of Jonathan was Merib-baal, and Merib-baal fathered Micah. ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ಮೀಕನನ್ನು ಪಡೆದನು.
41 The sons of Micah: Pithon, Melech, Tahrea, and Ahaz. ಮೀಕನ ಪುತ್ರರು: ಪಿತೋನನು, ಮೇಲಕನು, ತಹ್ರೀಯನು ಮತ್ತು ಆಹಾಜನು.
42 And Ahaz fathered Jarah, and Jarah fathered Alemeth, Azmaveth, and Zimri; and Zimri fathered Moza. ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ, ಅಜ್ಮಾವೆತನನ್ನೂ, ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು;
43 And Moza fathered Binea, and Rephaiah was his son, Eleasah his son, and Azel his son. ಮೋಚನು ಬಿನ್ನನನ್ನು ಪಡೆದನು; ಅವನ ಮಗನು ರೆಫಾಯನು; ಅವನ ಮಗನು ಎಲ್ಲಾಸನು; ಅವನ ಮಗನು ಆಚೇಲನು.
44 Azel had six sons, named Azrikam, Bocheru, Ishmael, Sheariah, Obadiah, and Hanan—these were Azel's sons. ಈ ಆಚೇಲನಿಗೆ ಆರು ಮಂದಿ ಪುತ್ರರಿದ್ದರು: ಅವರ ಹೆಸರುಗಳು ಅಜ್ರೀಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು; ಇವರೆಲ್ಲರು ಆಚೇಲನ ಪುತ್ರರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]