Skip to content
The Believer's Library

Biblica® Open Kannada Contemporary Version 2022

2 Chronicles 10 OKCV

Show OKCV only
Verse × ×
1 Rehoboam went to Shechem, for all Israel had come to Shechem to make him king. ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.
2 When Jeroboam son of Nebat heard of it—he was in Egypt, having fled from King Solomon—Jeroboam returned from Egypt. ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು.
3 So they sent for him, and Jeroboam and all Israel came and said to Rehoboam, ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ,
4 "Your father made our yoke heavy. Now lighten your father's hard service and the heavy yoke he put on us, and we will serve you." “ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು.
5 He said to them, "Come back to me in three days." So the people went away. ಅದಕ್ಕೆ ರೆಹಬ್ಬಾಮನು ಅವರಿಗೆ, “ಮೂರು ದಿವಸಗಳಾದ ತರುವಾಯ ತಿರುಗಿ ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದ್ದರಿಂದ ಜನರು ಹೊರಟು ಹೋದರು.
6 Then King Rehoboam consulted the elders who had served his father Solomon during his lifetime: "How do you advise me to answer these people?" ಆಗ ಅರಸನಾದ ರೆಹಬ್ಬಾಮನು, ತನ್ನ ತಂದೆ ಸೊಲೊಮೋನನು ಬದುಕಿರುವಾಗ, ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.
7 They replied, "If you are good to these people, please them, and speak kindly, they will always be your servants." ಅವರು ಅವನಿಗೆ, “ನೀನು ಈ ಜನರಿಗೆ ದಯವುಳ್ಳವನಾಗಿ ಅವರನ್ನು ಮೆಚ್ಚಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು.
8 But he rejected the elders' advice and consulted the young men who grew up with him and served him. ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,
9 He asked them, "What do you advise? How should we answer these people asking me to lighten the yoke my father put on us?" ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
10 The young men who grew up with him replied, "Tell the people who told you, 'Your father made our yoke heavy; lighten it for us'—tell them: 'My little finger is thicker than my father's waist.' ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.
11 My father put a heavy yoke on you; I'll add to it. My father disciplined you with whips; I will discipline you with scorpions.'" ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.
12 So Jeroboam and all the people came to Rehoboam on the third day, as the king had said, "Come back to me on the third day." ಆಗ, “ಮೂರನೆಯ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ” ಎಂದು ಅರಸನು ಹೇಳಿದ ಪ್ರಕಾರ ಮೂರನೆಯ ದಿವಸದಲ್ಲಿ ಯಾರೊಬ್ಬಾಮನೂ, ಸಮಸ್ತ ಜನರೂ ಅರಸನಾದ ರೆಹಬ್ಬಾಮನ ಬಳಿಗೆ ಬಂದರು.
13 The king answered them harshly. King Rehoboam rejected the advice of the elders, ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,
14 and spoke to them as the young men advised: "My father made your yoke heavy; I will make it heavier. My father disciplined you with whips; I will discipline you with scorpions." ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು; ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.
15 So the king did not listen to the people, for this turn came from our Father, to fulfill the word our Father spoke through Ahijah the Shilonite to Jeroboam son of Nebat. ಅರಸನು ಜನರ ಮಾತನ್ನು ಕೇಳದೆಹೋದದ್ದು ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.
16 When all Israel saw the king would not listen to them, the people answered him: "What share do we have in David? No inheritance in Jesse's son! To your tents, Israel! Look to your own house, David!" So all Israel went home to their tents. ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.
17 But Rehoboam still reigned over the Israelites who lived in the cities of Judah. ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು.
18 Then King Rehoboam sent Hadoram, in charge of the forced labor, but the Israelites stoned him to death. King Rehoboam himself jumped into his chariot and fled to Jerusalem. ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
19 So Israel has been in rebellion against the house of David to this day. ಹೀಗೆ ಇಂದಿನವರೆಗೂ ಇಸ್ರಾಯೇಲರು ದಾವೀದನ ಕುಟುಂಬದವರೊಡನೆ ವಿರೋಧವಾಗಿ ತಿರುಗಿಬೀಳುತ್ತಲೇ ಇದ್ದಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]