Skip to content
The Believer's Library

Biblica® Open Kannada Contemporary Version 2022

2 Chronicles 21 OKCV

Show OKCV only
Verse × ×
1 Jehoshaphat rested with his ancestors, buried with them in the City of David; his son Jehoram reigned instead. ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.
2 Jehoram's brothers, sons of Jehoshaphat: Azariah, Jehiel, Zechariah, Azariah, Michael, Shephatiah. All these were sons of Jehoshaphat king of Israel. ಇವನ ಸಹೋದರರಾಗಿರುವ ಯೆಹೋಷಾಫಾಟನ ಪುತ್ರರಾದ ಅಜರ್ಯನೂ, ಯೆಹೀಯೇಲನೂ, ಜೆಕರ್ಯನೂ, ಅಜರ್ಯನೂ, ಮೀಕಾಯೇಲನೂ, ಶೆಫಟ್ಯನೂ ಇದ್ದರು. ಇವರೆಲ್ಲರು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಪುತ್ರರು.
3 Their father gave them many gifts—silver, gold, precious things—and fortified cities in Judah, but gave the kingdom to Jehoram, because he was firstborn. ಅವರ ತಂದೆ ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಯನ್ನೂ, ಬಂಗಾರವನ್ನೂ, ಬೆಲೆಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲ ಮಗನಾದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
4 Once Jehoram rose over his father's kingdom, he grew strong and killed all his brothers with the sword, and also some of Israel's officials. ಯೆಹೋರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ, ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ, ಇಸ್ರಾಯೇಲಿನ ಪ್ರಧಾನರಲ್ಲಿ ಕೆಲವರನ್ನೂ ಖಡ್ಗದಿಂದ ಕೊಂದುಹಾಕಿದನು.
5 Jehoram was thirty-two years old when he became king, and he reigned eight years in Jerusalem. ಯೆಹೋರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
6 He walked in the way of Israel's kings, as Ahab's house had done, for Ahab's daughter was his wife, and he did evil in our Father's eyes. ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
7 Yet our Father would not destroy the house of David, because of the covenant he made with David, and his promise to give him and his sons a lamp forever. ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.
8 In Jehoram's days Edom rebelled against Judah's rule and set up their own king. ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.
9 Jehoram crossed with his commanders and all his chariots. He rose at night and struck the Edomites surrounding him and the chariot commanders. ಆಗ ಯೆಹೋರಾಮನು ತನ್ನ ಪ್ರಧಾನರ ಸಂಗಡ, ಎಲ್ಲಾ ರಥಬಲವನ್ನು ತೆಗೆದುಕೊಂಡುಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ, ತನ್ನ ರಥಗಳ ಅಧಿಪತಿಗಳನ್ನೂ ಸುತ್ತುವರೆದಿದ್ದ ಎದೋಮ್ಯರನ್ನು ಸೋಲಿಸಿದನು.
10 Edom rebelled against Judah's rule to this day; Libnah also rebelled then, because he had abandoned our Father, the God of his ancestors. ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು.
11 He built high places on Judah's hills, led Jerusalem's people to prostitute themselves, and drew Judah astray. ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಪೂಜಾಸ್ಥಳಗಳನ್ನು ಮಾಡಿ, ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ, ಹಾಗೆಯೇ ಮಾಡಲು ಯೆಹೂದದವರನ್ನು ಬಲವಂತ ಮಾಡಿದನು.
12 A letter came to him from Elijah the prophet: Your Father, God of your ancestor David, says: Because you haven't walked in the ways of your father Jehoshaphat, or the ways of Asa king of Judah, ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ,
13 but walked like Israel's kings, led Judah and Jerusalem's people to be unfaithful, as Ahab's house led Israel, and killed your brothers—your father's house—men better than you, ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು, ಅಹಾಬನ ಮನೆಯವರು ದೇವದ್ರೋಹ ಮಾಡಿದಂತೆ, ಯೆಹೂದದವರನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ ದ್ರೋಹ ಮಾಡಲು ಪ್ರೇರೇಪಿಸಿ, ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆಯವರಾದ ನಿನ್ನ ಸಹೋದರರನ್ನು ಕೊಂದುಹಾಕಿದ್ದರಿಂದ,
14 now your Father will strike your people, children, wives, and all your goods with a great plague. ಯೆಹೋವ ದೇವರು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ, ನಿನ್ನ ಮಕ್ಕಳನ್ನೂ, ನಿನ್ನ ಹೆಂಡತಿಯರನ್ನೂ, ನಿನ್ನ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾರೆ.
15 You will have a severe intestinal disease, until day by day your intestines come out. ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವುದರಿಂದ ನಿನ್ನ ಕರುಳುಗಳು ಹೊರಕ್ಕೆ ಬರುವವರೆಗೆ ಕರುಳುಬೇನೆಯ ರೋಗದಿಂದ ನಿನಗೆ ಕಠಿಣರೋಗ ಬರುವುದು,’ ” ಎಂದು ಬರೆದಿದ್ದನು.
16 Our Father stirred up against Jehoram the spirit of the Philistines and Arabs near the Cushites. ಇದಲ್ಲದೆ ಕೂಷ್ಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಯೆಹೋವ ದೇವರು ಎಬ್ಬಿಸಿದರು.
17 They attacked Judah, invaded it, and seized all the goods found in the king's palace, plus his sons and wives, leaving him no son except Jehoahaz, his youngest. ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ನುಗ್ಗಿ, ಅರಸನ ಅರಮನೆಯಲ್ಲಿ ಸಿಕ್ಕಿದ ಸಮಸ್ತ ಸ್ಥಿತಿಯನ್ನೂ, ಅವನ ಪುತ್ರರನ್ನೂ, ಅವನ ಹೆಂಡತಿಯರನ್ನೂ ತೆಗೆದುಕೊಂಡು ಹೋದರು. ಆದ್ದರಿಂದ ಅವನ ಪುತ್ರರಲ್ಲಿ ಚಿಕ್ಕವನಾದ ಯೆಹೋವಾಹಾಜನ ಹೊರತು ಅವನಿಗೆ ಪುತ್ರರು ಯಾರೂ ಉಳಿಯಲಿಲ್ಲ.
18 After all this, our Father struck him with an incurable disease in his intestines. ಇದೆಲ್ಲದರ ತರುವಾಯ ಯೆಹೋವ ದೇವರು ಯೆಹೋರಾಮನ ಕರುಳುಗಳಲ್ಲಿ ವಾಸಿಯಾಗಲಾರದ ರೋಗದಿಂದ ಅವನನ್ನು ಬಾಧಿಸಿದರು.
19 In time, after two years, his intestines came out because of his disease, and he died in agony. His people made no fire for him, as they had for his ancestors. ಎರಡು ವರ್ಷವಾದ ತರುವಾಯ, ಅವನ ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆ ಅವನು ಕಡುಬೇನೆಯಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೆ ಗೌರವಕ್ಕೋಸ್ಕರ ಅಗ್ನಿಕುಂಡ ಹಚ್ಚಲಿಲ್ಲ.
20 He was thirty-two when crowned king; he reigned eight years in Jerusalem. He died unmourned, buried in the City of David, but not among the kings' tombs. ಯೆಹೋರಾಮ್ ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಗಳಲ್ಲಿ ಅಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]