Skip to content
The Believer's Library

Biblica® Open Kannada Contemporary Version 2022

2 Chronicles 15 OKCV

Show OKCV only
Verse × ×
1 The Spirit of our Father came upon Azariah son of Oded. ಆಗ ದೇವರ ಆತ್ಮವು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ,
2 He went out to meet Asa and said to him, "Hear me, Asa and all Judah and Benjamin: our Father is with you while you're with him. If you seek him, you will find him; if you abandon him, he will abandon you. ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು
3 For a long time Israel was without our Father, without a teaching priest, and without law. ಬಹುಕಾಲ ಇಸ್ರಾಯೇಲರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ, ನಿಯಮವಿಲ್ಲದೆ ಇದ್ದರು.
4 In their distress they turned to our Father, the God of Israel, sought him, and they found him. ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿ ಅವರನ್ನು ಹುಡುಕಿದಾಗ ಅವರಿಗೆ ದೇವರು ಸಿಕ್ಕಿದರು.
5 In those times no one going out or coming in was safe, for great turmoil struck all living in the lands. ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ, ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು. ದೇಶದ ನಿವಾಸಿಗಳು ಬಹಳವಾಗಿ ಹೆದರಿದ್ದರು.
6 Nation crushed nation and city crushed city, for our Father troubled them with every kind of distress. ಜನಾಂಗವು ಜನಾಂಗದಿಂದಲೂ, ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ದೇವರು ಸಕಲ ಇಕ್ಕಟ್ಟುಗಳಿಂದ ಅವರನ್ನು ತೊಂದರೆಪಡಿಸಿದರು.
7 But you, be strong; do not lose heart, for your work will be rewarded." ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು,” ಎಂದನು.
8 When Asa heard these words, the prophecy of Oded the prophet, he took courage and removed the detestable idols from all the land of Judah and Benjamin, and from the cities he had captured in the Ephraim hill country. He restored the altar of our Father in front of his temple entrance. ಆಸನು ಆ ಮಾತುಗಳನ್ನೂ, ಪ್ರವಾದಿಯಾದ ಓದೇದನ ಮಗ ಅಜರ್ಯನ ಪ್ರವಾದನಾ ಮಾತುಗಳನ್ನೂ ಕೇಳಿದಾಗ, ಅವನು ಬಲಗೊಂಡು ಯೆಹೂದ ಬೆನ್ಯಾಮೀನಿನ ಸಮಸ್ತ ದೇಶದೊಳಗಿಂದಲೂ, ಎಫ್ರಾಯೀಮನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯೆಹೋವ ದೇವರ ದ್ವಾರಾಂಗಳದ ಮುಂದೆ ಇದ್ದ ಯೆಹೋವ ದೇವರ ಬಲಿಪೀಠವನ್ನು ನೂತನಪಡಿಸಿದನು.
9 He gathered all Judah and Benjamin, plus those from Ephraim, Manasseh, and Simeon living among them, since many in Israel had crossed over to him when they saw our Father was with him. ತರುವಾಯ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ಯೆಹೂದ ದೇಶದಲ್ಲಿ ನೆಲೆಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು. ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದಾರೆಂದು ಇವರು ಕಂಡಾಗ, ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಬಂದಿದ್ದರು.
10 They assembled at Jerusalem in the third month of the fifteenth year of Asa's reign. ಹೀಗೆಯೇ ಆಸನ ಆಳಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿಕೊಂಡರು.
11 That day they sacrificed to our Father from the plunder—700 oxen and 7,000 sheep. ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯೆಹೋವ ದೇವರಿಗೆ ಬಲಿ ಅರ್ಪಿಸಿದರು.
12 They covenanted to seek our Father, God of their ancestors, with all their heart and with all their soul. ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ
13 Whoever would not seek our Father, the God of Israel, was to be put to death, whether small or great, whether man or woman. ಯಾವನಾದರೂ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕದೆ ಹೋದರೆ; ಹಿರಿಯನಾದರೂ, ಕಿರಿಯನಾದರೂ, ಪುರುಷನಾದರೂ, ಸ್ತ್ರೀಯಾದರೂ ಸಾಯಬೇಕೆಂದು ಒಡಂಬಡಿಕೆ ಮಾಡಿಕೊಂಡರು.
14 They swore to our Father with a loud voice, with shouting, and with trumpets and horns. ಮಹಾಶಬ್ದದಿಂದಲೂ, ಆರ್ಭಟದಿಂದಲೂ, ತುತೂರಿಗಳ ಶಬ್ದದಿಂದಲೂ, ಕೊಂಬುಗಳ ಶಬ್ದದಿಂದಲೂ ಯೆಹೋವ ದೇವರ ಮುಂದೆ ಆಣೆ ಇಟ್ಟರು.
15 All Judah rejoiced over the oath, for they swore with their whole heart, sought him with their whole desire, and found him. And our Father gave them rest on every side. ಯೆಹೂದದವರೆಲ್ಲರು ಪ್ರಮಾಣಕ್ಕೆ ಸಂತೋಷಪಟ್ಟರು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಆಣೆ ಇಟ್ಟು, ತಮ್ಮ ಪೂರ್ಣ ಇಷ್ಟಪೂರ್ವಕವಾಗಿ ದೇವರನ್ನು ಹುಡುಕಿದರು; ದೇವರು ಅವರಿಗೆ ಸಿಕ್ಕಿದರು. ಯೆಹೋವ ದೇವರು ಅವರಿಗೆ ಸುತ್ತಲೂ ವಿಶ್ರಾಂತಿಕೊಟ್ಟರು.
16 King Asa also removed his mother Maacah from being queen mother, because she had made a detestable image for Asherah; he cut it down, ground it to dust, and burned it in the Kidron Valley. ಅರಸನಾದ ಆಸನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಇದಲ್ಲದೆ ಆಸನು ಆ ಮೂರ್ತಿಯನ್ನು ಕಡಿದು ಚೂರುಚೂರು ಮಾಡಿ, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.
17 Though the high places were not removed from Israel, Asa's heart remained wholly devoted throughout his life. ಇಸ್ರಾಯೇಲಿನೊಳಗಿಂದ ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರಿಗೆ ಸಮರ್ಪಿತವಾಗಿತ್ತು.
18 He brought into our Father's house his father's dedicated gifts and his own dedicated gifts—silver, gold, and utensils. ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ದೇವರ ಆಲಯಕ್ಕೆ ತಂದನು.
19 And there was no war until the thirty-fifth year of Asa's reign. ಆಸನ ಆಳ್ವಿಕೆಯಲ್ಲಿ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿಲ್ಲದೆ ಇತ್ತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]