Skip to content
The Believer's Library

Biblica® Open Kannada Contemporary Version 2022

2 Chronicles 11 OKCV

Show OKCV only
Verse × ×
1 Rehoboam came to Jerusalem and assembled the house of Judah and Benjamin—180,000 chosen warriors—to fight against Israel and restore the kingdom to Rehoboam. ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು, ಯೆಹೂದ ಮತ್ತು ಬೆನ್ಯಾಮೀನವರ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.
2 But the word of our Father came to Shemaiah, the man of our Father, saying: ಆದರೆ ಯೆಹೋವ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,
3 "Say to Rehoboam son of Solomon, king of Judah, and to all Israel in Judah and Benjamin: “ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನರಲ್ಲಿರುವ ಸಮಸ್ತ ಇಸ್ರಾಯೇಲರಿಗೂ ಹೇಳಬೇಕಾದದ್ದೇನೆಂದರೆ,
4 This is what our Father says: Don't go up or fight against your brothers. Go home, each of you—this came from me." So they obeyed the words of our Father and turned back from advancing against Jeroboam. ‘ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ. ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯಾರೊಬ್ಬಾಮನ ಮೇಲೆ ಹೋಗದೆ ಹಿಂದಿರುಗಿ ಹೋದರು.
5 Rehoboam lived in Jerusalem and built up cities for defense in Judah. ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ, ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳನ್ನು ಕಟ್ಟಿಸಿದನು.
6 He built Bethlehem, Etam, and Tekoa, ಅವನು ಬೇತ್ಲೆಹೇಮನ್ನೂ, ಏಟಾಮನ್ನೂ, ತೆಕೋವನ್ನೂ,
7 Beth-zur, Soco, Adullam, ಬೇತ್ ಚೂರ್ ಪಟ್ಯಣವನ್ನೂ, ಸೋಕೋನನ್ನೂ, ಅದುಲ್ಲಾಮನ್ನೂ,
8 Gath, Mareshah, Ziph, ಗತ್ ಊರನ್ನೂ ಮಾರೇಷಾವನ್ನೂ ಜೀಫನ್ನೂ,
9 Adoraim, Lachish, Azekah, ಅದೋರೈಮನ್ನೂ, ಲಾಕೀಷನ್ನೂ, ಅಜೇಕವನ್ನೂ,
10 Zorah, Aijalon, and Hebron, the fortified cities in Judah and Benjamin. ಚೊರ್ಗವನ್ನೂ, ಅಯ್ಯಾಲೋನನ್ನೂ, ಹೆಬ್ರೋನನ್ನೂ ಕಟ್ಟಿಸಿದನು. ಇವು ಯೆಹೂದದಲ್ಲಿಯೂ, ಬೆನ್ಯಾಮೀನರಲ್ಲಿಯೂ ಕೋಟೆಯುಳ್ಳ ಪಟ್ಟಣಗಳಾಗಿವೆ.
11 He strengthened the fortresses and put commanders in them, along with stores of food, oil, and wine. ಇದಲ್ಲದೆ ಅವನು ಕೋಟೆಗಳನ್ನು ಬಲಪಡಿಸಿ, ಅವುಗಳಲ್ಲಿ ನಾಯಕರನ್ನೂ, ಆಹಾರ, ಎಣ್ಣೆ, ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.
12 In every city he placed shields and spears, strengthening them greatly. So Judah and Benjamin remained his. ಪ್ರತಿ ಪಟ್ಟಣದಲ್ಲಿ ಖೇಡ್ಯಗಳನ್ನೂ, ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾಮೀನವರು ಅವನ ಕಡೆ ಇದ್ದುದರಿಂದ, ಅವುಗಳನ್ನು ಭದ್ರಪಡಿಸಿದನು.
13 The priests and the Levites who were throughout all Israel came to him from all their territory, ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜಕರೂ, ಲೇವಿಯರೂ ತಮ್ಮ ಸಮಸ್ತ ಪ್ರಾಂತಗಳಿಂದ ಅವನ ಬಳಿಗೆ ಪುನಃ ಬಂದರು.
14 for the Levites left their pasturelands and property, going to Judah and Jerusalem, since Jeroboam and his sons turned them away from serving as priests of our Father. ಲೇವಿಯರು ತಮ್ಮ ಹುಲ್ಲುಗಾವಲು ಮತ್ತು ಆಸ್ತಿಯನ್ನು ತ್ಯಜಿಸಿ ಯೆಹೂದ ಮತ್ತು ಯೆರೂಸಲೇಮಿಗೆ ಬಂದರು, ಏಕೆಂದರೆ ಯಾರೊಬ್ಬಾಮನೂ ಅವನ ಮಕ್ಕಳು ಯೆಹೋವ ದೇವರಿಗೆ ಯಾಜಕ ಸೇವೆ ಮಾಡದ ಹಾಗೆ ತಿರಸ್ಕರಿಸಿದನು.
