Skip to content
The Believer's Library

Biblica® Open Kannada Contemporary Version 2022

2 Chronicles 29 OKCV

Show OKCV only
Verse × ×
1 Hezekiah became king at twenty-five, reigning twenty-nine years in Jerusalem. His mother: Abijah, daughter of Zechariah. ಹಿಜ್ಕೀಯನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.
2 He did right in our Father's eyes, just as his father David had done. ಅವನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
3 In his reign's first year, first month, he opened the doors of our Father's house and repaired them. ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವ ದೇವರ ಆಲಯದ ಬಾಗಿಲುಗಳನ್ನು ತೆರೆದು, ಅವುಗಳನ್ನು ಭದ್ರಪಡಿಸಿದನು.
4 He brought in the priests and the Levites and gathered them in the eastern square. ಇದಲ್ಲದೆ ಹಿಜ್ಕೀಯನು ಯಾಜಕರನ್ನೂ, ಲೇವಿಯರನ್ನೂ ಕರೆಕಳುಹಿಸಿ, ಅವರನ್ನು ಪೂರ್ವದಿಕ್ಕಿನ ಅಂಗಣದಲ್ಲಿ ಕೂಡಿಸಿಕೊಂಡು, ಅವರಿಗೆ ಹೇಳಿದ್ದೇನೆಂದರೆ,
5 He told them, "Hear me, Levites! Dedicate yourselves now, and dedicate our Father's house, the God of your fathers, and remove the filth from the Holy Place. “ಲೇವಿಯರೇ, ನನ್ನ ಮಾತನ್ನು ಕೇಳಿರಿ. ನೀವು ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
6 Our ancestors were unfaithful, doing evil in our Father's eyes; they abandoned him, turned their faces from our Father's dwelling, and turned their backs. ಏಕೆಂದರೆ ನಮ್ಮ ಪಿತೃಗಳು ಅಪನಂಬಿಗಸ್ತರಾಗಿ, ನಮ್ಮ ದೇವರಾದ ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ, ಅವರನ್ನು ಬಿಟ್ಟುಬಿಟ್ಟರು. ಇದಲ್ಲದೆ ಅವರು ಯೆಹೋವ ದೇವರ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ, ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
7 They also shut the entrance hall doors, extinguished the lamps, and did not burn incense or offer burnt offerings in the sanctuary to our Father, the God of Israel. ಇದಲ್ಲದೆ ಅವರು ದ್ವಾರಾಂಗಳದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ಆರಿಸಿ, ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿಸದೆ ಹೋದರು.
8 So our Father's anger fell on Judah and Jerusalem, making them an object of terror, horror, and scorn, as you see with your own eyes. ಆದ್ದರಿಂದ ಯೆಹೂದ ಮತ್ತು ಯೆರೂಸಲೇಮಿನವರ ಮೇಲೆ ಯೆಹೋವ ದೇವರು ಕೋಪಗೊಂಡು, ಅವುಗಳನ್ನು ಭಯಭೀತಿಗೂ, ಅಪಹಾಸ್ಯಗಳಿಗೂ ಆಸ್ಪದ ಮಾಡಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.
9 For our fathers fell by the sword; our sons, daughters, and wives are captive for this. ಇದಕ್ಕೋಸ್ಕರ ನಮ್ಮ ಪಿತೃಗಳು ಖಡ್ಗದಿಂದ ಬಿದ್ದಿದ್ದಾರೆ. ನಮ್ಮ ಪುತ್ರ ಪುತ್ರಿಯರೂ, ನಮ್ಮ ಹೆಂಡತಿಯರೂ ಸೆರೆಯಲ್ಲಿದ್ದಾರೆ.
