Skip to content
The Believer's Library

Biblica® Open Kannada Contemporary Version 2022

2 Chronicles 3 OKCV

Show OKCV only
Verse × ×
1 Then Solomon began building our Father's house in Jerusalem, on Mount Moriah, where our Father had appeared to his father David, at the site David had prepared on Ornan the Jebusite's threshing floor. ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆ ದಾವೀದನಿಗೆ ಯೆಹೋವ ದೇವರು ಕಾಣಿಸಿಕೊಂಡ ಸ್ಥಳವಾದ ಮೊರೀಯಾ ಬೆಟ್ಟದ ಮೇಲೆ, ದಾವೀದನು ಸಿದ್ಧಮಾಡಿದ ಸ್ಥಳವಾದ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.
2 He began building in the second month, second day, in the fourth year of his reign. ತನ್ನ ಆಳಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿವಸದಲ್ಲಿ ಕಟ್ಟುವುದಕ್ಕೆ ಆರಂಭಿಸಿದನು.
3 These are the foundations Solomon laid for building the house of our Father: length about ninety feet by the earlier standard, width about thirty feet. ದೇವರ ಆಲಯವನ್ನು ಕಟ್ಟುವುದಕ್ಕೆ ಸೊಲೊಮೋನನು ಹಾಕಿಸಿದ ಅಸ್ತಿವಾರಗಳು ಏನೆಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಸುಮಾರು 27 ಮೀಟರ್ ಮತ್ತು ಅದರ ಅಗಲ 9 ಮೀಟರ್;
4 The portico across the house's front, along the width of the house, was about thirty feet wide; its height was 120 feet. He covered the inside with pure gold. ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು; 54 ಮೀಟರ್ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಸಿದನು.
5 He paneled the large room with cypress wood, covered it in fine gold, and added palm trees and chains. ಅವನು ದೊಡ್ಡ ತುರಾಯಿ ಮರಗಳಿಂದ ಮುಚ್ಚಿದ ಕೋಣೆಯನ್ನು ಶುದ್ಧ ಬಂಗಾರದಿಂದ ಹೊದಿಸಿ, ಅದರ ಮೇಲೆ ಖರ್ಜೂರದ ಗಿಡಗಳನ್ನೂ, ಸರಪಣಿಗಳನ್ನೂ ಕೆತ್ತಿಸಿದನು.
6 He adorned the house with precious stones for beauty, and the gold was from Parvaim. ಇದಲ್ಲದೆ ಸೌಂದರ್ಯದ ನಿಮಿತ್ತವಾಗಿ ಅಮೂಲ್ಯವಾದ ರತ್ನಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮ್ ದೇಶದ್ದು.
7 He covered the house—beams, thresholds, walls, doors—with gold, and carved cherubim on the walls. ಆಲಯದ ತೊಲೆಗಳನ್ನೂ, ಸ್ತಂಭಗಳನ್ನೂ, ಗೋಡೆಗಳನ್ನೂ, ಬಾಗಿಲುಗಳನ್ನೂ, ಅವನು ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳನ್ನೂ ಕೆತ್ತಿಸಿದನು.
8 He made the Most Holy Place, its length matching the house's width—about thirty feet—and its width also thirty feet. He overlaid it with about twenty-three tons of fine gold. ಅವನು ಮಹಾಪರಿಶುದ್ಧವಾದ ಸ್ಥಳವನ್ನು ಕಟ್ಟಿದನು. ಅದರ ಉದ್ದವು ಆಲಯದ ಅಗಲದ ಪ್ರಕಾರ 9 ಮೀಟರ್; ಅದರ ಅಗಲ 9 ಮೀಟರ್. ಅವನು ಅದನ್ನು 20,000 ಕಿಲೋಗ್ರಾಂ ಶುದ್ಧ ಬಂಗಾರದಿಂದ ಹೊದಿಸಿದನು.
