Skip to content
The Believer's Library

Biblica® Open Kannada Contemporary Version 2022

2 Chronicles 26 OKCV

Show OKCV only
Verse × ×
1 Then all the people of Judah made Uzziah, sixteen years old, king in place of his father Amaziah. ಆಗ ಯೆಹೂದ ಜನರೆಲ್ಲರು ಹದಿನಾರು ವರ್ಷದವನಾದ ಉಜ್ಜೀಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
2 He rebuilt Eloth and restored it to Judah after the king rested with his ancestors. ಅರಸನು ತನ್ನ ಪಿತೃಗಳ ಜೊತೆ ಸೇರಿದ ತರುವಾಯ, ಉಜ್ಜೀಯನು ಏಲೋತ್ ಪಟ್ಟಣವನ್ನು ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿದನು.
3 Uzziah became king at sixteen and reigned fifty-two years in Jerusalem. His mother was Jecoliah of Jerusalem. ಉಜ್ಜೀಯನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು.
4 He did what was right in our Father's eyes, just as his father Amaziah had done. ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
5 He devoted himself to seeking our Father in Zechariah's days, who taught him to fear our Father; and while he sought our Father, he prospered. ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.
6 He went out and fought the Philistines, tearing down the walls of Gath, Jabneh, and Ashdod. He built cities near Ashdod and among the Philistines. ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ, ಗತ್‌ನ ಗೋಡೆಯನ್ನೂ, ಯಬ್ನೆಯ ಗೋಡೆಯನ್ನೂ, ಅಷ್ಡೋದಿನ ಗೋಡೆಯನ್ನೂ ಕೆಡವಿಬಿಟ್ಟು, ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
7 Our Father helped him against the Philistines, the Arabs of Gur-baal, and the Meunites. ಇದಲ್ಲದೆ ಫಿಲಿಷ್ಟಿಯರ ಮೇಲೆಯೂ, ಗುರ್ಬಾಳಿನಲ್ಲಿ ವಾಸವಾಗಿದ್ದ ಅರಬಿಯರ ಮೇಲೆಯೂ, ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿದಾಗ, ದೇವರು ಅವನಿಗೆ ಸಹಾಯ ಮಾಡಿದರು.
8 The Ammonites paid tribute to Uzziah, and his fame reached the border of Egypt, for he had grown very strong. ಅಮ್ಮೋನ್ಯರು ಉಜ್ಜೀಯನಿಗೆ ಕಪ್ಪವನ್ನು ಕೊಟ್ಟರು. ಆದ್ದರಿಂದ ಅವನ ಹೆಸರು ಈಜಿಪ್ಟಿನ ಪ್ರದೇಶದವರೆಗೂ ಬಹಳವಾಗಿ ಹಬ್ಬಿತು. ಅವನು ಬಹಳವಾಗಿ ಬಲಪಡಿಸಿಕೊಂಡಿದ್ದನು.
9 Uzziah built towers in Jerusalem at the Corner Gate, the Valley Gate, and the Angle, and fortified them. ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಿಲ ಬಳಿಯಲ್ಲಿಯೂ, ತಗ್ಗಿನ ಬಾಗಿಲ ಬಳಿಯಲ್ಲಿಯೂ, ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು.
10 He built desert towers and dug many cisterns, for he had large herds in the lowlands and plain. He kept farmers and vinedressers in the hills and fertile fields, for he loved the soil. ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
11 Uzziah had an army of trained soldiers going out to war by divisions, numbered by Jeiel the secretary and Maaseiah the officer, under Hananiah, one of the king's commanders. ಇದಲ್ಲದೆ ಲೇಖಕನಾದ ಯೆಹೀಯೇಲನ ಕೈಯಿಂದಲೂ, ಅಧಿಪತಿಯಾದ ಮಾಸೇಯನ ಕೈಯಿಂದ ಬರೆದಿರುವ ಲೆಕ್ಕದ ಪ್ರಕಾರ, ಗುಂಪುಗುಂಪಾಗಿ ಯುದ್ಧಕ್ಕೆ ಹೋಗುವ ಯುದ್ಧವೀರರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.
12 The total number of clan leaders commanding the mighty warriors was 2,600. ಪರಾಕ್ರಮಶಾಲಿಗಳಲ್ಲಿ ಕುಟುಂಬಗಳ ಮುಖ್ಯಸ್ಥರ ಲೆಕ್ಕವು 2,600 ಮಂದಿ.
13 Under their command was an army of 307,500, trained to make war with great power, to help the king against his enemies. ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ 3,07,500 ಮಂದಿಯುಳ್ಳ ಸೈನ್ಯವಿತ್ತು.
14 Uzziah equipped the whole army with shields, spears, helmets, coats of armor, bows, and slingstones. ಉಜ್ಜೀಯನು ಸಮಸ್ತ ದಂಡಿನಲ್ಲಿ ಅವರ ನಿಮಿತ್ತ ಗುರಾಣಿಗಳನ್ನೂ, ಈಟಿಗಳನ್ನೂ, ಶಿರಸ್ತ್ರಾಣಗಳನ್ನೂ, ಉಕ್ಕಿನ ಕವಚಗಳನ್ನೂ, ಬಿಲ್ಲುಗಳನ್ನೂ, ಕವಣೆಗಳನ್ನೂ ಸಿದ್ಧಮಾಡಿದನು.
