Skip to content
The Believer's Library

Biblica® Open Kannada Contemporary Version 2022

2 Chronicles 22 OKCV

Show OKCV only
Verse × ×
1 The people of Jerusalem made his youngest son Ahaziah king in his place, since the raiders who came with the Arabs into the camp had killed all the older sons. So Ahaziah son of Jehoram king of Judah became king. ಯೆರೂಸಲೇಮಿನ ನಿವಾಸಿಗಳು ಯೆಹೋರಾಮನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯನನ್ನು ಅರಸನಾಗಿ ಮಾಡಿದರು. ಏಕೆಂದರೆ ಪಾಳೆಯಕ್ಕೆ ಬಂದ ಅರಬಿಯರ ಗುಂಪು ಹಿರಿಯ ಮಕ್ಕಳನ್ನೆಲ್ಲಾ ಕೊಂದುಹಾಕಿದರು. ಹೀಗೆಯೇ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಲು ಆರಂಭಿಸಿದನು.
2 Ahaziah became king at twenty-two and reigned one year in Jerusalem. His mother was Athaliah, granddaughter of Omri. ಅಹಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಅತಲ್ಯಳು, ಈಕೆಯು ಒಮ್ರಿಯ ಮೊಮ್ಮಗಳು.
3 He too followed the ways of Ahab's house, for his mother counseled him to do evil. ಅವನ ತಾಯಿಯ ದುರ್ಬೋಧನೆಯಿಂದ ಅವನು ದುಷ್ಟನಾಗಿ ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದನು.
4 He did evil in our Father's eyes, like Ahab's house, for after his father's death they were his counselors, to his ruin. ಅವನು ಅಹಾಬನ ಕುಟುಂಬದಂತೆಯೇ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು, ಏಕೆಂದರೆ ಅವನ ತಂದೆಯ ಮರಣದ ನಂತರ ಅವರು ಅವನ ಸಲಹೆಗಾರರಾದರು. ಆದಕಾರಣ ಎಲ್ಲವೂ ನಾಶವಾಯಿತು.
5 He followed their advice too, joining Joram son of Ahab, Israel's king, to fight Hazael king of Aram at Ramoth-gilead, where the Arameans wounded Joram. ಅಹಜ್ಯನು ಇವರ ಯೋಚನೆಯ ಪ್ರಕಾರ ನಡೆದು, ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ಯೋರಾಮನ ಸಂಗಡ ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.
6 So he returned to Jezreel to recover from the wounds he received at Ramah fighting Hazael king of Aram. Ahaziah son of Jehoram king of Judah went down to Jezreel to see Joram son of Ahab, because he was wounded. ಆದ್ದರಿಂದ ಅವನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಜರ್ಯನು ಅವನನ್ನು ನೋಡಲು ಹೋದನು.
7 Ahaziah's downfall came from our Father when he visited Joram. On arriving, he went out with Jehoram against Jehu son of Nimshi, whom our Father had anointed to destroy the house of Ahab. ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.
8 As Jehu carried out judgment on Ahab's house, he found Judah's officials and Ahaziah's nephews who served Ahaziah, and killed them. ಯೇಹುವು ಅಹಾಬನ ಮನೆಯ ಮೇಲೆ ನ್ಯಾಯ ತೀರಿಸುವಂತೆ ಅವನು ಯೆಹೂದ್ಯರ ಪ್ರಧಾನರನ್ನೂ, ಅಹಜ್ಯನನ್ನು ಸೇವಿಸುತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಕಂಡುಹಿಡಿದು, ಅವರನ್ನು ಕೊಂದುಹಾಕಿದನು.
9 He searched for Ahaziah, who was captured while hiding in Samaria. They brought him to Jehu and killed him, then buried him, saying, "He is Jehoshaphat's son, who sought our Father with all his heart." So Ahaziah's house had no one strong enough to hold the kingdom. ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
10 When Athaliah, Ahaziah's mother, saw her son was dead, she set out to destroy all the royal offspring of Judah's house. ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ಯೆಹೂದನ ಮನೆಯ ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.
11 But Jehoshabeath the king's daughter took Joash son of Ahaziah, stealing him from among the royal sons about to be killed, and hid him with his nurse in a bedroom. So Jehoshabeath, King Jehoram's daughter, Jehoiada the priest's wife and Ahaziah's sister, hid him from Athaliah, so she did not kill him. ಆದರೆ ಅರಸನಾದ ಯೆಹೋರಾಮನ ಮಗಳಾದ ಯೆಹೋಷಬತಳು, ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನನ್ನೂ ಅವನ ದಾದಿಯನ್ನೂ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು. ಹೀಗೆಯೇ ಅರಸನಾದ ಯೆಹೋರಾಮನ ಪುತ್ರಿಯರಾಗಿರುವ ಯಾಜಕನಾದ ಯೆಹೋಯಾದಾವನ ಹೆಂಡತಿಯಾಗಿರುವ ಅಹಜ್ಯನ ಸಹೋದರಿಯಾದ ಯೆಹೋಷಬತಳು, ಅತಲ್ಯಳು ಅವನನ್ನು ಕೊಲ್ಲದ ಹಾಗೆ ಬಚ್ಚಿಟ್ಟಳು.
12 He stayed hidden with them in the house of our Father six years while Athaliah reigned over the land. ಹೀಗೆಯೇ ಇವನು ಅವರ ಸಂಗಡ ಆರು ವರ್ಷ ದೇವರ ಆಲಯದಲ್ಲಿ ಗುಪ್ತವಾಗಿದ್ದನು. ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]