Skip to content
The Believer's Library

Biblica® Open Kannada Contemporary Version 2022

2 Chronicles 20 OKCV

Show OKCV only
Verse × ×
1 Later, Moabites and Ammonites, with some Meunites, came to make war on Jehoshaphat. ಇದರ ತರುವಾಯ ಮೋವಾಬ್ಯರೂ, ಅಮ್ಮೋನಿಯರೂ, ಮೆಗೂನ್ಯರೂ ಯೆಹೋಷಾಫಾಟನ ಮೇಲೆ ಯುದ್ಧಮಾಡಲು ಬಂದರು.
2 Messengers came and reported to Jehoshaphat, "A vast army comes against you from beyond the Dead Sea, from Edom, already at Hazazon-tamar" (En-gedi). ಆಗ ಕೆಲವರು ಬಂದು ಯೆಹೋಷಾಫಾಟನಿಗೆ, “ಅರಾಮಿನ ಈಚೆಯಲ್ಲಿರುವ ಲವಣ ಸಮುದ್ರದ ಆಚೆಯಿಂದ ನಿನಗೆ ವಿರೋಧವಾಗಿ ಮಹಾ ಸಮೂಹವೊಂದು ಬರುತ್ತದೆ. ಅವರು ಏನ್ಗೆದಿ ಎಂಬ ಹಜಜೋನ್ ತಾಮಾರಿನಲ್ಲಿ ಇದ್ದಾರೆ,” ಎಂದು ತಿಳಿಸಿದರು.
3 Jehoshaphat was afraid, so he set himself to seek our Father, and proclaimed a fast throughout Judah. ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು.
4 Judah gathered to seek our Father; from every town of Judah they came to seek him. ಆದ್ದರಿಂದ ಯೆಹೂದದವರು ಯೆಹೋವ ದೇವರಿಂದ ಸಹಾಯವನ್ನು ಕೇಳಿಕೊಳ್ಳಲು ಸಮಸ್ತ ಯೆಹೂದದ ಪಟ್ಟಣಗಳಿಂದ ಕೂಡಿಬಂದರು.
5 Then Jehoshaphat stood up in the assembly of Judah and Jerusalem, in our Father's house, before the new courtyard. ಆಗ ಯೆಹೋಷಾಫಾಟನು ಹೊಸ ಅಂಗಳದ ಮುಂದೆ ಯೆಹೋವ ದೇವರ ಮಂದಿರದಲ್ಲಿರುವ ಯೆಹೂದದ ಯೆರೂಸಲೇಮಿನ ಜನಸಮೂಹದ ಮಧ್ಯದಲ್ಲಿ ನಿಂತು:
6 He said: "O our Father, God of our ancestors, are you not our Father in heaven? You rule all kingdoms of nations. Power and might are in your hand; none can stand against you. “ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?
7 Our Father, didn't you drive out this land's people before your people Israel, giving it forever to Abraham your friend's descendants? ನೀವು ನಿಮ್ಮ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿಬಿಟ್ಟು, ಅದನ್ನು ನಿಮ್ಮ ಸ್ನೇಹಿತನಾದ ಅಬ್ರಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀವು, ನಮ್ಮ ದೇವರಲ್ಲವೋ?
8 They have lived in it and have built you a sanctuary in it for your name, saying, ಅವರು ಅದರಲ್ಲಿ ನಿವಾಸಮಾಡಿ, ಅದರಲ್ಲಿ ನಿಮ್ಮ ಹೆಸರಿಗೆ ಪರಿಶುದ್ಧವಾದ ಸ್ಥಳವನ್ನು ಕಟ್ಟಿಸಿ,
9 if disaster comes on us—sword of judgment, plague, or famine—we'll stand before this house and before you, for your name is in this house, and cry out to you in our distress, and you'll hear and save. ‘ನಿಮ್ಮ ಹೆಸರು ಈ ಆಲಯದಲ್ಲಿರುವುದರಿಂದ ಖಡ್ಗವೂ ನ್ಯಾಯತೀರಿಸುವ ಶಿಕ್ಷೆಯೂ, ಘೋರವ್ಯಾಧಿಯೂ ಬರವೇನಾದರೂ ನಮ್ಮ ಮೇಲೆ ಬಂದರೆ, ನಾವು ಈ ಆಲಯದ ಮುಂದೆಯೂ, ನಿಮ್ಮ ಸಮ್ಮುಖದಲ್ಲಿಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿಮ್ಮನ್ನು ಕೂಗುವಾಗ, ನೀವು ಕೇಳಿ ರಕ್ಷಿಸುವಿರಿ,’ ಎಂದು ಹೇಳಲಿಲ್ಲವೇ?
10 Now: Ammon, Moab, and Mount Seir—you would not let Israel invade them when they came from Egypt; Israel turned away from them and did not destroy them. “ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು.
