Skip to content
The Believer's Library

Biblica® Open Kannada Contemporary Version 2022

2 Chronicles 16 OKCV

Show OKCV only
Verse × ×
1 In Asa's thirty-sixth year, Baasha king of Israel invaded Judah, fortifying Ramah to keep anyone from leaving or entering Asa king of Judah's territory. ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು, ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಪಟ್ಟಣದ ಸುತ್ತಲೂ ಕೋಟೆಯನ್ನು ಕಟ್ಟಿಸಿದನು.
2 Asa took silver and gold from the storerooms of our Father's house and the royal house, and sent them to Ben-Hadad king of Aram, living in Damascus, with this message: ಆಗ ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಬೆಳ್ಳಿಬಂಗಾರವನ್ನು ತೆಗೆದು, ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ ಅವನಿಗೆ,
3 "Let there be a treaty between me and you, as there was between my father and your father. See, I'm sending you silver and gold. Go now and break your treaty with Baasha king of Israel, so he withdraws from me." “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದು ಹೇಳಿದನು.
4 Ben-Hadad agreed with King Asa and sent his army commanders against Israel's cities. They struck down Ijon, Dan, Abel-maim, and all Naphtali's store cities. ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಅವರು ಇಯ್ಯೋನ್, ದಾನ್ ಆಬೇಲ್ಮಯಿಮ್, ನಫ್ತಾಲ್ಯರ ಸಮಸ್ತ ಉಗ್ರಾಣಗಳ ಪಟ್ಟಣಗಳನ್ನು ವಶಪಡಿಸಿಕೊಂಡರು.
5 When Baasha heard of it, he stopped fortifying Ramah and abandoned his work. ಬಾಷನು ಇದನ್ನು ಕೇಳಿದಾಗ ರಾಮ ಪಟ್ಟಣದ ಸುತ್ತಲೂ ಕೋಟೆ ಕಟ್ಟಿಸುವುದನ್ನು ಬಿಟ್ಟು, ಅದರ ಎಲ್ಲಾ ಕೆಲಸಗಳನ್ನು ನಿಲ್ಲಿಸಿಬಿಟ್ಟನು.
6 King Asa mustered all Judah; they carried off the stones and timber Baasha had fortified Ramah with, and with them he fortified Geba and Mizpah. ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡು ಹೋದನು. ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ, ಅವುಗಳಿಂದ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು.
7 Then Hanani the seer came to Asa king of Judah and said to him, "Because you relied on Aram's king and not your Father, his army escaped your hand. ಅದೇ ಕಾಲದಲ್ಲಿ ದರ್ಶಿಯಾದ ಹನಾನೀಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವ ದೇವರ ಮೇಲೆ ಆತುಕೊಳ್ಳದೆ, ಅರಾಮಿನ ಅರಸನ ಮೇಲೆ ಆತುಕೊಂಡದ್ದರಿಂದ, ಅರಾಮಿನ ಅರಸನ ಸೈನ್ಯವು ನಿಮ್ಮ ಕೈಯಿಂದ ತಪ್ಪಿಸಿಕೊಂಡಿತು.
8 Weren't Cushites and Libyans a vast army with countless chariots and horsemen? Because you relied on your Father, he gave them to you. ಕೂಷನವರೂ, ಲಿಬಿಯದವರೂ ಮಹಾ ಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ, ರಾಹುತರೂ ಇದ್ದರಲ್ಲವೇ? ಆಗ ನೀನು ಯೆಹೋವ ದೇವರನ್ನು ಆತುಕೊಂಡದ್ದರಿಂದ ದೇವರು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದರು.
9 For our Father's eyes scan the whole earth, to strengthen those whose heart is fully devoted to him. You acted foolishly in this; from now on you will have wars." ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.
10 Asa raged at the seer for this and jailed him in the stocks, for he was furious with him about it; he also brutally oppressed some people at that time. ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.
11 Asa's acts, first to last, are written in the Book of the Kings of Judah and Israel. ಆಸನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಯೆಹೂದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ.
12 In his thirty-ninth year of reign, Asa's feet grew diseased, the disease severe. Yet even in his illness he did not seek our Father, but only the doctors. ಆದರೆ ಆಸನು ತನ್ನ ಆಳಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು. ಅವನ ರೋಗವು ಅತಿಘೋರವಾಯಿತು. ಆದರೆ ಅವನು ತನ್ನ ರೋಗದಲ್ಲಿ ಯೆಹೋವ ದೇವರನ್ನು ಹುಡುಕದೆ, ವೈದ್ಯರನ್ನು ಹುಡುಕಿದನು.
13 Then Asa rested with his fathers, dying in the forty-first year of his reign. ಆಸನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ತನ್ನ ಆಳಿಕೆಯ ನಾಲ್ವತ್ತೊಂದನೆಯ ವರ್ಷದಲ್ಲಿ ಮರಣಹೊಂದಿದನು.
14 They buried him in his own tomb, cut for himself in the City of David, laid him on a funeral bed covered with spices and various blended perfumes prepared by skilled perfumers, and lit a great fire for him. ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]