Skip to content
The Believer's Library

Biblica® Open Kannada Contemporary Version 2022

1 Peter 2 OKCV

Show OKCV only
Verse × ×
1 So put away all malice and all deceit and hypocrisy and envy and all slander. ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ.
2 Like newborn babies, crave pure milk of the word, so you grow into salvation, ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ.
3 now that you have tasted that the Lord is good. ಏಕೆಂದರೆ ಕರ್ತದೇವರು ಒಳ್ಳೆಯವರೆಂದು ನೀವು ರುಚಿ ನೋಡಿದ್ದೀರಲ್ಲಾ.
4 As you come to him, the living stone rejected by people but chosen, precious to our Father. ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.
5 You too are being built, like living stones, into a spiritual house and a holy priesthood, offering spiritual sacrifices our Father accepts through Jesus Christ. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.
6 Scripture says: "See, I set in Zion a chosen, precious cornerstone; whoever believes in him will never be put to shame." ಪವಿತ್ರ ವೇದವು ಹೇಳುವುದೇನೆಂದರೆ: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಂಡದ್ದು, ಅಮೂಲ್ಯವಾದದ್ದು. ದೇವರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”
7 This honor, then, is for you who believe. For those who don't, the stone the builders rejected has become the cornerstone, ಈಗ ನಂಬುವವರಾದ ನಿಮಗೆ ಈ ಕಲ್ಲು ಅಮೂಲ್ಯವಾದುದು. ನಂಬದವರಿಗಾದರೋ, “ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,”
8 and a stumbling stone, a rock that trips them. They trip because they disobey the word—exactly what they were appointed for. ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
9 But you are a chosen people, a royal priesthood, a holy nation, a people belonging to our Father, to proclaim the praises of the one who called you from darkness into his amazing light. ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.
10 Once you were not a people, now you are our Father's people; once you had not received mercy, now you have received mercy. ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.
11 Dear friends, I urge you—foreigners and exiles—to avoid fleshly desires that war against your soul. ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
12 Live good lives among the nations, so that when they slander you as wrongdoers, they may see your good deeds and glorify our Father on the day he visits us. ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
13 Submit to every human authority for the Lord's sake—whether the emperor, as supreme, ಮನುಷ್ಯನ ಪ್ರತಿಯೊಂದು ನಿಯಮಗಳಿಗೂ ಕರ್ತದೇವರ ನಿಮಿತ್ತ ನೀವು ಅಧೀನರಾಗಿರಿ. ಅರಸನು ಸರ್ವಾಧಿಕಾರಿಯಾಗಿದ್ದು,
14 or to governors, sent by the emperor to punish wrongdoers and praise those who do good. ರಾಜ್ಯಪಾಲರು ಕೆಟ್ಟವರನ್ನು ದಂಡಿಸುವುದಕ್ಕೆ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವುದಕ್ಕೆ ಅರಸನಿಂದ ಅವರು ಕಳುಹಿಸಲಾದವರೆಂದೂ ತಿಳಿದು ಅವರಿಗೆ ಅಧೀನರಾಗಿರಿ.
15 For this is our Father's will: that by doing good you silence the ignorant talk of foolish people. ನೀವು ನಿಮ್ಮ ಒಳ್ಳೆಯ ನಡತೆಯಿಂದ, ತಿಳುವಳಿಕೆಯಿಲ್ಲದೆ ಮಾತಾಡುವ ಮೂಢಜನರ ಬಾಯಿ ಮುಚ್ಚುವಂತೆ ಮಾಡುವುದೇ ದೇವರ ಚಿತ್ತ.
16 Live as free people—not using freedom to cover evil—but as servants of our Father. ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ.
17 Respect everyone, love the family of believers, fear our Father, honor the emperor. ಎಲ್ಲರನ್ನು ಸನ್ಮಾನಿಸಿರಿ, ವಿಶ್ವಾಸಿಗಳ ಸಹೋದರತ್ವವನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ, ಅರಸನನ್ನು ಸನ್ಮಾನಿಸಿರಿ.
18 Servants, submit to your masters with full respect—not only the good and gentle, but also the harsh. ದಾಸರೇ, ಯಜಮಾನರಿಗೆ ಅಧೀನರಾಗಿರಿ. ನೀವು ಅವರಲ್ಲಿ ಒಳ್ಳೆಯ ಯಜಮಾನರಿಗೆ ಮಾತ್ರವಲ್ಲ, ಕ್ರೂರ ಯಜಮಾನರಿಗೂ ಪೂರ್ಣಭಯಭಕ್ತಿಯಿಂದ ಅಧೀನರಾಗಿರಿ.
19 For it is commendable if someone bears up under the pain of unjust suffering, mindful of our Father. ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅವನು ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.
20 What credit is it to endure a beating for doing wrong? But enduring suffering for doing good—this is commendable before our Father. ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ.
21 You were called to this, since Christ suffered for you too, leaving an example for you to follow in his steps. ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.
22 "He committed no sin, and no deceit was found in his mouth." “ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ, ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.”
23 When they hurled their insults at him, he did not retaliate; when he suffered, he made no threats, but entrusted himself to the one who judges justly. ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.
24 He himself bore our sins in his body on the tree, so that we might die to sin and live for righteousness; by his wounds you have been healed. ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”
25 For you were straying like sheep, but now have returned to the Shepherd and Guardian of your souls. ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.” ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]