Skip to content
The Believer's Library

Biblica® Open Kannada Contemporary Version 2022

2 Chronicles 28 OKCV

Show OKCV only
Verse × ×
1 Ahaz became king at twenty; he reigned sixteen years in Jerusalem. He did not do right in our Father's eyes, as his ancestor David had. ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ.
2 Instead, he walked in the ways of Israel's kings and cast metal idols for the Baals. ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದು, ಆರಾಧಿಸುವುದಕ್ಕಾಗಿ ಬಾಳನ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಸಿದನು.
3 He burned incense in Ben-Hinnom Valley and burned his sons in fire, copying detestable practices of the nations our Father drove out before Israel. ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.
4 He sacrificed and burned incense on the high places, the hills, and under every leafy tree. ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
5 So our Father gave him to Aram's king, who struck him, took many captives to Damascus; he was also given to Israel's king, who struck him a heavy blow. ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.
6 Pekah son of Remaliah killed 120,000 brave men of Judah in one day, because they abandoned our Father, the God of their ancestors. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
7 Zichri, an Ephraim warrior, killed Maaseiah the king's son, Azrikam the palace commander, and Elkanah, the king's second. ಇದಲ್ಲದೆ ಎಫ್ರಾಯೀಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ಮಾಸೇಯನನ್ನೂ, ಅರಮನೆಯ ನಾಯಕನಾದ ಅಜ್ರೀಕಾಮನನ್ನೂ, ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
8 Israel captured 200,000 relatives—women, sons, daughters—and much plunder, carrying it off to Samaria. ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು.
9 Oded, a prophet of our Father, was there. He met the army returning to Samaria: "See, our Father, the God of your ancestors, was angry with Judah, so he handed them to you. But you killed them with rage reaching heaven. ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.
10 Now you intend to enslave Judah and Jerusalem's people, male and female. Aren't you yourselves guilty of sins against your Father? ಈಗ ನಿಮಗೆ ದಾಸರೂ, ದಾಸಿಯರೂ ಆಗಿರುವ ಹಾಗೆ ಯೆಹೂದದ ಮತ್ತು ಯೆರೂಸಲೇಮಿನ ಮಕ್ಕಳನ್ನು ನಿಮ್ಮ ವಶಮಾಡಬೇಕೆಂದು ಇದ್ದೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧಗಳು ಇಲ್ಲವೋ?
11 Now listen: send back the relatives you captured, for our Father's fierce anger is on you." ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.
12 Some Ephraimite chiefs—Azariah son of Johanan, Berechiah son of Meshillemoth, Jehizkiah son of Shallum, Amasa son of Hadlai—opposed those coming from battle. ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯನೂ, ಮೆಷಿಲ್ಲೇಮೋತನ ಮಗ ಬೆರೆಕ್ಯನೂ, ಶಲ್ಲೂಮನ ಮಗ ಹಿಜ್ಕೀಯನೂ, ಹದ್ಲೈಯನ ಮಗ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧವಾಗಿ ಎದ್ದು
13 "Don't bring the captives here," they said. "You plan to add to our sins and guilt against our Father. Our guilt is already great, and fierce anger hangs over Israel." ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.
14 So the soldiers handed the captives and plunder in front of the officials, before the whole assembly. ಆಗ ಸೈನ್ಯದವರು ಸೆರೆಯವರನ್ನೂ, ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ, ಸಮಸ್ತ ಕೂಟದ ಮುಂದೆಯೂ ಬಿಟ್ಟುಬಿಟ್ಟರು.
15 The named men took the captives and clothed all the naked from the plunder. They gave them clothes and sandals, food and drink, and anointed them with oil. They set the feeble on donkeys, brought them to their fellow Israelites at Jericho, city of palms, then returned to Samaria. ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.
16 At that time King Ahaz sent to the king of Assyria for help. ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.
17 The Edomites had invaded Judah once again and carried off captives, ಏಕೆಂದರೆ ಎದೋಮ್ಯರು ತಿರುಗಿಬಂದು ಯೆಹೂದದವರನ್ನು ಸಂಹರಿಸಿ, ಕೆಲವರನ್ನು ಸೆರೆಯಾಗಿ ತೆಗೆದುಕೊಂಡು ಹೋದರು.
18 while Philistines raided Judah's lowland and Negev towns, seizing Beth-shemesh, Aijalon, Gederoth, Soco, Timnah, and Gimzo with their villages, and settled there. ಇದಲ್ಲದೆ ಫಿಲಿಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ, ಯೆಹೂದದ ದಕ್ಷಿಣ ಪ್ರಾಂತದಲ್ಲಿಯೂ ನುಗ್ಗಿ, ಬೇತ್ ಷೆಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ ಅದರ ಗ್ರಾಮಗಳನ್ನೂ, ತಿಮ್ನಾ ಅದರ ಗ್ರಾಮಗಳನ್ನೂ, ಗಿಮ್ಜೋ ಅದರ ಗ್ರಾಮಗಳನ್ನೂ ತೆಗೆದುಕೊಂಡು ಅಲ್ಲಿ ವಾಸವಾಗಿದ್ದರು.
19 Our Father humbled Judah because of Ahaz king of Israel, who spread wrongdoing in Judah and betrayed our Father completely. ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.
20 Tiglath-pileser king of Assyria came to Ahaz, but Tiglath-pileser brought him trouble instead of help. ಆಗ ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಬಾಧೆಪಡಿಸಿದನು.
21 Ahaz stripped our Father's house, the royal palace, and the officials of their treasures, giving them to Assyria's king—yet it brought him no help. ಆಹಾಜನು ಯೆಹೋವ ದೇವರ ಆಲಯದಿಂದಲೂ, ಅರಮನೆಯಿಂದಲೂ, ಪ್ರಧಾನರಿಂದಲೂ ಆಸ್ತಿಯ ಒಂದು ಪಾಲನ್ನು ತೆಗೆದುಕೊಂಡು, ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕೊಟ್ಟನು, ಆದರೂ ಅವನು ಆಹಾಜನಿಗೆ ಸಹಾಯ ಮಾಡಲಿಲ್ಲ.
22 In his time of distress, this same King Ahaz became even more unfaithful to our Father. ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.
23 He sacrificed to Damascus's gods, his defeaters, thinking, "Aram's kings' gods helped them; I'll sacrifice to them so they'll help me." But they ruined him and all Israel. ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.
24 Ahaz gathered the articles of our Father's house and cut them to pieces, shut the doors of our Father's house, and set up altars for himself at every corner in Jerusalem. ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
25 In every Judah town he built high places to burn offerings to other gods, angering our Father, the God of his ancestors. ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.
26 The rest of his deeds and all his ways, first to last, are written in the Book of the Kings of Judah and Israel. ಅವನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳೂ, ಅವನ ಸಕಲ ಮಾರ್ಗಗಳೂ, ಮೊದಲನೆಯವುಗಳೂ, ಕಡೆಯವುಗಳೂ ಯೆಹೂದದ ಮತ್ತು ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
27 Ahaz rested with his ancestors, buried in Jerusalem, but not in Israel's kings' tombs. His son Hezekiah reigned instead. ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]