Skip to content
The Believer's Library

Biblica® Open Kannada Contemporary Version 2022

1 John 1 OKCV

Show OKCV only
Verse × ×
1 What was from the beginning, what we heard, what we saw with our own eyes, what we gazed on and touched with our hands—this we announce about the Word of life, Jesus. ಆದಿಯಿಂದ ಇರುವಂಥದ್ದೂ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದ ಆ ಜೀವವಾಕ್ಯವನ್ನೇ ಸಾರುತ್ತಿದ್ದೇವೆ.
2 The life appeared; we saw it, testify to it, and proclaim to you the eternal life that was with our Father and appeared to us. ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ.
3 What we have seen and heard we proclaim to you too, so you may share deep communion with us—our deep communion is with our Father and his Son, Jesus Christ. ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.
4 And we are writing these things so that our joy may be complete. ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ.
5 This is what we heard from him and tell you: our Father is light—no darkness in him at all. ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ.
6 If we say we have communion with him yet walk in the darkness, we lie and don't live the truth. ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ.
7 But if we walk in the light, as he is in the light, we share fellowship with each other, and the blood of his Son Jesus cleanses us from every sin. ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
8 If we claim to be without sin, we deceive ourselves and the truth is not in us. ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
9 If we confess our sins, our Father is faithful and just to forgive us our sins and cleanse us from all wrongdoing. ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
10 If we say we have not sinned, we make him a liar, and his word is not in us. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ. ಅವರ ವಾಕ್ಯವು ನಮ್ಮಲ್ಲಿ ಬಾಳುವುದಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]