Skip to content
The Believer's Library

Biblica® Open Kannada Contemporary Version 2022

2 Chronicles 31 OKCV

Show OKCV only
Verse × ×
1 When this ended, all Israel present went out to the towns of Judah, smashed the sacred pillars, cut down the Asherah poles, and tore down the high places and altars throughout Judah, Benjamin, Ephraim, and Manasseh, destroying them completely. Then all Israel returned to their towns, each to his own property. ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.
2 Hezekiah assigned the priests and Levites to their divisions, each by his service, priests and Levites alike, for burnt offerings and peace offerings, to serve, give thanks, and praise in the gates of our Father's camps. ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು.
3 The king gave from his own wealth for the burnt offerings—morning and evening burnt offerings, and those for Sabbaths, new moons, and appointed feasts—as written in our Father's law. ಅವನು ಯೆಹೋವ ದೇವರ ನಿಯಮದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಆಸ್ತಿಯಿಂದಲೇ ಅವನ ಭಾಗವನ್ನು ನೇಮಿಸಿದನು.
4 He told Jerusalem's residents to give the priests' and Levites' portion, so they could devote themselves to our Father's law. ಯಾಜಕರೂ ಲೇವಿಯರೂ ಯೆಹೋವ ದೇವರ ನಿಯಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ತಕ್ಕ ಭಾಗವನ್ನು ಕೊಡಬೇಕೆಂದು ಯೆರೂಸಲೇಮಿನಲ್ಲಿ ಜನರಿಗೆ ಅವನು ಆಜ್ಞಾಪಿಸಿದನು.
5 As soon as the order spread, Israelites abundantly gave firstfruits of grain, new wine, oil, honey, and all the field's produce, and brought in the tenth of everything abundantly. ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.
6 The Israelites and Judahites living in Judah's towns also brought the tenth of cattle and sheep, and the tenth of what was dedicated to our Father, piling them in heaps. ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲರು ಯೆಹೂದ್ಯರು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶಮಾಂಶದ ಪಾಲು ತಂದು, ರಾಶಿರಾಶಿಯಾಗಿ ಇಟ್ಟರು.
7 They began piling the heaps in the third month, finishing in the seventh. ಮೂರನೆಯ ತಿಂಗಳಲ್ಲಿ ರಾಶಿ ಮಾಡುವುದನ್ನು ಆರಂಭಿಸಿ, ಏಳನೆಯ ತಿಂಗಳಲ್ಲಿ ತೀರಿಸಿದರು.
8 Hezekiah and the officials came, saw the heaps, and blessed our Father and his people Israel. ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ, ಅವರು ಯೆಹೋವ ದೇವರನ್ನೂ ಸ್ತುತಿಸಿದರು, ಅವರ ಜನರಾದ ಇಸ್ರಾಯೇಲರನ್ನೂ ಆಶೀರ್ವದಿಸಿದರು.
9 Hezekiah asked the priests and Levites about the heaps. ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ, ಲೇವಿಯರನ್ನೂ ವಿಚಾರಿಸಿದನು.
10 Azariah the chief priest, of Zadok's house, answered him, "Since people began bringing contributions into our Father's house, we've eaten well with plenty remaining, for our Father blessed his people, leaving this large surplus." ಚಾದೋಕ್ ಸಂತಾನದ ಮುಖ್ಯಯಾಜಕ ಅಜರ್ಯನು, “ಜನರು ದೇವರಾದ ಯೆಹೋವ ದೇವರಿಗೆ ಕಾಣಿಕೆಯಾಗಿ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಯೆಹೋವ ದೇವರು ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.
11 Then Hezekiah ordered them to prepare storerooms in the house of our Father, and they prepared them. ಬಳಿಕ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.
12 They faithfully brought in the contributions, the tenth, and dedicated gifts. Conaniah the Levite led them; Shimei his brother was second. ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು, ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.
