Skip to content
The Believer's Library

Biblica® Open Kannada Contemporary Version 2022

2 Chronicles 19 OKCV

Show OKCV only
Verse × ×
1 Jehoshaphat king of Judah returned safely to his house in Jerusalem. ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಅರಮನೆಗೆ ತಿರುಗಿಬಂದನು.
2 Jehu son of Hanani the seer met King Jehoshaphat and asked, "Should you help the wicked and love those who hate our Father? For this, wrath from our Father is on you. ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.
3 Still, good is found in you: you cleared the Asherah poles from the land and set your heart to seek our Father." ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.
4 Jehoshaphat lived in Jerusalem, then went out again among the people, from Beersheba to Ephraim's hill country, turning them back to our Father, God of their ancestors. ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದನು. ಅವನು ತಿರುಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯೀಮನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಕಡೆಗೆ ಅವರನ್ನು ತಿರುಗಿಸಿದನು.
5 He appointed judges in the land, in all the fortified cities of Judah, city by city. ಇದಲ್ಲದೆ ಅವನು ದೇಶದೊಳಗೆ ಪಟ್ಟಣ ಪಟ್ಟಣದಲ್ಲಿ ಯೆಹೂದದ ಸಮಸ್ತ ಕೋಟೆಗಳುಳ್ಳ ಪಟ್ಟಣಗಳೊಳಗೆ ನ್ಯಾಯಾಧಿಪತಿಗಳಿಗೆ,
6 He told the judges, "See what you do—you judge not for people but for our Father, and he is with you in every case you decide. “ನೀವು ಮಾಡುವುದನ್ನು ನೋಡಿಕೊಳ್ಳಿರಿ. ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಯೆಹೋವ ದೇವರಿಗೋಸ್ಕರ ನ್ಯಾಯ ತೀರಿಸುತ್ತೀರಿ.
7 Now let fear of our Father be on you. Watch and act, for with our Father there is no injustice, no favoritism, no bribery." ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.
8 Also in Jerusalem, Jehoshaphat appointed some Levites, priests, and heads of Israel's ancestral families to render the judgment of our Father and to settle disputes; they returned to Jerusalem. ಅವರು ಯೆರೂಸಲೇಮಿಗೆ ತಿರುಗಿ ಬಂದ ತರುವಾಯ ಯೆಹೋಷಾಫಾಟನು ಯೆಹೋವ ದೇವರ ನ್ಯಾಯತೀರ್ವಿಕೆಗೋಸ್ಕರವೂ, ವ್ಯಾಜ್ಯಗಳಿಗೋಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ, ಯಾಜಕರಲ್ಲಿಯೂ, ಇಸ್ರಾಯೇಲ್ ಗೋತ್ರಪ್ರಧಾನರಲ್ಲಿಯೂ ಕೆಲವರನ್ನು ನೇಮಿಸಿ ಅವರಿಗೆ,
9 He commanded them: "Act this way, in fear of our Father, faithfully and wholeheartedly. “ನೀವು ಈ ಕಾರ್ಯವನ್ನು ಯೆಹೋವ ದೇವರ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣಹೃದಯದಿಂದಲೂ ಮಾಡಬೇಕು.
10 Whenever your brothers in their cities bring you a dispute—over bloodshed, or over law and commandment, statutes and rulings—warn them, so they don't incur guilt before our Father, bringing wrath on you and your brothers. Do this, and you will not incur guilt. ಇದಲ್ಲದೆ ಜೀವಹತ್ಯ, ನ್ಯಾಯಕ್ಕೂ, ಆಜ್ಞೆಗೂ, ನಿಯಮಗಳಿಗೂ, ನ್ಯಾಯತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ, ರೌದ್ರವು ನಿಮ್ಮ ಮೇಲೆಯೂ, ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ. ಆಗ ನೀವು ಅಪರಾಧವಿಲ್ಲದವರಾಗಿರುವಿರಿ.
11 Now, Amariah the chief priest oversees you in every matter of our Father; Zebadiah son of Ishmael, leader of Judah's tribe, in every matter of the king. The Levites serve as officials before you. Be strong and act—may our Father be with those who do good." “ಮುಖ್ಯಯಾಜಕನಾದ ಅಮರ್ಯನು ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಯೆಹೂದದ ಮನೆಯ ನಾಯಕನಾಗಿರುವ ಇಷ್ಮಾಯೇಲನ ಮಗ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇರುವರು. ಇದಲ್ಲದೆ ಲೇವಿಯರು ನಿಮ್ಮ ಮುಂದೆ ಅಧಿಕಾರಿಗಳಾಗಿರುವರು. ನೀವು ಬಲಗೊಂಡು ಕೆಲಸ ನಡೆಸಿರಿ. ಯೆಹೋವ ದೇವರು ಒಳ್ಳೆಯವರ ಸಂಗಡ ಇರುವರು,” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]