11 See how they repay us, coming to drive us from the possession you gave us to inherit. ಅವರು ಬಂದು, ನೀವು ನಮಗೆ ಸ್ವಾಧೀನಮಾಡಿಕೊಳ್ಳಲು ಕೊಟ್ಟ ನಿಮ್ಮ ಸ್ವಾಸ್ತ್ಯದೊಳಗಿಂದ ನಮ್ಮನ್ನು ಹೊರಡಿಸುವುದರಿಂದ ನಮಗೆ ಪ್ರತೀಕಾರ ಮಾಡುತ್ತಾರೆ.
12 Our Father, won't you judge them? We're powerless against this vast army coming against us; we don't know what to do, but our eyes are on you." ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.
13 All Judah stood there before our Father, with their little ones, their wives, and their children. ಹೀಗೆ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಯೆಹೋವ ದೇವರ ಮುಂದೆ ನಿಂತರು.
14 Then our Father's Spirit came on Jahaziel son of Zechariah, son of Benaiah, son of Jeiel, son of Mattaniah, a Levite of Asaph's line, amid the assembly. ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.
15 He said: "Listen, all Judah, Jerusalem's residents, and King Jehoshaphat. This is what our Father says to you: Do not fear or be terrified by this vast army—the battle isn't yours but our Father's. ಆಗ ಯಹಜೀಯೇಲನು, “ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ.
16 Tomorrow go down against them: they're climbing the Ziz ascent; you'll find them at the valley's end, facing the Jeruel wilderness. ನಾಳೆ ಬೆಳಿಗ್ಗೆ ನೀವು ಅವರ ವಿರೋಧವಾಗಿ ಹೋಗಿರಿ. ಅವರು ಚೀಚ್ ಎಂಬ ಕಣಿವೆಯಿಂದ ಬರುತ್ತಾರೆ. ಯೆರೂಯೇಲ್ ಮರುಭೂಮಿಯ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.
17 You won't need to fight this battle. Take your places, stand firm, and watch our Father rescue you, Judah and Jerusalem. Don't fear or lose heart. March out against them tomorrow, for our Father is with you.'" ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.
18 Jehoshaphat bowed face-down, and all Judah and Jerusalem's people fell in worship before our Father. ಆಗ ಯೆಹೋಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು. ಯೆಹೂದದವರೆಲ್ಲರೂ, ಯೆರೂಸಲೇಮಿನ ನಿವಾಸಿಗಳೆಲ್ಲರೂ ಯೆಹೋವ ದೇವರ ಮುಂದೆ ಅಡ್ಡಬಿದ್ದು ಯೆಹೋವ ದೇವರನ್ನು ಆರಾಧಿಸಿದರು.
19 Then the Levites from the Kohathites and Korahites stood to praise our Father, Israel's God, with a loud voice raised high. ಇದಲ್ಲದೆ ಕೊಹಾತ್ಯರ ಮಕ್ಕಳಲ್ಲಿಯೂ, ಕೋರಹೀಯರ ಮಕ್ಕಳಲ್ಲಿರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ತುತಿಸಲು ಎದ್ದು ನಿಂತರು.
20 At dawn they went out to Tekoa's wilderness. As they went out, Jehoshaphat stood and said, "Hear me, Judah and people of Jerusalem. Trust your Father and you'll stand firm; trust his prophets and you'll succeed." ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.
21 After consulting the people, Jehoshaphat appointed singers to our Father to praise his holy splendor, marching ahead of the army: "Give thanks to our Father, for his faithful love endures forever." ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.
22 As they began to sing and praise, our Father set ambushes against the Ammonites, Moabites, and the people of Mount Seir who were attacking Judah, and they were struck down. ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.
23 Ammon and Moab turned against Mount Seir's people to destroy and annihilate them; once Seir's people were finished, Ammon and Moab turned and slaughtered each other. ಅಮ್ಮೋನಿಯರು, ಮೋವಾಬ್ಯರು ಸೇಯೀರ್ ಪರ್ವತದ ನಿವಾಸಿಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯೀರನ ನಿವಾಸಿಗಳನ್ನು ಪೂರ್ಣವಾಗಿ ವಧಿಸಿದ ತರುವಾಯ, ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.
24 When Judah reached the wilderness lookout and looked toward the vast army, they saw only corpses fallen on the ground—no one had escaped. ಯೆಹೂದದವರು ಮರುಭೂಮಿಯಲ್ಲಿರುವ ಎತ್ತರದ ಸ್ಥಳಕ್ಕೆ ಬಂದು, ಅಲ್ಲಿನ ಗುಂಪನ್ನು ನೋಡಿದಾಗ, ಅವರಲ್ಲಿ ಒಬ್ಬನೂ ಉಳಿಯದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.
25 Jehoshaphat and his people came to plunder the dead, finding abundant goods, clothing, and valuables—too much to carry, so gathering it took three days. ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.