9 Nails weighed about twenty ounces of gold; he covered the upper rooms with gold. ಅದರ ಮೊಳೆಗಳು ಐನೂರ ಎಪ್ಪತ್ತು ಕಿಲೋಗ್ರಾಂಗಳ ತೂಕ ಬಂಗಾರದ್ದಾಗಿತ್ತು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.
10 In the Most Holy Place he made two carved cherubim, gilded them. ಮಹಾಪರಿಶುದ್ಧವಾದ ಸ್ಥಳದಲ್ಲಿ ಎರಡು ಕೆರೂಬಿಗಳನ್ನು ಮಾಡಿಸಿ, ಬಂಗಾರದಿಂದ ಅವುಗಳನ್ನು ಹೊದಿಸಿದನು.
11 Together the cherubim's wings spanned about thirty feet: one wing of the first cherub, about seven and a half feet, touched the house wall; its other wing, also about seven and a half feet, touched the second cherub's wing. ಕೆರೂಬಿಗಳ ರೆಕ್ಕೆಗಳು 9 ಮೀಟರ್ ಉದ್ದವಾಗಿದ್ದವು. ಒಂದು ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಆಲಯದ ಗೋಡೆಯವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಎರಡೂವರೆ ಮೀಟರ್ ಉದ್ದವಾಗಿದ್ದು, ಇನ್ನೊಂದು ಕೆರೂಬಿಯ ರೆಕ್ಕೆಯವರೆಗೂ ಮುಟ್ಟಿತ್ತು.
12 The second cherub's wing, about seven and a half feet, touched the house wall; its other wing, also about seven and a half feet, joined the first cherub's wing. ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಆಲಯದ ಗೋಡೆಯವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿಕೊಂಡಿತ್ತು.
13 The wings of these cherubim spread about thirty feet; they stood on their feet, facing the main hall. ಈ ಕೆರೂಬಿಗಳ ರೆಕ್ಕೆಗಳು 9 ಮೀಟರ್ ಉದ್ದಕ್ಕೆ ಚಾಚಿಕೊಂಡವು. ಅವು ತಮ್ಮ ಕಾಲುಗಳ ಮೇಲೆ ನಿಂತವು. ಅವುಗಳ ಮುಖಗಳು ಒಳಗಡೆಯಾಗಿದ್ದವು.
14 He made the curtain of blue, purple, and crimson yarn and fine linen, with cherubim woven into it. ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ಹೊಸೆದ ನಾರಿನಿಂದ ಮಾಡಿಸಿ, ಅದರಲ್ಲಿ ಕೆರೂಬಿಗಳುಳ್ಳದ್ದನ್ನಾಗಿ ಮಾಡಿಸಿದನು.
15 In front of the house he made two pillars, each about fifty-three feet tall, topped with a capital about seven and a half feet high. ಇದಲ್ಲದೆ ಅವನು ಕಟ್ಟಡದ ಪ್ರವೇಶದ್ವಾರದಲ್ಲಿ ಎರಡು ಸ್ತಂಭಗಳನ್ನು ನಿರ್ಮಿಸಿದನು, ಪ್ರತಿಯೊಂದೂ ಹದಿನೈದು ಮೀಟರ್ ಎಪ್ಪತ್ತೈದು ಸೆಂಟಿಮೀಟರ್ ಎತ್ತರ, ಪ್ರತಿಯೊಂದರ ಮೇಲೆಯೂ ನಿರ್ಮಿಸಲಾದ ಪ್ರತಿಯೊಂದು ತಲೆಗಳು ಎರಡೂವರೆ ಮೀಟರ್ ಉದ್ದವಿತ್ತು.
16 He made chains like a necklace, put them atop the pillars, made one hundred pomegranates, and fastened them to the chains. ಗರ್ಭಗುಡಿಯಲ್ಲಿ ಸರಪಣಿಗಳಂತೆ ಮಾಡಿ, ಸ್ತಂಭಗಳ ತುದಿಗಳ ಮೇಲೆ ಇಟ್ಟು, ನೂರು ದಾಳಿಂಬೆ ಹಣ್ಣುಗಳನ್ನು ಮಾಡಿ, ಸರಪಣಿಗಳ ಮೇಲೆ ಇರಿಸಿದನು.
17 He set up the pillars in front of the temple, one to the right, one to the left, naming the right one Jachin and the left one Boaz. ಆ ಸ್ತಂಭಗಳನ್ನು ಮಂದಿರದ ಮುಂಭಾಗದಲ್ಲಿ ಒಂದನ್ನು ಬಲಗಡೆಯಲ್ಲಿಯೂ, ಇನ್ನೊಂದನ್ನು ಎಡಗಡೆಯಲ್ಲಿಯೂ ನಿಲ್ಲಿಸಿದನು. ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್ ಎಂದೂ ಹೆಸರಿಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]