15 In Jerusalem he made devices invented by skilled men, set on the towers and corners to shoot arrows and hurl large stones. His fame spread far and wide, for he was helped wonderfully until he grew strong. ಇದಲ್ಲದೆ ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ, ಮಣ್ಣುದಿಬ್ಬಗಳ ಮೇಲೆಯೂ ಇರಲು, ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದ್ದರಿಂದ ಅವನ ಹೆಸರು ಬಹಳ ದೂರದವರೆಗೆ ಪ್ರಸಿದ್ಧಿಯಾಯಿತು. ಬಹು ಬಲಿಷ್ಠನಾಗುವ ಪರ್ಯಂತರ ಅವನು ಬಹು ಆಶ್ಚರ್ಯಕರವಾಗಿ ಸಹಾಯ ಪಡೆಯುತ್ತಿದ್ದನು.
16 When Uzziah grew strong, his heart grew proud, leading to his ruin. He was unfaithful to our Father, entering the temple of our Father to burn incense on the incense altar. ಆದರೆ ಅವನು ಬಲ ಹೊಂದಿದ ಮೇಲೆ ಅವನ ಗರ್ವವು ನಾಶಕ್ಕೆ ನಡೆಸಿತು. ಅವನು ಧೂಪಪೀಠದ ಮೇಲೆ ಧೂಪಸುಡುವುದಕ್ಕೂ, ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದನು.
17 Azariah the priest went in after him, with eighty courageous priests of our Father. ಆಗ ಯಾಜಕನಾದ ಅಜರ್ಯನೂ, ಅವನ ಸಂಗಡ ಯೆಹೋವ ದೇವರ ಪರಾಕ್ರಮವುಳ್ಳ ಯಾಜಕರಾದ ಎಂಬತ್ತು ಮಂದಿಯೂ ಅರಸನಾದ ಉಜ್ಜೀಯನ ಹಿಂದೆ ಪ್ರವೇಶಿಸಿ,
18 They confronted King Uzziah, saying, "It is not for you, Uzziah, to burn incense to our Father, but for the priests, Aaron's descendants, dedicated to burn incense. Leave the sanctuary; you have been unfaithful, and this brings you no honor from our Father." ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು.
19 Uzziah became furious. With a censer in his hand to burn incense, as he raged at the priests, a defiling skin disease broke out on his forehead—there before the priests in the house of our Father, beside the altar of incense. ಆಗ ಉಜ್ಜೀಯನು ಕೋಪಿಸಿಕೊಂಡನು. ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಆದರೆ ಅವನು ಯಾಜಕರ ಮೇಲೆ ಕೋಪ ಮಾಡುತ್ತಿರುವಾಗಲೇ, ಯೆಹೋವ ದೇವರ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಬಂದಿತು.
20 When Azariah the chief priest and all the priests turned to him and saw the disease on his forehead, they rushed him out, and he hurried to leave, because our Father had struck him. ಆಗ ಮುಖ್ಯಯಾಜಕನಾದ ಅಜರ್ಯನೂ, ಯಾಜಕರೆಲ್ಲರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದದ್ದರಿಂದ ಅವರು ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಹಾಕಿದರು. ಯೆಹೋವ ದೇವರು ತನ್ನನ್ನು ಬಾಧಿಸಿದ್ದರಿಂದ ಅವನು ಸ್ವತಃ ಹೊರಗೆ ಹೋಗಲು ತ್ವರೆಪಟ್ಟನು.
21 King Uzziah had the disease until his death. He lived in a separate house, still diseased, cut off from the house of our Father. His son Jotham ran the palace, governing the people of the land. ಅರಸನಾದ ಉಜ್ಜೀಯನು ಮರಣದ ದಿವಸದವರೆಗೂ ಕುಷ್ಠರೋಗಿಯಾಗಿದ್ದು ಯೆಹೋವ ದೇವರ ಆಲಯದಿಂದ ಬಹಿಷ್ಕೃತನಾದನು. ಅವನು ಕುಷ್ಠರೋಗದ ನಿಮಿತ್ತ ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅವನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.
22 The rest of Uzziah's acts, from first to last, the prophet Isaiah son of Amoz recorded. ಉಜ್ಜೀಯನ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದನು.
23 Uzziah rested with his ancestors, buried near them in a burial field belonging to the kings, for they said, "He had a skin disease." His son Jotham reigned in his place. ಉಜ್ಜೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನು ಕುಷ್ಠರೋಗಿಯಾಗಿದ್ದರಿಂದ, ಅವರು ಅವನ ಶವವನ್ನು ರಾಜಕುಟುಂಬದ ಸ್ಮಶಾನ ಭೂಮಿಯ ಹತ್ತಿರದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]