Skip to content
The Believer's Library

Biblica® Open Kannada Contemporary Version 2022

1 John 3 OKCV

Show OKCV only
Verse × ×
1 See what kind of love our Father has given us, that we should be called children of our Father! And we are. The world doesn't know us because it didn't know him. ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.
2 Beloved, we are our Father's children now; what we will become has not yet been shown. But we know that when he appears, we will be like him, since we will see him as he is. ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.
3 And everyone who has this hope in him purifies himself, just as he is pure. ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
4 Everyone who keeps committing sin also commits lawlessness; sin is lawlessness. ಪಾಪಮಾಡುವ ಪ್ರತಿಯೊಬ್ಬನೂ ನಿಯಮವನ್ನು ಮೀರುವವನಾಗಿದ್ದಾನೆ. ನಿಯಮವನ್ನು ಮೀರುವುದೇ ಪಾಪ.
5 You know he appeared to take away our sins, and in him is no sin. ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾದರೆಂಬುದು ನಿಮಗೆ ಗೊತ್ತಾಗಿದೆ. ಕ್ರಿಸ್ತ ಯೇಸುವಿನಲ್ಲಿ ಪಾಪವಿಲ್ಲ.
6 Whoever remains in him doesn't go on sinning; whoever goes on sinning hasn't seen or known him. ಕ್ರಿಸ್ತ ಯೇಸುವಿನಲ್ಲಿ ನೆಲೆಗೊಂಡಿರುವವರು ಪಾಪದಲ್ಲಿ ಮುಂದುವರಿಯುವುದಿಲ್ಲ. ಪಾಪದಲ್ಲಿ ಮುಂದುವರೆಯುವವರು ಕ್ರಿಸ್ತ ಯೇಸುವನ್ನು ಕಂಡವರೂ ಅಲ್ಲ, ತಿಳಿದವರೂ ಅಲ್ಲ.
7 Little children, let no one deceive you. Whoever practices righteousness is righteous, just as he is righteous. ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.
8 Whoever keeps on sinning is of the devil, for the devil has been sinning from the beginning. The reason the Son of our Father appeared was to destroy the works of the devil. ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.
9 No one born of our Father keeps on sinning, because his seed abides in him; and he cannot keep on sinning, because he has been born of our Father. ದೇವರಿಂದ ಹುಟ್ಟಿದವನು ಪಾಪವನ್ನು ಅಭ್ಯಾಸ ಮಾಡಲಾರನು, ಏಕೆಂದರೆ ದೇವರ ಬೀಜವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪ ಅಭ್ಯಾಸ ಮಾಡುವುದು ಅವನಿಗೆ ಅಸಾಧ್ಯ.
10 This shows who our Father's children are, and who the devil's children are: whoever doesn't do what's right isn't from our Father, nor is anyone who doesn't love their brother or sister. ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ.
11 For this is the message you have heard from the beginning: that we should love one another. ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.
12 Not like Cain, who belonged to the evil one and killed his brother. Why did he kill him? Because his own deeds were evil and his brother's were righteous. ಕೆಡುಕನಾಗಿದ್ದ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ಅಲ್ಲ. ಅವನು ಯಾವ ಕಾರಣದಿಂದ ತಮ್ಮನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ ಅಲ್ಲವೇ?
13 Do not be surprised, brothers and sisters, if the world hates you. ನನ್ನ ಪ್ರಿಯರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
14 We know we've passed from death to life, because we love each other. Whoever doesn't love remains in death. ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
15 Everyone who hates his brother or sister is a murderer, and you know no murderer has eternal life remaining in him. ತನ್ನ ಸಹೋದರನನ್ನು ದ್ವೇಷಿಸುವ ಯಾರೇ ಆದರೂ ಕೊಲೆಗಾರನಾಗಿದ್ದಾನೆ ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.
16 This is how we know love: Christ laid down his life for us; we too should lay down our lives for one another. ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.
17 But if anyone has the world's goods and sees his brother or sister in need, yet closes his heart to them, how does our Father's love remain in him? ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?
18 Little children, let us not love with words or talk, but in deed and in truth. ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.
19 By this we'll know we come from the truth, and settle our heart before him, ದೇವರ ಸಮಕ್ಷಮದಲ್ಲಿ ನಾವು ನಮ್ಮ ಹೃದಯವನ್ನು ವಿಶ್ರಾಂತಿಗೊಳಿಸಿರುವುದರಿಂದ ನಾವು ಸತ್ಯಕ್ಕೆ ಸೇರಿದವರು ಎಂಬುದು ಇದರಿಂದಲೇ ನಮಗೆ ತಿಳಿಯುತ್ತದೆ:
20 whenever our heart condemns us; for our Father is greater than our heart, and he knows everything. ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.
21 Beloved, if our heart does not condemn us, we have confidence before our Father; ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸದಿದ್ದರೆ ದೇವರ ಮುಂದೆ ಆತ್ಮವಿಶ್ವಾಸ ನಮಗಿರುವುದು.
22 whatever we ask, we receive from him, because we keep his commands and do what pleases him. ಮತ್ತು ನಾವು ಏನೇನು ಬೇಡಿಕೊಳ್ಳುತ್ತೇವೋ ಅದನ್ನು ದೇವರಿಂದ ನಾವು ಹೊಂದಿಕೊಳ್ಳುತ್ತೇವೆ. ಏಕೆಂದರೆ ನಾವು ಅವರ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಯಲ್ಲಿ ಮೆಚ್ಚಿಗೆಯಾದವುಗಳನ್ನು ಮಾಡುವವರಾಗಿದ್ದೇವೆ.
23 This is his command: believe in his Son Jesus Christ's name, and love one another as he commanded us. ನಾವು ದೇವರ ಪುತ್ರ ಆಗಿರುವ ಯೇಸುಕ್ರಿಸ್ತರ ಹೆಸರನ್ನು ನಂಬಿ, ಅವರು ನಮಗೆ ಆಜ್ಞಾಪಿಸಿದ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ದೇವರ ಆಜ್ಞೆಯಾಗಿರುತ್ತದೆ.
24 Whoever keeps his commands remains in our Father, and our Father in them. This is how we know he remains in us: by the Holy Spirit he gave us. ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವವನು ದೇವರಲ್ಲಿ ವಾಸಮಾಡುತ್ತಾನೆ ಮತ್ತು ದೇವರು ಅವನಲ್ಲಿ ವಾಸಮಾಡುತ್ತಾರೆ. ದೇವರು ನಮ್ಮಲ್ಲಿ ವಾಸಮಾಡುತ್ತಾರೆಂದು ದೇವರು ನಮಗೆ ದಯಪಾಲಿಸಿದ ಆತ್ಮನಿಂದಲೇ ನಾವು ಬಲ್ಲೆವು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]