26 On day four, they gathered at the Valley of Beracah and praised our Father there—so it's named Valley of Beracah to this day. ನಾಲ್ಕನೆಯ ದಿವಸದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡರು. ಅಲ್ಲಿ ಯೆಹೋವ ದೇವರನ್ನು ಸ್ತುತಿಸಿದರು. ಆದಕಾರಣ ಇಂದಿನವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
27 All the men of Judah and Jerusalem, Jehoshaphat leading, returned there with joy, for our Father gave them joy over their enemies. ಯೆಹೋವ ದೇವರು ಅವರ ಶತ್ರುಗಳ ಮೇಲೆ ಅವರು ಸಂತೋಷಪಡುವಂತೆ ಮಾಡಿದ್ದರಿಂದ, ಅವರು ಹರ್ಷಗೊಂಡು ಯೆರೂಸಲೇಮಿಗೆ ತಿರುಗಿ ಹೋಗುವುದಕ್ಕೆ ಯೆಹೂದ ಮತ್ತು ಯೆರೂಸಲೇಮಿನವರ ಮುಂಭಾಗದಲ್ಲಿ ಯೆಹೋಷಾಫಾಟನೂ ಹೊರಟು,
28 They entered Jerusalem with harps, lyres, and trumpets, and went to the house of our Father. ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದರು.
29 Fear of our Father fell on all the surrounding kingdoms when they heard our Father fought Israel's enemies. ಯೆಹೋವ ದೇವರು ಇಸ್ರಾಯೇಲರ ಶತ್ರುಗಳ ಮೇಲೆ ಯುದ್ಧ ಮಾಡಿದರೆಂದು ಜನರು ಕೇಳಿದಾಗ, ದೇವರ ಭಯವು ಆ ದೇಶದಲ್ಲಿ ಸಕಲ ರಾಜ್ಯಗಳ ಮೇಲೆ ಇತ್ತು.
30 So Jehoshaphat's kingdom was at peace, for his Father gave him rest on every side. ಹೀಗೆ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು. ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿಕೊಟ್ಟರು.
31 Jehoshaphat reigned over Judah, crowned at thirty-five, twenty-five years in Jerusalem; his mother, Azubah daughter of Shilhi. ಯೆಹೋಷಾಫಾಟನು ಯೆಹೂದ್ಯರ ಮೇಲೆ ಆಳಿದನು. ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.
32 He walked in his father Asa's ways, never turning aside, doing right in our Father's eyes. ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
33 Yet the high places stayed; the people still had not set their hearts on their ancestors' God. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಜನರು ಅವರ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸ್ಥಿರ ಮಾಡಿಕೊಂಡಿರಲಿಲ್ಲ.
34 Jehoshaphat's other acts, first to last, are in Jehu son of Hanani's records, found in the Book of Kings of Israel. ಯೆಹೋಷಾಫಾಟನ ಇತರ ಕ್ರಿಯೆಗಳು, ಆರಂಭದಿಂದ ಅಂತ್ಯದವರೆಗೆ, ಇಸ್ರಾಯೇಲರ ಅರಸುಗಳ ಗ್ರಂಥದಲ್ಲಿ, ಅಂದರೆ, ಹನಾನೀಯ ಮಗನಾದ ಯೇಹುವಿನ ಗ್ರಂಥದಲ್ಲಿ ಬರೆದಿರುತ್ತವೆ.
35 Later Jehoshaphat king of Judah allied with Ahaziah king of Israel, who did evil. ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು, ಬಹು ದುಷ್ಟನಾಗಿ ನಡೆದ ಇಸ್ರಾಯೇಲಿನ ಅರಸನಾದ ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡನು.
36 He joined with him to build a fleet of trading ships to go to Tarshish, built at Ezion-geber. ಇದಲ್ಲದೆ ತಾರ್ಷೀಷಿಗೆ ಹೋಗುವುದಕ್ಕಾಗಿ ಹಡಗುಗಳನ್ನು ಮಾಡಿಸಲು, ಅವನ ಸಂಗಡ ಒಪ್ಪಂದ ಮಾಡಿಕೊಂಡು ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಮಾಡಿಸಿದರು.
37 Eliezer son of Dodavahu of Mareshah prophesied against Jehoshaphat: "For allying with Ahaziah, our Father broke your work apart." The ships wrecked and couldn't sail to Tarshish. ಆಗ ಮಾರೇಷಾ ಊರಿನ ದೋದವಾಹುವಿನ ಮಗನಾದ ಎಲೀಯೆಜೆರನು ಯೆಹೋಷಾಫಾಟನಿಗೆ ವಿರೋಧವಾಗಿ ಪ್ರವಾದಿಸಿ, “ನೀನು ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡಿದ್ದರಿಂದ, ಯೆಹೋವ ದೇವರು ನೀನು ಮಾಡಿದವುಗಳನ್ನು ನಾಶಮಾಡುವರು,” ಎಂದು ಹೇಳಿದನು. ಅದರಂತೆಯೇ, ಆ ಹಡಗುಗಳು ತಾರ್ಷೀಷಿಗೆ ಹೋಗದೆ ಒಡೆದುಹೋದವು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]