10 Now I intend to make a covenant with our Father, the God of Israel, so his fierce anger turns from us. ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
11 My sons, don't be negligent now—our Father chose you to stand before him, serve him, be his servants, and burn incense." ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ. ಏಕೆಂದರೆ ತಮ್ಮ ಸಮ್ಮುಖದಲ್ಲಿ ನಿಲ್ಲುವುದಕ್ಕೂ, ತಮ್ಮನ್ನು ಸೇವಿಸುವುದಕ್ಕೂ, ತಮಗೆ ಸೇವಕರಾಗಿರುವುದಕ್ಕೂ, ತಮಗೆ ಧೂಪವನ್ನು ಸುಡುವುದಕ್ಕೂ ಯೆಹೋವ ದೇವರು ನಿಮ್ಮನ್ನು ಆಯ್ದುಕೊಂಡಿದ್ದಾರೆ,” ಎಂದನು.
12 The Levites stood: Kohathites—Mahath, Amasai's son, and Joel, Azariah's son; Merarites—Kish, Abdi's son, and Azariah, Jehallelel's son; Gershonites—Joah, Zimmah's son, and Eden, Joah's son; ಆಗ ಲೇವಿಯರು ಸೇವೆಗಾಗಿ ಮುಂದೆ ಬಂದರು: ಕೊಹಾತ್ಯರಲ್ಲಿ ಅಮಾಸೈಯನ ಮಗ ಮಹತ್, ಅಜರ್ಯನ ಮಗ ಯೋಯೇಲ್, ಮೆರಾರೀಯರಲ್ಲಿ ಅಬ್ದೀಯನ ಮಗ ಕೀಷ್, ಯೆಹಲ್ಲೆಲೇಲನ ಮಗ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗ ಯೋವಾಹ, ಯೋವಾಹನ ಮಗ ಏದೆನ್,
13 of the sons of Elizaphan, Shimri and Jeiel; of the sons of Asaph, Zechariah and Mattaniah; ಎಲೀಚಾಫಾನ್ಯರಲ್ಲಿ ಶಿಮ್ರೀ, ಯೆಹೀಯೇಲ್, ಆಸಾಫ್ಯರಲ್ಲಿ ಜೆಕರ್ಯ, ಮತ್ತನ್ಯ,
14 of the sons of Heman, Jehiel and Shimei; and of the sons of Jeduthun, Shemaiah and Uzziel. ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮಿ; ಯೆದುತೂನ್ಯರಲ್ಲಿ ಶೆಮಾಯ ಹಾಗೂ ಉಜ್ಜೀಯೇಲ್.
15 They gathered their brothers, made themselves holy, and went to clean our Father's house, as the king commanded by our Father's words. ಇವರು ಅರಸನ ಆಜ್ಞಾಧಾರಕರಾಗಿ ಯೆಹೋವ ದೇವರ ವಾಕ್ಯವನ್ನು ಅನುಸರಿಸಿ, ತಮ್ಮ ಸಹೋದರರನ್ನು ಕೂಡಿಸಿ, ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯವನ್ನು ಶುಚಿಮಾಡಲು ಬಂದರು.
16 The priests entered our Father's inner house to cleanse it, bringing all the impurity they found in our Father's temple out to the courtyard. The Levites carried it out to the Kidron brook. ಯಾಜಕರು ಯೆಹೋವ ದೇವರ ಆಲಯವನ್ನು ಶುದ್ಧಿಮಾಡಲು ಅದರ ಒಳಭಾಗವನ್ನು ಪ್ರವೇಶಿಸಿ, ಯೆಹೋವ ದೇವರ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಯೆಹೋವ ದೇವರ ಆಲಯದ ಅಂಗಳದೊಳಗೆ ತಂದರು. ಆಗ ಲೇವಿಯರು ಅದನ್ನು ತೆಗೆದುಕೊಂಡು, ಕಿದ್ರೋನ್ ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.
17 They began dedicating the first day of month one; by the eighth day of that month, they reached our Father's entrance hall. They dedicated the house of our Father eight days, finishing the sixteenth day of month one. ಅವರು ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಪ್ರತಿಷ್ಠೆ ಮಾಡಲು ಆರಂಭಿಸಿ, ಆ ತಿಂಗಳ ಎಂಟನೆಯ ದಿವಸದಲ್ಲಿ ಯೆಹೋವ ದೇವರ ದ್ವಾರಾಂಗಳದವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದನ್ನು ಮೊದಲನೆಯ ತಿಂಗಳಿನ ಹದಿನಾರನೆಯ ದಿವಸದಲ್ಲಿ ಮುಗಿಸಿದರು.
