Skip to content
The Believer's Library

Biblica® Open Kannada Contemporary Version 2022

1 John 5 OKCV

Show OKCV only
Verse × ×
1 Everyone who believes Jesus is the Christ has been born of our Father, and everyone who loves the Father who gives birth loves the child born of him. ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.
2 By this we know we love the children of our Father: when we love our Father and keep his commands. ನಾವು ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
3 This is love of our Father: that we keep his commands, and his commands aren't burdensome. ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.
4 Everyone born of our Father overcomes the world. This is the victory that overcame the world: our faith. ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.
5 Who overcomes the world except the one believing Jesus is the Son of our Father? ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?
6 Jesus Christ came by water and blood—not water only, but water and blood. The Holy Spirit testifies to this, because the Holy Spirit is the truth. ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.
7 For there are three that testify: ಇದಲ್ಲದೆ ಸಾಕ್ಷಿಕೊಡುವವರು ಮೂವರಿದ್ದಾರೆ.
8 the Spirit, the water, and the blood; and these three are in agreement. ಆತ್ಮ, ಜಲ, ರಕ್ತ ಎಂಬ ಮೂರು ಸಾಕ್ಷಿಗಳು ಇವೆ. ಇವು ಕೊಡುವ ಸಾಕ್ಷಿ ಒಂದೇ ಆಗಿರುತ್ತದೆ.
9 If we accept human testimony, our Father's testimony is greater—for this is our Father's testimony: that he testified about his Son. ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವುದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಏಕೆಂದರೆ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
10 Whoever believes in the Son of our Father carries this testimony within himself. Whoever does not believe has made him a liar, since he hasn't believed the testimony our Father gave about his Son. ದೇವಪುತ್ರ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟವರು ಆ ಸಾಕ್ಷಿಯನ್ನು ಸ್ವೀಕರಿಸುತ್ತಾರೆ. ದೇವರನ್ನು ನಂಬದವರು ದೇವರನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾರೆ. ಹೇಗೆಂದರೆ ದೇವರು ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅಂಥವರು ನಂಬಿಕೆಯಿಡಲಿಲ್ಲ.
11 And this is the testimony: our Father gave us eternal life, and this life is in his Son. ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ.
12 Whoever has the Son has life; whoever lacks the Son of our Father lacks life. ಯಾರು ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಹೊಂದಿದ್ದಾರೊ ಅವರಿಗೆ ಜೀವವಿದೆ. ಯಾರಲ್ಲಿ ದೇವರ ಪುತ್ರ ಆಗಿರುವ ಕ್ರಿಸ್ತ ಯೇಸು ಇರುವುದಿಲ್ಲವೋ ಅಂಥವರಿಗೆ ಜೀವವಿಲ್ಲ.
13 I write these things to you who believe in the name of the Son of our Father, so you may know you have eternal life. ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ.
14 This is our confidence before him: whatever we ask according to his will, he hears us. ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.
15 And if we know he hears us—whatever we ask—we know we have what we asked him for. ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.
16 If anyone sees his brother sin a sin not leading to death, he should ask, and our Father will give him life—to those sinning not to death. There's a sin leading to death; I'm not saying he should pray about that. ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.
17 All wrongdoing is sin, and there is sin that does not lead to death. ಅನೀತಿಯೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.
18 We know: whoever is born of our Father does not keep sinning, but the One who was born of our Father protects him, and the evil one cannot touch him. ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.
19 We know we are from our Father, and the whole world lies under the evil one's power. ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.
20 We know the Son of our Father has come and given us understanding, to know the One who is true. We are in the One who is true, in his Son Jesus Christ. He is the true God and eternal life. ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.
21 Little children, keep yourselves from idols. ಪ್ರಿಯ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]