Skip to content
The Believer's Library

Biblica® Open Kannada Contemporary Version 2022

2 Chronicles 13 OKCV

Show OKCV only
Verse × ×
1 In the eighteenth year of King Jeroboam, Abijah became king of Judah. ಅರಸನಾದ ಯಾರೊಬ್ಬಾಮನ ಆಳಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,
2 He reigned three years in Jerusalem; his mother was Micaiah, Uriel of Gibeah's daughter. Abijah and Jeroboam went to war. ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮೀಕಾಯ, ಇವಳು ಗಿಬೆಯದ ಉರಿಯೇಲನ ಮಗಳು. ಅಬೀಯನಿಗೂ, ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು.
3 Abijah joined battle with an army of 400,000 chosen warriors, mighty in war; Jeroboam lined up against him with 800,000 chosen, mighty warriors. ಆಗ ಅಬೀಯನು ಯುದ್ಧಭಟರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯ್ಕೆಯಾದ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷಮಂದಿ ಆಯ್ಕೆಯಾದ ಪರಾಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
4 Abijah stood on Mount Zemaraim in Ephraim's hill country and said, "Hear me, Jeroboam and all Israel! ಆಗ ಅಬೀಯನು ಎಫ್ರಾಯೀಮ್ ಬೆಟ್ಟದಲ್ಲಿರುವ ಚೆಮಾರಯಿಮ್ ಎಂಬ ಬೆಟ್ಟದ ಮೇಲೆ ನಿಂತು, “ಯಾರೊಬ್ಬಾಮನೇ, ಸಮಸ್ತ ಇಸ್ರಾಯೇಲರೇ, ನನ್ನ ಮಾತು ಕೇಳಿರಿ.
5 Don't you know our Father, the God of Israel, gave David and his sons Israel's throne forever, by a covenant of salt? ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀದನಿಗೂ, ಅವನ ವಂಶದವರಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟರೆಂದು ನಿಮಗೆ ಗೊತ್ತಿಲ್ಲವೋ.
6 But Jeroboam son of Nebat—a servant of Solomon son of David—rose and rebelled against his master. ಆದರೆ ದಾವೀದನ ಮಗ ಸೊಲೊಮೋನನ ಸೇವಕನಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ತನ್ನ ಯಜಮಾನನ ಮೇಲೆ ತಿರುಗಿಬಿದ್ದನು.
7 Worthless men gathered around him, defying Solomon's son Rehoboam, young and timid, unable to resist them. ಇದಲ್ಲದೆ ನಿಷ್ಪ್ರಯೋಜಕರಾದ ದುಷ್ಟರು ಅವನ ಬಳಿಗೆ ಕೂಡಿಬಂದು, ಸೊಲೊಮೋನನ ಮಗ ರೆಹಬ್ಬಾಮನು ಎಳೆಯ ಪ್ರಾಯದವನೂ, ನಿರ್ಣಯಿಸಲಾಗದವನೂ ಅವರನ್ನು ಎದುರಿಸಲು ಬಲವಿಲ್ಲದವನೂ ಆಗಿರುವುದರಿಂದ ಅವನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡರು.
8 Now you think you can resist our Father's kingdom in David's sons' hands, since you're a huge crowd with the golden calves Jeroboam made as your gods. “ಈಗ ದಾವೀದನ ವಂಶಜರ ಕೈಯಲ್ಲಿರುವ ಯೆಹೋವ ದೇವರ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೊಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
9 Haven't you driven out our Father's priests, Aaron's sons and the Levites, and made your own priests like other nations? Anyone who comes with a young bull and seven rams can become a priest of things that aren't gods. ನೀವು ಯೆಹೋವ ದೇವರ ಯಾಜಕರಾದ ಆರೋನನ ವಂಶದವರಾದ ಲೇವಿಯರನ್ನೂ ತಳ್ಳಿ ಹಾಕಿ, ಅನ್ಯದೇಶಗಳ ಜನರಂತೆ ನಿಮಗೆ ಯಾಜಕರನ್ನು ಮಾಡಿಕೊಳ್ಳಲಿಲ್ಲವೋ? ಯಾವನಾದರೂ ದನದ ಮರಿಯಾದ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದು, ತನ್ನನ್ನು ಪ್ರತಿಷ್ಠೆ ಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನಷ್ಟೇ.
10 But our Father is ours, and we haven't abandoned him. The priests serving him are Aaron's sons, and the Levites are at their work. “ನಮಗಾದರೋ ಯೆಹೋವ ದೇವರು ದೇವರಾಗಿದ್ದಾರೆ. ನಾವು ಅವರನ್ನು ಬಿಡಲಿಲ್ಲ. ಇದಲ್ಲದೆ ಯೆಹೋವ ದೇವರಿಗೆ ಸೇವೆ ಮಾಡುವ ಯಾಜಕರು ಆರೋನನ ಮಕ್ಕಳು. ಲೇವಿಯರು ಅವರಿಗೆ ಕೆಲಸದಲ್ಲಿ ಸಹಾಯ ಮಾಡುತ್ತಿದ್ದರು.
