Skip to content
The Believer's Library

Biblica® Open Kannada Contemporary Version 2022

1 Peter 3 OKCV

Show OKCV only
Verse × ×
1 Likewise, wives, submit to your own husbands, so that even if some disobey the word, they may be won without a word by their wives' conduct, ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಪತಿಯರಲ್ಲಿ ಯಾರಾದರೂ ವಾಕ್ಯವನ್ನು ಸ್ವೀಕರಿಸದವರಾಗಿದ್ದರೂ ಪತ್ನಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ,
2 seeing your pure, reverent conduct. ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಲಿ.
3 Do not let your beauty be the outward kind—braided hair, gold jewelry, fine clothing. ವಿಚಿತ್ರವಾಗಿ ಜಡೆ ಹೆಣೆದುಕೊಳ್ಳುವುದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವುದೂ ಇಲ್ಲವೆ ತುಂಬಾ ಬೆಲೆಯ ಉಡಿಗೆಗಳನ್ನು ಧರಿಸಿಕೊಳ್ಳುವುದೂ ಇವೇ ನಿಮ್ಮ ಅಲಂಕಾರವಾಗಿರಬಾರದು.
4 But let it be the hidden person of the heart, the undying beauty of a gentle, quiet spirit, precious in our Father's sight. ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.
5 For this is how the holy women of old who hoped in our Father adorned themselves, submitting to their own husbands, ಪೂರ್ವಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡರು. ಅವರು ತಮ್ಮ ತಮ್ಮ ಪತಿಯರಿಗೆ ಅಧೀನರಾಗಿದ್ದರು.
6 as Sarah obeyed Abraham, calling him lord. And you have become her children if you do good, fearing no terror. ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು “ಯಜಮಾನ” ಎಂದು ಕರೆದಳು. ನೀವು ಸಾರಳ ಪುತ್ರಿಯರಾಗಿದ್ದೀರಲ್ಲಾ. ನೀವು ಒಳ್ಳೆಯದು ಯಾವುದೋ ಅದನ್ನು ಮಾಡುವುದಾದರೆ ಯಾವುದಕ್ಕೂ ಭಯಪಡಬೇಕಾಗಿರುವುದಿಲ್ಲ.
7 Husbands, similarly, live with your wives with understanding, honoring each as the weaker vessel and as coheirs of the grace of life, so your prayers aren't hindered. ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.
8 Finally, all of you, be of one mind, sympathetic, loving one another as family, tenderhearted, and humble. ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,
9 Do not repay evil for evil or insult for insult, but bless instead—you were called to this, so you may inherit blessing. ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.
10 For, "Whoever desires to love life and to see good days, let him keep his tongue from evil and his lips from speaking deceit. “ಬಾಳನ್ನು ಪ್ರೀತಿಸಿ ಸುದಿನಗಳನ್ನು ನೋಡುವುದಕ್ಕೆ ಇಷ್ಟವುಳ್ಳವನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
11 Let him turn away from evil and do good; let him seek peace and pursue it. ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ. ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
12 For the eyes of our Lord are on the righteous, and his ears are open to their prayer, but the face of our Lord is against those who do evil." ಏಕೆಂದರೆ ನೀತಿವಂತರ ಮೇಲೆ ಕರ್ತದೇವರು ದೃಷ್ಟಿ ಇಡುತ್ತಾರೆ. ಅವರ ಪ್ರಾರ್ಥನೆಗಳಿಗೆ ಕರ್ತದೇವರು ಕಿವಿಗೊಡುತ್ತಾರೆ. ಆದರೆ ಕೆಟ್ಟದ್ದನ್ನು ಮಾಡುವವರಿಗೆ ದೇವರು ವಿಮುಖರಾಗಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆಯಲ್ಲಾ?
13 Now who is there to harm you if you are eager to do what is good? ನೀವು ಒಳ್ಳೆಯದನ್ನು ಅನುಸರಿಸಲು ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
14 But if you suffer for righteousness, you are blessed. Don't fear their fear, don't be shaken. ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.
15 Set Christ apart as Lord in your hearts. Always be ready to answer anyone who asks the reason for your hope, but with gentleness and respect. ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ “ಕರ್ತದೇವರು” ಎಂದು ಪ್ರತಿಷ್ಠೆ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ.
16 Keep a clear conscience, so that when you're slandered, those who insult your good conduct in Christ are shamed. ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.
17 Better to suffer for doing good, if that's our Father's will, than for doing evil. ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು.
18 For Christ too suffered once for sins, the righteous for the unrighteous, to bring us to our Father—put to death in flesh, made alive in spirit, ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.
19 in which he also went and proclaimed to the spirits in prison, ಹೀಗೆ ಕ್ರಿಸ್ತ ಯೇಸುವು ಆತ್ಮರೂಪದಲ್ಲಿ ಬದುಕುವವರಾಗಿ, ಸೆರೆಯಲ್ಲಿದ್ದ ಅವಿಧೇಯ ಆತ್ಮಗಳ ಬಳಿಗೆ ಹೋಗಿ ಸಾರಿದರು.
20 who disobeyed long ago, when our Father waited patiently in Noah's days as the ark was being built, in which a few—eight people—were brought safely through the water. ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು.
21 This corresponding baptism now saves you too—not removing body dirt, but appealing to our Father for a good conscience—through Jesus Christ's resurrection, ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.
22 who entered heaven and is at our Father's right hand, with angels, authorities, and powers subject to him. ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]