Skip to content
The Believer's Library

Biblica® Open Kannada Contemporary Version 2022

2 Chronicles 23 OKCV

Show OKCV only
Verse × ×
1 In the seventh year Jehoiada took courage and made a covenant with the commanders of hundreds—Azariah son of Jeroham, Ishmael son of Jehohanan, Azariah son of Obed, Maaseiah son of Adaiah, and Elishaphat son of Zichri. ಏಳನೆಯ ವರ್ಷದಲ್ಲಿ ಯೆಹೋಯಾದಾವನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿಗಳಾಗಿರುವ ಯೆರೋಹಾಮನ ಮಗ ಅಜರ್ಯನನ್ನೂ, ಯೆಹೋಹಾನಾನನ ಮಗ ಇಷ್ಮಾಯೇಲನನ್ನೂ, ಓಬೇದನ ಮಗ ಅಜರ್ಯನನ್ನೂ, ಅದಾಯನ ಮಗ ಮಾಸೇಯನನ್ನೂ, ಜಿಕ್ರಿಯ ಮಗ ಎಲಿಷಾಫಾಟನನ್ನೂ ಕರೆದುಕೊಂಡು, ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು.
2 They traveled through Judah, gathered the Levites from all its cities and the family heads of Israel, and came to Jerusalem. ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲಿನ ಕುಟುಂಬದಲ್ಲಿ ಮುಖ್ಯಸ್ಥರನ್ನೂ ಕೂಡಿಸಿಕೊಂಡು, ಯೆರೂಸಲೇಮಿಗೆ ಬಂದರು.
3 The whole assembly made a covenant with the king in the house of our Father. Jehoiada told them, "Look, the king's son will reign, as our Father promised about David's sons. ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರಸನ ಸಂಗಡ ಒಡಂಬಡಿಕೆಯನ್ನು ಮಾಡಿದರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವ ದೇವರು ದಾವೀದನ ವಂಶದವರ ಬಗ್ಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಆಳತಕ್ಕವನು ಇವನೇ.
4 Do this: a third of you—priests and Levites entering on the Sabbath—will be gatekeepers at the thresholds. ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು.
5 A third at the king's house, a third at the Gate of the Foundation, and all the people in the courts of the house of our Father. ಇನ್ನೊಂದು ಭಾಗವು ಅರಮನೆಯನ್ನೂ, ಮತ್ತೊಂದು ಭಾಗವು ಅಸ್ತಿವಾರದ ಬಾಗಿಲನ್ನೂ, ಇತರ ಸಮಸ್ತ ಜನರೂ ಯೆಹೋವ ದೇವರ ಆಲಯದ ಅಂಗಳದಲ್ಲಿಯೂ ಇರಬೇಕು.
6 Let no one enter the house of our Father except the priests and the serving Levites; they may enter, for they are holy. Everyone else is to keep guard for our Father. ಆದರೆ ಯಾಜಕರೂ, ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಬೇರೆ ಯಾರೂ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪ್ರತಿಷ್ಠಿತರಾದುದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಯೆಹೋವ ದೇವರ ಆಜ್ಞಾನುಸಾರವಾಗಿ ಹೊರಗಿರಬೇಕು.
7 The Levites must surround the king, each with weapon in hand; whoever enters the house is to be put to death. Stay with the king wherever he comes and goes." ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾದರೂ ಆಲಯದಲ್ಲಿ ಬಂದರೆ, ಅವನನ್ನು ಸಂಹರಿಸಬೇಕು. ಆದರೆ ಅರಸನು ಒಳಗೆ ಬರುವಾಗಲೂ, ಹೊರಗೆ ಹೋಗುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಹೇಳಿದನು.
8 The Levites and all Judah did exactly as Jehoiada the priest commanded. Each took his men—those coming on duty the Sabbath with those going off—since Jehoiada the priest did not dismiss any of the divisions. ಹೀಗೆಯೇ ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಲೇವಿಯರೂ ಸಮಸ್ತ ಯೆಹೂದದವರೂ ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಕೂಡಿಸಿಕೊಂಡನು. ಏಕೆಂದರೆ ಯಾಜಕನಾದ ಯೆಹೋಯಾದನು ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ.
9 Jehoiada the priest gave the commanders of hundreds King David's spears and large and small shields, kept in our Father's house. ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು,
10 He stationed all the people, each with weapon in hand, from the south side of the temple to the north side, surrounding the altar, the temple, and the king. ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಸಮಸ್ತ ಜನರನ್ನೂ ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ಇರಿಸಿದನು.
11 They brought out the king's son, crowned him, gave him the covenant law, and made him king. Jehoiada and his sons anointed him and shouted, "Long live the king!" ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.
12 Hearing the sound of people running and praising the king, Athaliah came to them at our Father's house. ಆದರೆ ಅರಸನನ್ನು ಹರಸುತ್ತಾ, ಓಡುತ್ತಾ ಇದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ, ಅವಳು ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.
13 She looked—there was the king standing by his pillar at the entrance, officers and trumpeters beside him, all the people of the land rejoicing and blowing trumpets, singers with instruments leading the praise. Then Athaliah tore her clothes and shouted, "Treason! Treason!" ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.
14 Jehoiada the priest summoned the commanders of hundreds over the army and said, "March her out through the ranks; kill with the sword anyone who follows her." For the priest had said, "Do not kill her in the house of our Father." ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.
15 They seized her; when she reached the Horse Gate's entrance by the king's house, they killed her there. ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಅರಮನೆಯ ಬಳಿಯಲ್ಲಿ ಕುದುರೆ ಬಾಗಿಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದುಹಾಕಿದರು.
16 Then Jehoiada made a covenant among himself, all the people, and the king to be our Father's people. ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.
17 All the people went to Baal's temple and tore it down, smashed its altars and idols, and killed Mattan, Baal's priest, before the altars. ಸಮಸ್ತ ಜನರು ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು.
18 Jehoiada put the Levite priests in charge of our Father's house, whom David had assigned there, to offer burnt offerings to our Father, as written in Moses' law, with joy and song as David had ordered. ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು.
19 He stationed gatekeepers at the gates of our Father's house so no one unclean in any way could enter. ಯೆಹೋವ ದೇವರ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಿಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿದನು.
20 He took the commanders of hundreds, the nobles, the rulers of the people, and all the people of the land, and brought the king down from the house of our Father, through the Upper Gate into the king's house, and seated him on the royal throne. ಅವನು ಶತಾಧಿಪತಿಗಳನ್ನೂ, ಗೌರವಸ್ಥರನ್ನೂ, ಜನರ ಅಧಿಪತಿಗಳನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕರೆತಂದನು. ಅವರು ಹೆಬ್ಬಾಗಿಲಿನಿಂದ ಅರಮನೆಗೆ ಬಂದು, ಅರಸನನ್ನು ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದರು.
21 All the people of the land rejoiced, and the city grew calm, for Athaliah was killed with the sword. ಅತಲ್ಯಳನ್ನು ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]