Skip to content
The Believer's Library

Biblica® Open Kannada Contemporary Version 2022

2 Chronicles 27 OKCV

Show OKCV only
Verse × ×
1 Jotham was twenty-five when he became king; he reigned sixteen years in Jerusalem. His mother was Jerushah, daughter of Zadok. ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಅವನ ತಾಯಿ.
2 He did right in the eyes of our Father, as his father Uzziah had done—except he did not enter the temple of our Father. Yet the people still acted wrongfully. ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು. ಆದರೆ ಅವನ ತಂದೆಯಂತೆ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಲಿಲ್ಲ. ಆಗ ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
3 He built the Upper Gate of our Father's house, and built much on Ophel's wall. ಅವನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿ, ಓಫೇಲ್ ಗೋಡೆಯನ್ನು ಎತ್ತರವಾಗಿ ಕಟ್ಟಿಸಿದನು.
4 He built cities in Judah's highlands, and in the forests he built forts and towers. ಇದಲ್ಲದೆ ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳ ಪ್ರದೇಶದಲ್ಲಿ ಕೋಟೆಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು.
5 He fought the king of the Ammonites and defeated them. That year the Ammonites gave him 7,500 pounds of silver, 50,000 bushels of wheat, and 50,000 of barley—the same in the second and third years. ಯೋತಾಮನು ಅಮ್ಮೋನ್ಯರ ಅರಸನ ಸಂಗಡ ಯುದ್ಧಮಾಡಿ ಅವನನ್ನು ಜಯಿಸಿದನು. ಆದ್ದರಿಂದ ಅಮ್ಮೋನಿಯರು ಅದೇ ವರ್ಷದಲ್ಲಿ 3,400 ಕಿಲೋಗ್ರಾಂ ಬೆಳ್ಳಿ, 1,600 ಮೆಟ್ರಿಕ್ ಟನ್ ಗೋಧಿ, 1,350 ಮೆಟ್ರಿಕ್ ಟನ್ ಜವೆಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನಿಯರು ಎರಡನೆಯ ವರ್ಷದಲ್ಲಿಯೂ, ಮೂರನೆಯ ವರ್ಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.
6 So Jotham grew strong, because he kept his conduct right before his Father. ಹೀಗೆ ಯೋತಾಮನು ತನ್ನ ದೇವರಾದ ಯೆಹೋವ ದೇವರ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿಕೊಂಡದ್ದರಿಂದ ಅವನು ಬಲಗೊಂಡನು.
7 The rest of Jotham's acts, all his wars and deeds, are written in the Book of the Kings of Israel and Judah. ಯೋತಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಯುದ್ಧಗಳೂ, ಅವನ ಮಾರ್ಗಗಳೂ, ಅವು ಇಸ್ರಾಯೇಲರ ಮತ್ತು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
8 He was twenty-five years old when he became king, and he reigned sixteen years in Jerusalem. ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು.
9 Jotham rested with his ancestors; they buried him in the city of David, and his son Ahaz reigned in his place. ಯೋತಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಹಾಜನು ಅವನಿಗೆ ಬದಲಾಗಿ ಅರಸನಾದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]