Skip to content
The Believer's Library

Biblica® Open Kannada Contemporary Version 2022

2 Chronicles 30 OKCV

Show OKCV only
Verse × ×
1 Hezekiah sent word to all Israel and Judah, and wrote letters to Ephraim and Manasseh, to come to the house of our Father in Jerusalem to keep the Passover to our Father, the God of Israel. ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು.
2 The king, his officials, and the whole assembly in Jerusalem had decided to keep the Passover in the second month, ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು.
3 since they could not keep it then, because too few priests had made themselves holy and the people had not gathered at Jerusalem. ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು.
4 The plan seemed right to the king and to all the assembly, ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು.
5 so they sent a proclamation throughout Israel, from Beersheba to Dan, that the people should come to Jerusalem to keep the Passover to our Father, the God of Israel; for they had not kept it together in great numbers as written. ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.
6 The couriers went through all Israel and Judah with letters from the king and his officials, ordered by the king: "Children of Israel, return to our Father, the God of Abraham, Isaac, and Israel, so he may return to the remnant of you who survived and escaped the power of the kings of Assyria. ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು.
7 Do not be like your fathers and brothers, who were unfaithful to our Father, the God of their fathers, so he made them a desolation, as you see. ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
8 Don't be stubborn like your fathers; give yourselves to our Father and come to his sanctuary, which he dedicated forever, and serve your Father, so his fierce anger turns from you. ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.
9 For if you return to our Father, your brothers and your children will find compassion from their captors and return to this land. For your Father is gracious and merciful; he will not turn his face from you if you return to him." ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ,” ಎಂದು ಹೇಳಿದರು.
10 The couriers went from city to city through Ephraim and Manasseh to Zebulun, but the people laughed at them and mocked them. ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
11 Even so, some from Asher, Manasseh, and Zebulun humbled themselves and came to Jerusalem. ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
12 The hand of our Father was also on Judah, giving them one heart to do what the king and officials commanded by the word of our Father. ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.
13 A very large assembly gathered at Jerusalem to keep the Feast of Bread Without Yeast in the second month. ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು.
14 They set to work and removed the altars in Jerusalem, and they took away all the incense altars, throwing them into the Kidron Valley. ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.
15 They slaughtered the Passover lamb on the fourteenth of the second month. The priests and Levites were ashamed, so they dedicated themselves and brought burnt offerings to the house of our Father. ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು.
16 They stood at their posts by custom, as the Law of Moses the man of God requires; the priests sprinkled the blood the Levites handed them. ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
17 Many in the assembly had not dedicated themselves, so the Levites were in charge of killing the Passover lambs for everyone unclean, to dedicate them to our Father. ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು.
18 A large number of the people, many from Ephraim, Manasseh, Issachar, and Zebulun, had not purified themselves, yet ate the Passover, though not as written. But Hezekiah prayed for them: "May our good Father pardon everyone, ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, “ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ,
19 who sets his heart to seek our Father, the God of his fathers, though not clean by the sanctuary's rules." ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.
20 And our Father listened to Hezekiah and healed the people. ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.
21 The Israelites in Jerusalem kept the Feast of Bread Without Yeast seven days with great joy, and day by day the Levites and priests praised our Father with loud instruments resounding to him. ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.
22 Hezekiah spoke encouragingly to all the Levites skilled in serving our Father. For seven days they ate their festival share, offering peace offerings and giving thanks to our Father, the God of their fathers. ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.
23 Then the whole assembly agreed to keep the feast another seven days, and they kept it seven more days with joy. ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು.
24 Hezekiah king of Judah gave the assembly 1,000 bulls and 7,000 sheep, and the officials gave 1,000 bulls and 10,000 sheep, and many priests dedicated themselves. ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು.
25 All Judah's assembly rejoiced, with the priests, the Levites, the whole assembly that came from Israel, and the foreigners from Israel's land and those living in Judah. ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
26 Great joy filled Jerusalem, for nothing like this had happened there since the days of Solomon son of David, king of Israel. ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ.
27 The priests and Levites rose to bless the people, and their voice was heard; their prayer reached his holy home in heaven. ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]