Skip to content
The Believer's Library

Biblica® Open Kannada Contemporary Version 2022

1 Peter 5 OKCV

Show OKCV only
Verse × ×
1 I urge the elders among you, as fellow elder, witness of Christ's sufferings, and sharer in the glory about to be revealed: ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.
2 Shepherd our Father's flock among you, watching over it—not forced but willing, as our Father wants; not for shameful profit but eager, ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.
3 not lording it over those entrusted to you, but being examples to the flock. ದೇವರ ಸ್ವಾಸ್ತ್ಯದ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಆದರ್ಶವಾಗಿಯೇ ನಡೆದುಕೊಳ್ಳಿರಿ.
4 And when the Chief Shepherd appears, you will receive the unfading crown of glory. ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
5 Likewise, younger ones, submit to elders. All of you, dress yourselves in humility toward each other, for our Father opposes the proud but gives grace to the humble. ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”
6 So humble yourselves under our Father's mighty hand, that he may lift you up in the right time, ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು.
7 casting all your anxiety on our Father, because he cares for you. ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.
8 Stay sober and watchful; your adversary the devil roams like a roaring lion, hunting someone to devour. ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
9 Resist him, standing firm in faith, knowing your fellow believers worldwide endure the same suffering. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಸೈತಾನನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಸಹೋದರಿಯರಿಗೂ ಅಂಥಾ ಬಾಧೆಗಳೇ ಸಂಭವಿಸುತ್ತವೆ ಎಂದು ನಿಮಗೆ ತಿಳಿದದೆಯಲ್ಲಾ.
10 And our Father of all grace, who called you to his eternal glory in Christ, will himself restore, support, strengthen, and ground you after brief suffering. ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.
11 To him be the dominion forever. Amen. ಅವರಿಗೆ ಸರ್ವಾಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.
12 Through Silvanus, a faithful brother as I see him, I've written briefly—encouraging you and testifying that this is the true grace of our Father. Stand firm in it. ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
13 She who is in Babylon, chosen together with you, sends you greetings, and so does Mark, my son. ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆ ಹೇಳುತ್ತಾನೆ.
14 Greet one another with a kiss of love. Peace to all of you who are in Christ. ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ!
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]