18 Then they came in to King Hezekiah and said, "We have cleaned all of our Father's house—the altar of burnt offering with all its utensils, and the table of the Bread of the Presence with all its utensils. ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರ ಆಲಯವನ್ನೆಲ್ಲಾ, ದಹನಬಲಿಪೀಠವನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು, ಅದರ ಎಲ್ಲಾ ಪಾತ್ರೆಗಳನ್ನೂ ಶುದ್ಧಿಮಾಡಿದೆವು.
19 All the utensils King Ahaz discarded during his unfaithful reign we have prepared and dedicated—they stand before our Father's altar." ಇದಲ್ಲದೆ ಅರಸನಾದ ಆಹಾಜನು ಆಳಿದಾಗ, ದೇವದ್ರೋಹಿಯಾಗಿ ಬಿಸಾಡಿದ ಎಲ್ಲಾ ಸಲಕರಣೆಗಳನ್ನು ಪುನಃ ತಂದು ಪ್ರತಿಷ್ಠೆ ಮಾಡಿದೆವು. ಅವು ಯೆಹೋವ ದೇವರ ಬಲಿಪೀಠದ ಮುಂದೆ ಇವೆ,” ಎಂದು ಹೇಳಿದರು.
20 King Hezekiah rose early, gathered the city's officials, and went up to our Father's house. ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು, ಪಟ್ಟಣದ ಪ್ರಧಾನರನ್ನು ಕೂಡಿಸಿ, ಯೆಹೋವ ದೇವರ ಆಲಯಕ್ಕೆ ಹೋದನು.
21 They brought seven bulls, seven rams, seven lambs, seven male goats as a sin offering for the kingdom, sanctuary, and Judah, and he commanded Aaron's sons, the priests, to offer them on our Father's altar. ಅವರು ರಾಜ್ಯಕ್ಕೋಸ್ಕರವೂ, ಪರಿಶುದ್ಧ ಸ್ಥಾನಕ್ಕೋಸ್ಕರವೂ, ಯೆಹೂದಕ್ಕೋಸ್ಕರವೂ ದೋಷಪರಿಹಾರದ ಬಲಿಯಾಗಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ, ಏಳು ಕುರಿಮರಿಗಳನ್ನೂ, ಏಳು ಮೇಕೆಗಳನ್ನೂ ತಂದರು. ಆಗ ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವ ದೇವರ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಹೇಳಿದನು.
22 They killed the bulls; the priests took the blood and splashed it on the altar. They killed the rams and splashed the blood on the altar, then killed the lambs and splashed the blood on the altar. ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು, ಪೀಠದ ಮೇಲೆ ಚಿಮುಕಿಸಿದರು. ಟಗರುಗಳನ್ನು ವಧಿಸಿ ರಕ್ತವನ್ನು ಚಿಮುಕಿಸಿದರು. ಕುರಿಮರಿಗಳನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಅವುಗಳನ್ನು ವಧಿಸಿ, ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಮೇಲೆ ಚಿಮುಕಿಸಿದರು.
23 They brought the sin-offering goats before the king and assembly, and laid their hands on them. ಅರಸನ ಮುಂದೆಯೂ, ಸಭೆಯ ಮುಂದೆಯೂ ದೋಷಪರಿಹಾರದ ಬಲಿಗಾಗಿ ತಂದ ಹೋತಗಳನ್ನು ಹತ್ತಿರ ತೆಗೆದುಕೊಂಡು ಬಂದು, ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.
24 The priests slaughtered them and made a sin offering with their blood on the altar to atone for all Israel, because the king had ordered the burnt offering and sin offering for all Israel. ಆಗ ಸಮಸ್ತ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ, ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ, ದೋಷಪರಿಹಾರದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದನು.