13 Jehiel, Azaziah, Nahath, Asahel, Jerimoth, Jozabad, Eliel, Ismachiah, Mahath, and Benaiah oversaw, under Conaniah and his brother Shimei, appointed by King Hezekiah and Azariah, chief officer of our Father's house. ಅರಸನಾದ ಹಿಜ್ಕೀಯನು ನೇಮಿಸಿದ ಪ್ರಕಾರ, ಯೆಹೀಯೇಲ್, ಅಜಜ್ಯ, ನಹತ್, ಅಸಾಯೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ, ಇವರು ಕೋನನ್ಯನ ಸಹೋದರನಾದ ಶಿಮ್ಮಿಯ ಕೈಕೆಳಗೆ ಆಡಳಿತಗಾರರಾಗಿದ್ದರು. ಅಜರ್ಯನು ದೇವರ ಆಲಯದ ಅಧಿಪತಿಯಾಗಿದ್ದನು.
14 Kore son of Imnah, the Levite gatekeeper toward the east, oversaw the voluntary offerings to our Father, distributing our Father's contributions and the most holy gifts. ಲೇವಿಯನಾಗಿರುವ ಇಮ್ನನ ಮಗ ಕೋರೆಯು ಎಂಬ ಪೂರ್ವದಿಕ್ಕಿನಲ್ಲಿರುವ ದ್ವಾರಪಾಲಕನು ಯೆಹೋವ ದೇವರ ಕಾಣಿಕೆಗಳನ್ನೂ, ಮಹಾಪರಿಶುದ್ಧವಾದವುಗಳನ್ನೂ ಪಾಲು ಹಂಚುವುದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಕಾಣಿಕೆಗಳ ಮೇಲ್ವಿಚಾರಕನಾಗಿದ್ದನು.
15 Under him, Eden, Miniamin, Jeshua, Shemaiah, Amariah, and Shecaniah served faithfully in the priestly towns, distributing to fellow priests by divisions, great and small alike, ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ನಂಬಿಗಸ್ತಿಕೆಯಿಂದ ಸರತಿ ಸರತಿಯಾಗಿ ಹಿರಿಯರು ಕಿರಿಯರು ಎಂಬ ವ್ಯತ್ಯಾಸಮಾಡದೆ ಪಾಲು ಹಂಚುವುದಕ್ಕೆ ಏದೆನನೂ, ಮಿನ್ಯಾಮೀನನೂ, ಯೇಷೂವನ ಶೆಮಾಯನೂ, ಅಮರ್ಯನೂ, ಶೆಕನ್ಯನೂ ಇದ್ದರು.
16 besides giving to those registered by genealogy, males three and up—all entering the house of our Father for daily duty—for their service by office and division. ವಂಶಾವಳಿಯ ದಾಖಲೆಯ ಪ್ರಕಾರ ಮೂರು ವರ್ಷ ಪ್ರಾಯ ಮೊದಲ್ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವುದಕ್ಕೂ,
17 Priests were registered by clans; Levites twenty and up, by duty and division. ಹಾಗೆಯೇ ಇಪ್ಪತ್ತು ವರ್ಷ ಪ್ರಾಯ ಮೊದಲ್ಗೊಂಡು ವಂಶಾವಳಿಯ ದಾಖಲೆಯ ಪ್ರಕಾರ ಅವರವರ ಕೆಲಸಗಳಲ್ಲಿಯೂ, ಅವರವರ ಸರತಿಗಳಲ್ಲಿಯೂ ಇರುವ ಯಾಜಕರಿಗೂ, ಲೇವಿಯರಿಗೂ ಅವರ ಸಮಸ್ತ ಕೂಟದಲ್ಲಿ ವಂಶಾವಳಿಯ ದಾಖಲೆಯ ಪ್ರಕಾರ
18 They were registered with all their little ones, wives, sons, and daughters—the whole community—for they faithfully dedicated themselves in holiness. ಅವರ ಹೆಂಡತಿಯರಿಗೂ ಚಿಕ್ಕವರಿಗೂ ಪುತ್ರಪುತ್ರಿಯರಿಗೂ ಪಾಲು ಕೊಡುವುದಕ್ಕೂ ಇದ್ದರು. ಏಕೆಂದರೆ ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನೇ ತಾವು ಪರಿಶುದ್ಧಗೊಳಿಸುವಲ್ಲಿ ನಂಬಿಗಸ್ತರಾಗಿದ್ದರು.
19 For Aaron's priestly descendants living in the pasture-fields around their towns, men were named in each and every town to give shares to every male priest and all Levites listed by genealogy. ಯಾಜಕರಲ್ಲಿ ಸಮಸ್ತ ಗಂಡಸರಿಗೂ, ಲೇವಿಯರಲ್ಲಿ ಲಿಖಿತರಾದ ಸಮಸ್ತರಿಗೂ ಪಾಲನ್ನು ಕೊಡುವುದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ವಂಶಾವಳಿಯ ದಾಖಲೆಯ ಪ್ರಕಾರ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
20 Hezekiah did this throughout all Judah. He did what was good, right, and faithful before our Father. ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಉತ್ತಮವಾದದ್ದನ್ನೂ, ಸರಿಯಾದದ್ದನ್ನೂ, ಸತ್ಯವಾದದ್ದನ್ನೂ ನಡೆಸಿದನು.
21 In all he undertook—serving the house of our Father, keeping the law and command, seeking our Father—he gave his whole heart, and thrived. ಇದಲ್ಲದೆ ದೇವರ ಆಲಯದ ಸೇವೆಯಲ್ಲಿಯೂ, ಮೋಶೆಯ ನಿಯಮದಲ್ಲಿಯೂ, ದೇವರ ಆಜ್ಞೆಗಳಲ್ಲಿಯೂ ಅವನು ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳನ್ನು ತನ್ನ ಪೂರ್ಣಹೃದಯದಿಂದ ಮಾಡಿ, ಅವನು ಅಭಿವೃದ್ಧಿ ಹೊಂದಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]