Skip to content
The Believer's Library

Biblica® Open Kannada Contemporary Version 2022

2 Chronicles 12 OKCV

Show OKCV only
Verse × ×
1 When Rehoboam's reign was secure and strong, he abandoned our Father's law, and all Israel with him. ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ, ಅವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಯೆಹೋವ ದೇವರ ನಿಯಮವನ್ನು ಬಿಟ್ಟುಬಿಟ್ಟರು.
2 In Rehoboam's fifth year, because they were unfaithful to our Father, Shishak king of Egypt attacked Jerusalem. ಅವರು ಯೆಹೋವ ದೇವರಿಗೆ ವಿಶ್ವಾಸದ್ರೋಹಮಾಡಿದ್ದರಿಂದ, ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು.
3 He came with 1,200 chariots, 60,000 horsemen, and countless troops from Egypt: Libyans, Sukkites, and Cushites. ಅವನ ಸಂಗಡ ಸಾವಿರದ ಇನ್ನೂರು ರಥಗಳೂ, ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಈಜಿಪ್ಟಿನಿಂದ ಬಂದ ಲಿಬಿಯದವರೂ, ಸುಕ್ಕೀಯರೂ, ಕೂಷ್ಯರೂ ಲೆಕ್ಕವಿಲ್ಲದಷ್ಟು ಬಂದರು.
4 He captured the fortified cities of Judah and came as far as Jerusalem. ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.
5 Shemaiah the prophet came to Rehoboam and Judah's leaders, gathered in Jerusalem because of Shishak: "So says our Father: You abandoned me, so I abandon you to Shishak." ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆ, “ನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಕೊಟ್ಟುಬಿಟ್ಟೆನೆಂದು ಯೆಹೋವ ದೇವರು ನಿಮಗೆ ಹೇಳುತ್ತಾರೆ,” ಎಂದನು.
6 Then the leaders of Israel and the king humbled themselves and said, "Our Father is righteous." ಆದ್ದರಿಂದ ಇಸ್ರಾಯೇಲಿನ ಪ್ರಧಾನರೂ, ಅರಸನೂ ತಮ್ಮನ್ನು ತಗ್ಗಿಸಿಕೊಂಡು, “ಯೆಹೋವ ದೇವರು ನೀತಿವಂತರು,” ಎಂದರು.
7 When our Father saw they had humbled themselves, our Father's word came to Shemaiah: "They've humbled themselves; I won't destroy them, but grant them a little rescue, and my anger won't pour out on Jerusalem through Shishak. ಅವರು ತಮ್ಮನ್ನು ತಗ್ಗಿಸಿಕೊಂಡದ್ದನ್ನು ಯೆಹೋವ ದೇವರು ನೋಡಿದಾಗ, ಯೆಹೋವ ದೇವರ ವಾಕ್ಯವು ಶೆಮಾಯನಿಗೆ ಉಂಟಾಗಿ, “ಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಮಾಡದೆ, ಅವರು ತಪ್ಪಿಸಿಕೊಳ್ಳುವಂತೆ ಮಾಡುವೆನು. ಶೀಶಕನ ಮುಖಾಂತರ ನನ್ನ ಕೋಪವನ್ನು ಯೆರೂಸಲೇಮಿನ ಮೇಲೆ ಸುರಿದುಬಿಡುವುದಿಲ್ಲ.
8 But they will be Shishak's servants, to know my service and the service of earthly kingdoms." ಆದರೂ ಅವರು ನನ್ನ ಸೇವೆಗೂ, ದೇಶಗಳ ಅರಸರ ಸೇವೆಗೂ ಇರುವ ವ್ಯತ್ಯಾಸವನ್ನು ಇವರು ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು,” ಎಂದು ಹೇಳಿದನು.
9 Shishak king of Egypt attacked Jerusalem and took everything—the treasures of our Father's house, the royal palace, including the gold shields Solomon made. ಈಜಿಪ್ಟಿನ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿ ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು.
10 Rehoboam replaced them with bronze shields, entrusted to the guard commanders watching the entrance to the king's house. ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು.
11 Whenever the king entered our Father's house, the guards carried the shields, then returned them to the guard chamber. ಅರಸನು ಯೆಹೋವ ದೇವರ ಆಲಯಕ್ಕೆ ಹೋಗುವಾಗಲೆಲ್ಲಾ, ಕಾವಲುಗಾರರು ಅವುಗಳನ್ನು ಎತ್ತಿಕೊಂಡು ಬರುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ನಂತರ ಕಾವಲಿನ ಚಾವಡಿಗೆ ತರುತ್ತಿದ್ದರು.
12 When Rehoboam humbled himself, our Father's anger turned from him, not destroying him completely; good things remained in Judah too. ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡಾಗ, ಯೆಹೋವ ದೇವರ ಕೋಪವು ಅವನನ್ನು ಬಿಟ್ಟು ತಿರುಗಿತು. ಆತನು ಪೂರ್ಣವಾಗಿ ನಾಶಮಾಡಲಿಲ್ಲ. ಯೆಹೂದದಲ್ಲಿ ಸಹ ಕೆಲವು ಕಾರ್ಯಗಳು ಸುಲಕ್ಷಣಗಳು ಕಂಡುಬಂದವು.
13 King Rehoboam strengthened himself in Jerusalem and reigned; forty-one when he became king, he reigned seventeen years in Jerusalem, the city our Father chose from all the tribes of Israel to place his name there. His mother was Naamah, an Ammonite. ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.
14 He did evil, because he did not set his heart to seek our Father. ಅವನು ಯೆಹೋವ ದೇವರನ್ನು ಹುಡುಕಲು ತನ್ನ ಹೃದಯವನ್ನು ಸ್ಥಿರಪಡಿಸದೆ ಇದ್ದುದರಿಂದ, ಕೆಟ್ಟದ್ದನ್ನು ಮಾಡಿದನು.
15 Rehoboam's deeds, first to last, appear in the records of Shemaiah the prophet and Iddo the seer, listing genealogies. Rehoboam and Jeroboam warred continually. ರೆಹಬ್ಬಾಮನು ಅರಸನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ, ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋವನ ಪುಸ್ತಕದಲ್ಲಿಯೂ ಬರೆದಿರುತ್ತವೆ. ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು.
16 Rehoboam rested with his ancestors, buried in the City of David; his son Abijah reigned instead. ರೆಹಬ್ಬಾಮನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಬೀಯನು ಅವನಿಗೆ ಬದಲಾಗಿ ಅರಸನಾದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]