Skip to content
The Believer's Library

Biblica® Open Kannada Contemporary Version 2022

2 Chronicles 17 OKCV

Show OKCV only
Verse × ×
1 His son Jehoshaphat became king in his place and strengthened himself against Israel. ಆಸನ ಮಗ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು. ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿಕೊಂಡನು.
2 He stationed troops in all Judah's fortified cities and garrisons in the land of Judah and in the cities of Ephraim that his father Asa had captured. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು, ಯೆಹೂದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದುಕೊಂಡ ಎಫ್ರಾಯೀಮನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.
3 Our Father was with Jehoshaphat, for he walked his father David's earlier ways, not seeking the Baals. ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು.
4 Instead, he sought the Father his father served, obeyed his commandments, and not the practices of Israel. ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.
5 So our Father secured the kingdom in his hand; all Judah brought gifts to Jehoshaphat, and he had great wealth and honor. ಆದ್ದರಿಂದ ಯೆಹೋವ ದೇವರು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದರು. ಯೆಹೂದವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟದ್ದರಿಂದ, ಅವನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಯಿತು.
6 His heart was devoted to our Father's ways; he removed the high places and Asherah poles from Judah. ಅವನ ಹೃದಯವು ಯೆಹೋವ ದೇವರ ಮಾರ್ಗಗಳಲ್ಲಿ ಸಮರ್ಪಿತವಾಗಿತ್ತು. ಇದಲ್ಲದೆ ಅವನು ಯೆಹೂದದಲ್ಲಿದ್ದ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದುಹಾಕಿದನು.
7 In his reign's third year he sent his officials Ben-hail, Obadiah, Zechariah, Nethanel, and Micaiah to teach in Judah's cities, ಅವನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ, ಓಬದ್ಯನನ್ನೂ, ಜೆಕರ್ಯನನ್ನೂ, ನೆತನೆಯೇಲನನ್ನೂ, ಮೀಕಾಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೆಕಳುಹಿಸಿದನು.
8 and the Levites with them: Shemaiah, Nethaniah, Zebadiah, Asahel, Shemiramoth, Jehonathan, Adonijah, Tobijah, Tob-adonijah; and with them the priests Elishama, Jehoram. ಅವರ ಸಂಗಡ ಲೇವಿಯರಾದ ಶೆಮಾಯನನ್ನೂ, ನೆತನ್ಯನನ್ನೂ, ಜೆಬದ್ಯನನ್ನೂ, ಅಸಾಯೇಲನನ್ನೂ, ಶೆಮೀರಾಮೋತನನ್ನೂ, ಯೆಹೋನಾತಾನನನ್ನೂ, ಅದೋನೀಯನನ್ನೂ, ಟೋಬೀಯನನ್ನೂ, ಟೋಬದೋನಿಯನನ್ನೂ, ಇವರ ಸಂಗಡ ಯಾಜಕರಾದ ಎಲೀಷಾಮನನ್ನೂ, ಯೆಹೋರಾಮನನ್ನೂ ಕಳುಹಿಸಿದನು.
9 They taught throughout Judah, carrying the Book of our Father's Instruction, going to all Judah's cities, teaching the people. ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಯೆಹೋವ ದೇವರ ನಿಯಮದ ಗ್ರಂಥ ಇತ್ತು. ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ, ಜನರಿಗೆ ಬೋಧಿಸಿದರು.
10 The dread of our Father fell on all the kingdoms around Judah, so they made no war on Jehoshaphat. ಯೆಹೋವ ದೇವರ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದುದರಿಂದ, ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡಲಿಲ್ಲ.
11 Some Philistines brought Jehoshaphat gifts and silver tribute; the Arabs brought flocks: 7,700 rams, 7,700 male goats. ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಗಳನ್ನೂ, ಕಪ್ಪದ ಹಣವನ್ನು ತಂದರು. ಅರಬಿಯ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
12 Jehoshaphat grew more and more powerful, and he built fortresses and storage cities in Judah. ಯೆಹೋಷಾಫಾಟನು ಬರಬರುತ್ತಾ ಬಹಳ ಅಭಿವೃದ್ಧಿಯಾಗಿ ಯೆಹೂದದಲ್ಲಿ ಅರಮನೆಗಳನ್ನೂ, ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
13 He had large supplies in the cities of Judah, and mighty warriors in Jerusalem. ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ದವಸ ಧಾನ್ಯಗಳ ದೊಡ್ಡ ಮಳಿಗೆಯನ್ನು ಕಟ್ಟಿದನು. ಪರಾಕ್ರಮಶಾಲಿಗಳಾದ ಯುದ್ಧವೀರರು ಯೆರೂಸಲೇಮಿನಲ್ಲಿದ್ದರು.
14 Their enrollment by ancestral house: from Judah, commanders of thousands—Adnah the commander, with him 300,000 mighty warriors; ತಮ್ಮ ಪಿತೃಗಳ ಮನೆಯ ಪ್ರಕಾರವಾಗಿರುವ ಅವರ ಲೆಕ್ಕವೇನೆಂದರೆ: ಯೆಹೂದದ 1,000 ಅಧಿಪತಿಗಳಲ್ಲಿ ಅದ್ನಾನು ಮುಖ್ಯಸ್ಥನಾಗಿದ್ದನು. ಅವನ ಸಂಗಡ ಪರಾಕ್ರಮಶಾಲಿಗಳು 3,00,000 ಮಂದಿ ಇದ್ದರು.
15 next to him was Jehohanan the commander, and with him 280,000; ಅವನ ತರುವಾಯ ಅಧಿಪತಿಯಾದ ಯೆಹೋಹಾನಾನನು; ಅವನ ಸಂಗಡ 2,80,000 ಮಂದಿಯು.
16 next Amasiah son of Zichri, who volunteered for our Father, with him 200,000 mighty warriors. ಇವನ ತರುವಾಯ ಯೆಹೋವ ದೇವರಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ 2,00,000 ಮಂದಿ ಪರಾಕ್ರಮಶಾಲಿಗಳು.
17 From Benjamin: Eliada, a mighty warrior, and with him 200,000 armed with bow and shield; ಬೆನ್ಯಾಮೀನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ; ಇವನ ಸಂಗಡ ಬಿಲ್ಲನ್ನೂ, ಗುರಾಣಿಯನ್ನೂ ಧರಿಸಿಕೊಂಡಿರುವ 2,00,000 ಮಂದಿಯು.
18 next to him Jehozabad, and with him 180,000 equipped for war. ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ 1,80,000 ಮಂದಿಯು.
19 These men served the king, besides those he stationed in the fortified cities throughout Judah. ಅರಸನಿಂದ ಸಮಸ್ತ ಯೆಹೂದದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇದ್ದವರ ಹೊರತಾಗಿ, ಇವರು ಅರಸನ ಬಳಿಯಲ್ಲಿ ಸೇವೆಮಾಡುತ್ತಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]