Skip to content
The Believer's Library

Biblica® Open Kannada Contemporary Version 2022

2 Chronicles 25 OKCV

Show OKCV only
Verse × ×
1 Amaziah became king at twenty-five and reigned twenty-nine years in Jerusalem. His mother was Jehoaddan of Jerusalem. ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್, ಅವಳು ಯೆರೂಸಲೇಮಿನವಳು.
2 He did what was right in the eyes of our Father, but not wholeheartedly. ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.
3 Once the kingdom was firmly his, he executed the servants who had killed his father the king. ಅವನು ರಾಜ್ಯವನ್ನು ಸ್ಥಿರಪಡಿಸಿಕೊಂಡ ತರುವಾಯ, ಅರಸನಾಗಿದ್ದ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆಯನ್ನು ವಿಧಿಸಿದನು.
4 But he did not put their children to death, as written in the Law, the book of Moses, where our Father commanded, "Parents must not die for their children, nor children for their parents; each dies for his own sin." ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅಮಚ್ಯನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ.
5 Amaziah gathered Judah, organized them by ancestral houses under commanders of thousands and hundreds, for all Judah and Benjamin. He counted those twenty and up: 300,000 chosen men fit for war, handling spear and shield. ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿಕೊಂಡು, ಯೆಹೂದ ಬೆನ್ಯಾಮೀನ್ಯರೆಲ್ಲರಲ್ಲಿ ತಮ್ಮ ಪಿತೃಗಳ ಮನೆಗಳ ಪ್ರಕಾರ ಅವರನ್ನು ಸಾವಿರ ಜನರ ಮೇಲೆ ಅಧಿಪತಿಗಳಾಗಿಯೂ, ನೂರು ಜನರ ಮೇಲೆ ಅಧಿಪತಿಗಳಾಗಿಯೂ ಮಾಡಿದನು. ಅವನು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ಪ್ರಾಯವುಳ್ಳವರನ್ನು ಲೆಕ್ಕಿಸಿ ಆಯ್ದುಕೊಂಡನು. ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ, ಖೇಡ್ಯವನ್ನೂ ಹಿಡಿದುಕೊಂಡಿರುವಂಥ, ಮೂರು ಲಕ್ಷ ಮಂದಿಯನ್ನು ಕೂಡಿಸಿದನು.
6 He also hired 100,000 strong warriors from Israel for about 7,500 pounds of silver. ಇದಲ್ಲದೆ ಇಸ್ರಾಯೇಲಿನವರಿಗೆ 3,400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟು, ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.
7 A man of our Father came to him: "King, don't let Israel's army go with you, for our Father is not with Israel—all these Ephraimites. ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದಿರಲಿ. ಏಕೆಂದರೆ ಯೆಹೋವ ದೇವರು ಇಸ್ರಾಯೇಲರಾದ ಎಫ್ರಾಯೀಮನ ಸಮಸ್ತ ಜನರ ಸಂಗಡ ಇರುವುದಿಲ್ಲ.
8 Even if you fight bravely, our Father will overthrow you before the enemy, for our Father has power to help or overthrow." ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.
9 Amaziah asked the man of our Father, "But what about the roughly 7,500 pounds of silver I gave Israel's troops?" He replied, "Our Father can give you far more than this." ಆಗ ಅಮಚ್ಯನು ದೇವರ ಮನುಷ್ಯನಿಗೆ, “ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ 3,400 ಕಿಲೋಗ್ರಾಂ ಬೆಳ್ಳಿಯನ್ನು ಏನು ಮಾಡಬೇಕು?” ಎಂದನು. ಅದಕ್ಕೆ ದೇವರ ಮನುಷ್ಯನು, “ಯೆಹೋವ ದೇವರು ಇದಕ್ಕಿಂತ ಅಧಿಕವಾಗಿಯೇ ನಿನಗೆ ಕೊಡಲು ಶಕ್ತರು,” ಎಂದನು.
10 So Amaziah sent home the troops that came to him from Ephraim. They burned with anger against Judah and returned home enraged. ಆಗ ಅಮಚ್ಯನು ಎಫ್ರಾಯೀಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವರನ್ನು ಕಳುಹಿಸಿಬಿಟ್ಟನು. ಆದಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪಗೊಂಡವರಾಗಿ ತಮ್ಮ ಮನೆಗೆ ತಿರುಗಿದರು.
11 But Amaziah took courage, led out his people to the Valley of Salt, and struck down 10,000 men of Seir. ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡೆಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ, ಅಲ್ಲಿ ಸೇಯೀರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
12 Judah's men also captured 10,000 alive, took them to the cliff top, and threw them down, smashing them all to pieces. ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದ್ಯರು ಸೆರೆಯಾಗಿ ಒಯ್ದು, ಬಂಡೆಯ ಶಿಖರಕ್ಕೆ ಅವರನ್ನು ಕರೆದುಕೊಂಡು ಹೋಗಿ, ಅಲ್ಲಿಂದ ಅವರನ್ನು ದಬ್ಬಿ ಸಾಯಿಸಿದರು.
13 Meanwhile the troops Amaziah sent back, not letting them join the battle, raided Judah's cities from Samaria to Beth-horon, struck down 3,000 people, and carried off much plunder. ತಮ್ಮ ಸಂಗಡ ಯುದ್ಧಕ್ಕೆ ಬಾರದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ದಾಳಿಮಾಡಿ, ಸಮಾರ್ಯ ಮೊದಲುಗೊಂಡು ಬೇತ್ ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಕೊಂದು, ಬಹು ಕೊಳ್ಳೆಯನ್ನು ತೆಗೆದುಕೊಂಡು ಹೋದರು.