25 He stationed the Levites in our Father's house with cymbals, harps, and lyres, as David, Gad the king's seer, and Nathan the prophet commanded—for the command came from our Father through his prophets. ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.
26 The Levites stood with the instruments of David, and the priests with the trumpets. ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿದ್ದರು.
27 Hezekiah ordered the burnt offering on the altar; when it began, the song of our Father began too, with the trumpets and the instruments of David, king of Israel. ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ, ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗಳಿಂದಲೂ ಯೆಹೋವ ದೇವರ ಹಾಡು ಆರಂಭವಾಯಿತು.
28 The whole assembly bowed, the singers sang, the trumpeters sounded, until the burnt offering was finished. ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ತನಕ ಹಾಡುಗಾರರು ಹಾಡಿದರು. ತುತೂರಿ ಊದುವವರು ಊದಿದರು.
29 When the offering ended, the king and all present with him bowed and worshiped. ಅವರು ಅರ್ಪಿಸುವುದು ತೀರಿಸಿದಾಗ ಅರಸನೂ, ಅವನ ಸಂಗಡ ಇದ್ದವರೆಲ್ಲರೂ ಮೊಣಕಾಲೂರಿ ಆರಾಧಿಸಿದರು.
30 King Hezekiah and the officials had the Levites praise our Father with words from David and Asaph the seer. They sang for joy, bowed low, and worshiped. ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು.
31 Then Hezekiah said, "You have now dedicated yourselves to our Father. Come near, bring sacrifices and thank offerings to our Father's house." So the assembly brought sacrifices and thank offerings; all willing hearts brought burnt offerings. ಹಿಜ್ಕೀಯನು ಅವರಿಗೆ ಉತ್ತರಕೊಟ್ಟು, “ಈಗ ನೀವು ನಿಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದರಿಂದ, ಸಮೀಪಕ್ಕೆ ಬಂದು ಬಲಿಗಳನ್ನೂ, ಸ್ತೋತ್ರ ಅರ್ಪಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬನ್ನಿರಿ,” ಎಂದನು. ಆಗ ಸಭೆಯವರು ಬಲಿಗಳನ್ನೂ, ಸ್ತೋತ್ರದ ಅರ್ಪಣೆಗಳನ್ನೂ ಮತ್ತು ಇಷ್ಟಪೂರ್ವಕ ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
32 The assembly brought seventy bulls, one hundred rams, 200 lambs—all as a burnt offering to our Father. ಸಭೆಯು ತಂದ ದಹನಬಲಿಗಳ ಲೆಕ್ಕವೇನೆಂದರೆ: ಎಪ್ಪತ್ತು ಹೋರಿಗಳು, ನೂರು ಟಗರುಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಯೆಹೋವ ದೇವರಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.
33 And the consecrated offerings were 600 bulls and 3,000 sheep. ಪ್ರತಿಷ್ಠೆ ಮಾಡಲಾದವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಮೇಕೆಗಳೂ ಇದ್ದವು.
34 The priests were too few to skin all the burnt offerings, so their Levite brothers helped them until the work was done and until the priests made themselves holy; the Levites were more honest in heart to make themselves holy than the priests. ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
35 Besides the many burnt offerings, there was fat from peace offerings and drink offerings for them. So the service of our Father's house was restored. ಇದಲ್ಲದೆ ದಹನಬಲಿಗಳೂ, ಸಮಾಧಾನದ ಬಲಿಗಳ ಕೊಬ್ಬೂ, ದಹನಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳವಾಗಿದ್ದವು. ಹೀಗೆ ಯೆಹೋವ ದೇವರ ಆಲಯದ ಸೇವೆಯು ಸಿದ್ಧವಾಯಿತು.
36 Hezekiah and all the people rejoiced over what our Father prepared for them, since it happened suddenly. ಆಗ ದೇವರು ತಮ್ಮ ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ, ಜನರೆಲ್ಲರೂ ಸಂತೋಷಪಟ್ಟರು. ಏಕೆಂದರೆ ಈ ಕಾರ್ಯವು ತ್ವರೆಯಾಗಿ ನಡೆಯಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]