Skip to content
The Believer's Library

Biblica® Open Kannada Contemporary Version 2022

1 Peter 4 OKCV

Show OKCV only
Verse × ×
1 So, since Christ suffered in the flesh, arm yourselves too with the same mindset: whoever suffers in the flesh is done with sin. ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.
2 So you no longer spend your remaining time in the flesh for human cravings, but for the will of our Father. ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.
3 You've already spent enough time doing what those who don't know the Father want: living in sensuality, lust, drunkenness, wild parties, drinking bouts, and lawless idol worship. ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.
4 They're surprised you no longer run with them into the same flood of wild living, so they insult you for it. ಆದುದರಿಂದ ನಿಮ್ಮ ಹಳೆಯ ಸ್ನೇಹಿತರೊಂದಿಗೆ ನೀವು ಮುಂಚಿನಂತೆ ಹಳೆಯ ದುಷ್ಕಾರ್ಯಗಳಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.
5 But they will answer to the one ready to judge the living and the dead. ಅಂಥವರು ಬದುಕುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕಾಗಿ ಸಿದ್ಧವಾಗಿರುವ ದೇವರಿಗೆ ಲೆಕ್ಕ ಕೊಡಬೇಕಾಗುವುದು.
6 This is why the gospel was preached even to those now dead: judged in the flesh as all people are, but they may live in the spirit as our Father does. ಈ ಕಾರಣದಿಂದಲೇ ಈಗ ಸತ್ತಿರುವವರಿಗೂ ಸಹ ಬದುಕಿದ್ದಾಗ ಸುವಾರ್ತೆ ಸಾರಲಾಯಿತು. ಆದ್ದರಿಂದ ಎಲ್ಲಾ ಮನುಷ್ಯರಿಗೆ ನೇಮಿಸಿದ ನ್ಯಾಯತೀರ್ಪಿನಂತೆ ಅವರು ದೇಹದಲ್ಲಿ ಮರಣ ಹೊಂದಿದ್ದರೂ, ತಮ್ಮ ಆತ್ಮದಲ್ಲಿ ದೇವರಿಗಾಗಿ ಜೀವಿಸುವರು.
7 The end of all things is near. Therefore be clear-minded and self-controlled so that you can pray. ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.
8 Above all, keep loving one another deeply, because love covers a multitude of sins. ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
9 Show hospitality to one another without grumbling. ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
10 Each of you, use whatever gift you've received to serve others, as good stewards of our Father's varied grace. ನೀವು ದೇವರಿಂದ ವಿವಿಧ ಕೃಪಾವರಗಳನ್ನು ಹೊಂದಿರಲಾಗಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿರುವ ವರಗಳನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
11 Whoever speaks should speak as one delivering the very words of our Father. Whoever serves should serve by the strength he supplies, so that in everything he may be glorified through Jesus Christ. To him belong the glory and the power forever and ever. Amen. ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.
12 Dear friends, don't be surprised at the fiery trial testing you, as if something strange were happening to you. ಪ್ರಿಯರೇ, ನಿಮ್ಮನ್ನು ಶೋಧಿಸಲು ಬರುವ ಅಗ್ನಿಪರೀಕ್ಷೆಗೆ ನೀವು ಆಶ್ಚರ್ಯಪಡಬೇಡಿರಿ. ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿತೆಂದು ಯೋಚಿಸಬೇಡಿರಿ.
13 Instead, rejoice as much as you share Christ's suffering, so you may also rejoice with joy when his glory is revealed. ನೀವು ಕ್ರಿಸ್ತ ಯೇಸುವಿನ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ಸಂತೋಷವುಳ್ಳವರಾಗಿರಿ. ಆಗ ಕ್ರಿಸ್ತ ಯೇಸುವಿನ ಮಹಿಮೆಯ ಪ್ರತ್ಯಕ್ಷತೆಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
14 If insulted for Christ's name, you're blessed, for the Spirit of glory and of our Father rests on you. ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.
15 None of you should suffer as a murderer, thief, criminal, or meddler in others' affairs. ನಿಮ್ಮಲ್ಲಿ ಯಾವನಾದರೂ ಕೊಲೆಗಾರನು, ಕಳ್ಳನು, ದುಷ್ಟನು ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನು ಅನುಭವಿಸಬಾರದು.
16 But if you suffer as a Christian, don't be ashamed, but praise our Father that you bear that name. ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವವರಾಗಿ ಬಾಧೆಪಟ್ಟರೆ ನಾಚಿಕೆಪಡಬೇಡಿರಿ. ಆ ಹೆಸರನ್ನು ಹೊಂದಿದ್ದಕ್ಕಾಗಿ ದೇವರನ್ನು ಘನಪಡಿಸಲಿ.
17 For it is time for judgment to begin with the household of our Father; if it starts with us, what awaits those who disobey the good news of our Father? ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?
18 And, "If the righteous are barely saved, what will become of the ungodly and sinner?" ಮತ್ತು, “ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಪಾಪಿಷ್ಠನೂ ಆಗಿರುವವನ ಗತಿ ಏನು?”
19 So then, those who suffer by our Father's will should entrust their souls to their faithful Creator, doing good. ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]