14 After Amaziah defeated the Edomites, he brought back the gods of Seir's people, set them up as his own gods, bowed to them, and burned offerings to them. ಅಮಚ್ಯನು ಎದೋಮ್ಯರನ್ನು ಹೊಡೆದು ತಿರುಗಿ ಬಂದ ತರುವಾಯ, ಸೇಯೀರನ ಮಕ್ಕಳ ದೇವರುಗಳನ್ನು ತೆಗೆದುಕೊಂಡು ಬಂದು, ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು, ಅವುಗಳ ಮುಂದೆ ಅಡ್ಡಬಿದ್ದು, ಅವುಗಳಿಗೆ ಧೂಪವನ್ನು ಸುಟ್ಟನು.
15 So our Father's anger burned against Amaziah, and he sent a prophet, who asked, "Why seek this people's gods, which couldn't save their own from your hand?" ಆದಕಾರಣ ಯೆಹೋವ ದೇವರ ಕೋಪವು ಅಮಚ್ಯನ ಮೇಲೆ ಬಂತು. ದೇವರು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿದರು. ಪ್ರವಾದಿಯು ಅರಸನಿಗೆ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆ ಹೋದ ದೇವರುಗಳನ್ನು ನೀನು ವಿಚಾರಿಸುವುದೇನು?” ಎಂದನು.
16 As he spoke, the king said, "Did we make you the king's counselor? Stop! Why be killed?" The prophet stopped but said, "I know our Father has determined to destroy you, because you did this and ignored my counsel." ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.
17 Amaziah king of Judah consulted his advisers, then sent to Joash son of Jehoahaz, son of Jehu, king of Israel: "Come, let us face each other in battle." ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲರ ಅರಸನಾದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರಿಸೋಣ ಬಾ,” ಎಂದು ದೂತರ ಮುಖಾಂತರ ಹೇಳಿ ಕಳುಹಿಸಿದನು.
18 Joash king of Israel answered Amaziah king of Judah: "A Lebanon thistle sent to a Lebanon cedar, saying, 'Give your daughter to my son as wife.' But a wild Lebanon beast passed and trampled the thistle. ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.
19 You said, 'Look, I have struck down Edom,' and your heart grew proud, boasting. Stay home. Why court disaster and fall—you and Judah with you?" ನೀನು ಎದೋಮ್ಯರನ್ನು ಸೋಲಿಸಿ ಕೀರ್ತಿಯನ್ನು ಪಡೆದುಕೊಂಡೆನಲ್ಲಾ ಎಂದು ನಿನ್ನ ಹೃದಯವು ಗರ್ವಪಡದಿರಲಿ. ಈಗ ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದನು.
20 But Amaziah wouldn't listen—this was from our Father, to hand them over for seeking Edom's gods. ಆದರೆ ಅಮಚ್ಯನು ಕೇಳದೆ ಹೋದನು. ಏಕೆಂದರೆ ಯೆಹೂದ್ಯರು ಎದೋಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ, ಅವರನ್ನು ಯೆಹೋವಾಷನ ಕೈಯಲ್ಲಿ ಒಪ್ಪಿಸುವಂತೆ ಇದು ದೇವರಿಂದ ಆಯಿತು.
21 So Joash king of Israel marched up, and he and Amaziah king of Judah faced off at Beth-shemesh in Judah. ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ, ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.
22 Judah was defeated by Israel, and everyone fled to his own home. ಯೆಹೂದದವರು ಇಸ್ರಾಯೇಲರ ಮುಂದೆ ಸೋತುಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಓಡಿಹೋದರು.
23 Joash king of Israel captured Amaziah king of Judah, son of Joash, son of Jehoahaz, at Beth-shemesh, took him to Jerusalem, and broke down its wall from the Ephraim Gate to the Corner Gate—about 600 feet. ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಊರಿನ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು, ಮೂಲೆಯ ಬಾಗಿಲವರೆಗೂ, 180 ಮೀಟರ್ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.
24 He took all the gold, silver, and articles found in the house of our Father in Obed-edom's care, plus the palace treasures and hostages, and returned to Samaria. ಅವನು ಓಬೇದ್ ಏದೋಮನ ಬಳಿಯಲ್ಲಿ ಯೆಹೋವ ದೇವರ ಆಲಯದಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ, ಅರಮನೆಯ ಬೊಕ್ಕಸಗಳನ್ನೂ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.
25 Amaziah son of Joash, king of Judah, lived fifteen years after Joash son of Jehoahaz, king of Israel, died. ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೆಹೋವಾಷನ ಮರಣದ ತರುವಾಯ, ಯೆಹೂದದ ಅರಸನಾದ ಯೋವಾಷನ ಮಗನಾಗಿರುವ ಅಮಚ್ಯನು ಹದಿನೈದು ವರ್ಷ ಬದುಕಿದನು.
26 The rest of Amaziah's acts, first to last, are they not written in the Book of the Kings of Judah and Israel? ಅಮಚ್ಯನ ಆಳ್ವಿಕೆಯ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಯೆಹೂದ ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
27 After Amaziah turned from following our Father, they conspired against him in Jerusalem, and he fled to Lachish. But they sent men after him there and killed him. ಅಮಚ್ಯನು ಯೆಹೋವ ದೇವರ ಕಡೆಯಿಂದ ತೊಲಗಿಹೋದ ತರುವಾಯ, ಯೆರೂಸಲೇಮಿನವರು ಅವನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.
28 They brought him back on horseback and buried him with his ancestors in the City of Judah. ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]