15 He appointed his own priests for the high places, for the goat idols, and for the calf idols he had made. ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ, ಯಾರೊಬ್ಬಾಮನು ಮಾಡಿದ ಕರುಗಳ ಮೂರ್ತಿಪೂಜೆಗಾಗಿ ತಾನೇ ಯಾಜಕರನ್ನು ನೇಮಿಸಿದ್ದರಿಂದ,
16 From every tribe of Israel, those who set their heart on seeking our Father, the God of Israel, followed the Levites to Jerusalem to sacrifice to our Father, the God of their ancestors. ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.
17 They strengthened Judah's kingdom, supporting Rehoboam son of Solomon three years, for they walked in the way of David and Solomon three years. ಹೀಗೆ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ, ಸೊಲೊಮೋನನ ಮಗ ರೆಹಬ್ಬಾಮನನ್ನು ಮೂರು ವರ್ಷಗಳವರೆಗೂ ಬಲಪಡಿಸಿದರು. ಅವರು ಮೂರು ವರ್ಷಗಳವರೆಗೂ ದಾವೀದನ, ಸೊಲೊಮೋನನ ಮಾರ್ಗದಲ್ಲಿ ನಡೆದರು.
18 Rehoboam married Mahalath, the daughter of Jerimoth son of David and of Abihail the daughter of Eliab son of Jesse. ರೆಹಬ್ಬಾಮನು ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು. ಈ ಮಹಲತ್ ದಾವೀದನ ಮಗ ಯೆರೀಮೋತ್ ಹಾಗು ಅಬೀಹೈಲರ ಮಗಳು. ಈ ಅಬೀಹೈಲಳು ಇಷಯನ ಮೊಮ್ಮಗಳೂ, ಎಲೀಯಾಬನ ಮಗಳೂ ಆಗಿದ್ದಳು.
19 She bore him sons: Jeush, Shemariah, and Zaham. ಅಬೀಹಾಯಿಲಳು ಯೆಗೂಷ್, ಶೆಮರ್ಯ, ಜಹಾಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.
20 After her, he married Maacah the daughter of Absalom, who bore him Abijah, Attai, Ziza, and Shelomith. ಇವಳ ತರುವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಮದುವೆಮಾಡಿಕೊಂಡನು. ಇವಳು ಅವನಿಗೆ ಅಬೀಯನನ್ನೂ, ಅತ್ತೈಯನ್ನೂ, ಜೀಜನನ್ನೂ, ಶೆಲೋಮೀತನನ್ನೂ ಹೆತ್ತಳು.
21 Rehoboam loved Maacah daughter of Absalom more than his other wives and concubines, since he had eighteen wives, sixty concubines, twenty-eight sons, and sixty daughters. ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ, ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನು ಇಪ್ಪತ್ತೆಂಟು ಮಂದಿ ಪುತ್ರರನ್ನೂ, ಅರವತ್ತು ಮಂದಿ ಪುತ್ರಿಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿಯರಿಗಿಂತಲೂ, ಉಪಪತ್ನಿಯರಿಗಿಂತಲೂ ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಹೆಚ್ಚಾಗಿ ಪ್ರೀತಿಮಾಡಿದನು.
22 Rehoboam made Abijah, son of Maacah, chief leader among his brothers, intending to make him king. ರೆಹಬ್ಬಾಮನು ಮಾಕ ಎಂಬವಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ಯುವರಾಜನನ್ನಾಗಿ ಮಾಡಿದನು. ಏಕೆಂದರೆ ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.
23 He acted wisely, spreading some of his sons through every district of Judah and Benjamin, to each fortified city, giving them abundant provisions and seeking many wives for them. ಇದಲ್ಲದೆ ಅವನು ವಿವೇಕವಾಗಿ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾಮೀನಿನ ದೇಶಗಳಲ್ಲಿ ಇರುವ ಎಲ್ಲಾ ಬಲವಾದ ಪಟ್ಟಣಗಳಲ್ಲಿ ಚದರಿಸಿ, ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಅವರಿಗೆ ಅನೇಕ ಹೆಂಡತಿಯರನ್ನು ಕೊಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]