Skip to content
The Believer's Library

Biblica® Open Kannada Contemporary Version 2022

2 Chronicles 14 OKCV

Show OKCV only
Verse × ×
1 Abijah rested with his ancestors; they buried him in the City of David. His son Asa became king, and the land had peace ten years. ಅಬೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು, ಅವನ ದಿವಸಗಳಲ್ಲಿ ಹತ್ತು ವರ್ಷ ದೇಶವು ಶಾಂತವಾಗಿತ್ತು.
2 Asa did what was good and right in the sight of our Father. ಆಸನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡಿದನು.
3 He removed the foreign altars and high places, smashed the sacred pillars, and cut down the Asherah poles. ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.
4 He commanded Judah to seek our Father, the God of their ancestors, and keep the law and commandment. ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹುಡುಕಲೂ, ನಿಯಮವನ್ನೂ, ಆಜ್ಞೆಯನ್ನೂ ಕೈಗೊಳ್ಳಲು ಯೆಹೂದ್ಯರಿಗೆ ಆಜ್ಞಾಪಿಸಿದನು.
5 He also removed the high places and incense altars from all Judah's cities, and the kingdom was at peace under him. ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು.
6 He built fortified cities in Judah, for the land was at peace. He fought no war those years, because our Father gave him rest. ಇದಲ್ಲದೆ ಅವನು ಯೆಹೂದದಲ್ಲಿ ಕೋಟೆಗಳುಳ್ಳ ಪಟ್ಟಣಗಳನ್ನು ಕಟ್ಟಿದನು. ಏಕೆಂದರೆ ದೇಶವು ಶಾಂತವಾಗಿತ್ತು. ಯೆಹೋವ ದೇವರು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರ್ಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
7 He told Judah, "Let us build these cities and surround them with walls, towers, gates, and bars. The land is still ours, because we sought our Father; we sought him, and he gave us rest all around." So they built and thrived. ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು.
8 Asa had an army of 300,000 from Judah with large shields and spears, and 280,000 from Benjamin with shields and bows—all mighty warriors. ಇದಲ್ಲದೆ ಆಸನಿಗೆ ದೊಡ್ಡ ಗುರಾಣಿಗಳನ್ನೂ, ಈಟಿಗಳನ್ನೂ ಹಿಡಿಯುವ ಸೈನ್ಯವಿತ್ತು. ಯೆಹೂದದವರು ಮೂರು ಲಕ್ಷ ಮಂದಿಯೂ, ಬೆನ್ಯಾಮೀನವರಲ್ಲಿ ಚಿಕ್ಕ ಗುರಾಣಿಗಳನ್ನು ಹಿಡಿಯುವ, ಬಿಲ್ಲುಗಳನ್ನು ಎಸೆಯುವ ಎರಡು ಲಕ್ಷದ ಎಂಬತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿ ಯುದ್ಧವೀರರಾಗಿದ್ದರು.
9 Zerah the Cushite marched against them with a million troops and 300 chariots, advancing to Mareshah. ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು.
10 Asa marched out against him, and they lined up for battle in the Valley of Zephathah at Mareshah. ಆಸನು ಅವನಿಗೆದುರಾಗಿ ಹೊರಟುಹೋದನು. ಮಾರೇಷಾದ ಬಳಿಯಲ್ಲಿ ಚೆಫಾತಾದ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
11 Then Asa cried to our Father his God: "Father, only you can help the powerless against the mighty. Help us, our God, for we rely on you, and in your name we face this vast horde. You are our God; let no mere man prevail against you." ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.
12 So our Father struck down the Cushites before Asa and before Judah, and the Cushites fled. ಆಗ ಯೆಹೋವ ದೇವರು ಕೂಷ್ಯರನ್ನು ಆಸನ ಮುಂದೆಯೂ, ಯೆಹೂದದವರ ಮುಂದೆಯೂ ಸೋಲುವಂತೆ ಮಾಡಿದರು. ಆದ್ದರಿಂದ ಕೂಷ್ಯರು ಓಡಿಹೋದರು.
13 Asa and his people pursued them to Gerar, and the Cushites fell until none survived, for they were shattered before our Father and his army. Judah's men carried off great plunder. ಆಗ ಆಸನೂ, ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನವರೆಗೂ ಹಿಂದಟ್ಟಿದರು. ಹೆಚ್ಚಿನ ಸಂಖ್ಯೆಯಲ್ಲಿ ಕೂಷ್ಯರು ಸೋತುಹೋದರು. ಅವರು ಯೆಹೋವ ದೇವರ ಮುಂದೆಯೂ, ಅವರ ಸೈನ್ಯದ ಮುಂದೆಯೂ ನಾಶವಾದರು. ಯೆಹೂದ್ಯರು ಬಹು ಕೊಳ್ಳೆಯನ್ನು ಒಯ್ದರು.
14 They struck down all the cities around Gerar, for the terror of our Father had fallen on them. They looted all the cities, since much plunder was in them. ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.
15 They also attacked the herdsmen's tents, carried off many sheep and camels, and returned to Jerusalem. ಪಶುಗಳಿದ್ದ ಡೇರೆಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂಸಲೇಮಿಗೆ ತಿರುಗಿ ಬಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]