11 Every morning and evening they burn to our Father burnt offerings and fragrant incense; they set rows of bread on the pure gold table and tend the gold lampstand, lit every evening. We keep our Father's charge, but you have abandoned him. ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.
12 Look, our Father is with us at our head, and his priests have trumpets to sound alarm against you. Israelites, do not fight our Father, the God of your ancestors, for you will not prevail." ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.
13 Jeroboam had sent an ambush around, to come from behind them; his forces faced Judah, the ambush behind them. ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆ ಬರಮಾಡಿದನು. ಆದ್ದರಿಂದ ಇಸ್ರಾಯೇಲರು ಯೆಹೂದದವರ ಮುಂದೆಯೂ, ಅವರ ಹಿಂದೆಯೂ ಬಂದರು.
14 Judah turned, saw battle facing them front and back, cried to our Father; the priests blew the trumpets. ಯೆಹೂದದವರು ಹಿಂದಕ್ಕೆ ನೋಡಿದಾಗ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಯೆಹೋವ ದೇವರಿಗೆ ಅವರು ಮೊರೆಯಿಟ್ಟರು. ಯಾಜಕರು ತುತೂರಿಗಳನ್ನು ಊದಿದರು.
15 Judah's men shouted the war cry, and as they shouted, our Father struck Jeroboam and all Israel before Abijah and Judah. ಆಗ ಯೆಹೂದ್ಯರು ಆರ್ಭಟಿಸಿದರು. ಯೆಹೂದ್ಯರು ಆರ್ಭಟಿಸಿದಾಗ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮನನ್ನೂ, ಸಮಸ್ತ ಇಸ್ರಾಯೇಲರನ್ನೂ ಅಪಜಯಗೊಳಿಸಿದರು.
16 The people of Israel fled before Judah, and our Father handed them over to Judah. ಇಸ್ರಾಯೇಲರು ಯೆಹೂದದವರ ಎದುರಿನಿಂದ ಓಡಿಹೋದರು. ಹೀಗೆ ದೇವರು ಇಸ್ರಾಯೇಲರನ್ನು ಯೆಹೂದದವರ ಕೈಯಲ್ಲಿ ಒಪ್ಪಿಸಿದರು.
17 Abijah and his army struck them a heavy blow; 500,000 chosen men of Israel fell dead. ಅಬೀಯನೂ, ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿದರು. ಇಸ್ರಾಯೇಲರಲ್ಲಿ ಐದು ಲಕ್ಷಮಂದಿ ಬಲಶಾಲಿಗಳಾದ ಸೈನಿಕರು ಹತರಾದರು.
18 So Israel was humbled then, and Judah prevailed because they relied on our Father, God of their ancestors. ಹೀಗೆ ಆ ಕಾಲದಲ್ಲಿ ಇಸ್ರಾಯೇಲರು ತಗ್ಗಿಹೋದರು. ಆದರೆ ಯೆಹೂದದವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಮೇಲೆ ಆತುಕೊಂಡದ್ದರಿಂದ ಜಯ ಹೊಂದಿದರು.
19 Abijah chased Jeroboam, capturing cities from him—Bethel and its villages, Jeshanah and its villages, Ephron and its villages. ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ, ಅವುಗಳ ಗ್ರಾಮಗಳನ್ನೂ ವಶಪಡಿಸಿಕೊಂಡನು.
20 Jeroboam never regained his strength during Abijah's lifetime, and our Father struck him down, and he died. ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲಿಲ್ಲ. ಯೆಹೋವ ದೇವರ ಶಿಕ್ಷೆಯಿಂದ ಯಾರೊಬ್ಬಾಮನು ಸತ್ತನು.
21 But Abijah grew strong. He married fourteen wives and had twenty-two sons and sixteen daughters. ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ, ಇಪ್ಪತ್ತೆರಡು ಮಂದಿ ಪುತ್ರರೂ, ಹದಿನಾರು ಮಂದಿ ಪುತ್ರಿಯರೂ ಇದ್ದರು.
22 The rest of Abijah's acts, his ways and sayings, are written in the prophet Iddo's commentary. ಅಬೀಯನ ಮಿಕ್ಕಾದ ಕ್ರಿಯೆಗಳೂ, ಅವನ ನಡೆನುಡಿಗಳ ಮಾತುಗಳೂ ಪ್ರವಾದಿಯಾದ ಇದ್ದೋವನ ವರ್ತಮಾನಗಳಲ್ಲಿ ಬರೆದಿರುತ್ತವೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]