Skip to content
The Believer's Library

Biblica® Open Kannada Contemporary Version 2022

1 John 4 OKCV

Show OKCV only
Verse × ×
1 Beloved, don't believe every spirit, but test the spirits to see if they're from our Father, for many false prophets have gone out into the world. ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
2 By this you know the Spirit of our Father: every spirit confessing that Jesus Christ has come in the flesh is from our Father, ನೀವು ದೇವರಾತ್ಮನನ್ನು ಹೀಗೆ ಗುರುತಿಸಬಹುದು: ಕ್ರಿಸ್ತ ಯೇಸು ನರಮಾಂಸರಾಗಿ ಬಂದರೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದು.
3 and every spirit that does not confess Jesus is not from our Father. This is the antichrist's spirit, which you heard was coming, and is already in the world now. ನರಮಾಂಸದಲ್ಲಿ ಬಂದ ಯೇಸುವನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುವುದೆಂಬುದನ್ನು ನೀವು ಕೇಳಿದ್ದೀರಲ್ಲಾ. ಈಗಲೂ ಅದು ಲೋಕದಲ್ಲಿ ಇದೆ.
4 You are from our Father, little children, and have overcome them, because greater is the one in you than the one in the world. ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.
5 They are from the world; therefore they speak from the world, and the world listens to them. ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
6 We are from our Father. Whoever knows him hears us; whoever is not from him does not hear us. This is how we know the Spirit of truth and the spirit of error. ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ.
7 Beloved, let us love one another, for love is from our Father, and all who love are born of him and know him. ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ.
8 Whoever does not love does not know our Father, because our Father is love. ಪ್ರೀತಿಯಿಲ್ಲದವರು ದೇವರನ್ನು ಬಲ್ಲವರಲ್ಲ. ಏಕೆಂದರೆ ದೇವರು ಪ್ರೀತಿಯಾಗಿದ್ದಾರೆ.
9 This is how our Father's love was shown among us: our Father sent his one and only Son into the world so we might live through him. ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು.
10 This is love: not that we loved our Father, but that he loved us and sent his Son as the atoning sacrifice for our sins. ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.
11 Beloved, if our Father so loved us, we also ought to love one another. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.
12 No one has ever seen our Father; if we love one another, our Father remains in us and his love is made complete in us. ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
13 By this we know we live in him and he in us: he has given us his Spirit. ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ.
14 We have seen and testify that our Father sent the Son as Savior of the world. ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.
15 Whoever confesses Jesus is the Son of our Father, our Father remains in him, and he in our Father. ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.
16 We have known and believed the love our Father has for us. Our Father is love, and whoever remains in love remains in him, and he in them. ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.
17 This is how love is made complete in us, so we may have confidence on judgment day, because as he is, so are we in this world. ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಏಕೆಂದರೆ ಯೇಸು ಎಂಥವರಾಗಿದ್ದಾರೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.
18 In love there is no fear; perfect love drives out fear, since fear involves punishment, and whoever fears is not complete in love. ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.
19 We love because our Father first loved us. ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.
20 If anyone says, "I love our Father," yet hates his brother, he is a liar. For whoever does not love his brother, whom he has seen, cannot love our Father, whom he has not seen. ಒಬ್ಬನು, “ನಾನು ದೇವರನ್ನು ಪ್ರೀತಿಸುತ್ತೇನೆ,” ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು.
21 And this commandment we have from him: whoever loves our Father must also love his brother. ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]