Skip to content
The Believer's Library

Biblica® Open Kannada Contemporary Version 2022

2 Chronicles 32 OKCV

Show OKCV only
Verse × ×
1 After these things and these acts of faithfulness, Sennacherib, Assyria's king, invaded Judah, besieged its fortified cities, meaning to break into them for himself. ಹಿಜ್ಕೀಯನು ಇಷ್ಟು ನಂಬಿಗಸ್ತಿಕೆಯಿಂದ ಎಲ್ಲವನ್ನೂ ಮಾಡಿದ ತರುವಾಯ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿಸಿ, ಅವುಗಳನ್ನು ತನಗಾಗಿ ಜಯಿಸಬೇಕೆಂದು ಮುತ್ತಿಗೆಹಾಕಿದನು.
2 When Hezekiah saw that Sennacherib had come, intent on making war against Jerusalem, ಸನ್ಹೇರೀಬನು ಬಂದದ್ದನ್ನೂ, ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ನಿಶ್ಚಯಿಸಿದ್ದನ್ನೂ ಹಿಜ್ಕೀಯನು ಕಂಡಾಗ,
3 he consulted his officials and warriors about blocking the springs outside the city, and they helped him. ಅವನು ಪಟ್ಟಣದ ಹೊರಗಿರುವ ನೀರಿನ ಬುಗ್ಗೆಗಳನ್ನು ಮುಚ್ಚಿಸುವುದಕ್ಕೆ ತನ್ನ ಪ್ರಧಾನರ ಮತ್ತು ತನ್ನ ಪರಾಕ್ರಮಶಾಲಿಗಳ ಸಂಗಡ ಯೋಚಿಸಿಕೊಂಡನು. ಅವರು ಅವನಿಗೆ ಸಹಾಯ ಕೊಟ್ಟರು.
4 Many people gathered and blocked all the springs and the stream flowing through the land, asking, "Why should Assyria's kings come and find abundant water?" ಆದ್ದರಿಂದ ಅನೇಕ ಜನರು ಕೂಡಿಕೊಂಡು, “ನೀರು ಬುಗ್ಗೆಗಳನ್ನೂ, ದೇಶದ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟು, ಅಸ್ಸೀರಿಯದ ಅರಸರು ಬಂದು ಬಹಳ ನೀರು ದೊರಕಿಸಿಕೊಳ್ಳುವುದು ಏಕೆ?” ಎಂದರು.
5 He worked hard to rebuild all the broken sections of the wall, raised towers on it, built another wall outside, strengthened the Millo of the city of David, and made abundant weapons and shields. ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು, ಬಿದ್ದುಹೋಗಿದ್ದ ಗೋಡೆಯನ್ನೆಲ್ಲಾ ಕಟ್ಟಿಸಿ, ಗೋಪುರಗಳ ಪರ್ಯಂತರ ಅದನ್ನು ಎತ್ತರಮಾಡಿ, ಅದರ ಹೊರಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ, ದಾವೀದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತಿ ಮಾಡಿ ಈಟಿಗಳನ್ನೂ, ಗುರಾಣಿಗಳನ್ನೂ ಬಹಳವಾಗಿ ಮಾಡಿಸಿದನು.
6 He set war commanders over the people, gathered them at the city gate square, and encouraged them: ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿಗಳನ್ನು ಇರಿಸಿ, ಪಟ್ಟಣದ ಬಾಗಿಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು, ಈ ಮಾತುಗಳಿಂದ ಅವರನ್ನು ಪ್ರೋತ್ಸಾಹಿಸಿದರು:
7 "Be strong and brave. Don't fear or dread Assyria's king and all his horde, for more are with us than with him. “ಬಲಗೊಳ್ಳಿರಿ, ಧೈರ್ಯವಾಗಿರಿ, ಅಸ್ಸೀರಿಯದ ಅರಸನ ನಿಮಿತ್ತವೂ, ಅವನ ಸಂಗಡ ಕೂಡಿರುವ ಮಹಾ ಗುಂಪಿನ ನಿಮಿತ್ತವೂ ಭಯಪಡಬೇಡಿರಿ, ನಿರಾಶರಾಗಬೇಡಿರಿ. ಏಕೆಂದರೆ ಅವನ ಸಂಗಡ ಇರುವವರಿಗಿಂತ ಮಿಗಿಲಾದದ್ದು ನಮ್ಮ ಸಂಗಡ ಇದೆ.
8 With him is only an arm of flesh; with us is our Father, to help us and fight our battles." The people relied on Hezekiah king of Judah's words. ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.
9 After this, while besieging Lachish with all his forces, Sennacherib king of Assyria sent his servants to Jerusalem, to Hezekiah king of Judah and all Judah there, saying: ಇದರ ತರುವಾಯ ಅಸ್ಸೀರಿಯದ ಅರಸನಾದ ಸನ್ಹೇರೀಬನೂ, ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ, ಅವನು ಯೆರೂಸಲೇಮಿನಲ್ಲಿರುವ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ, ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳುಹಿಸಿದನು.
10 "This is what Sennacherib king of Assyria says: On what are you trusting, staying under siege in Jerusalem? “ಅಸ್ಸೀರಿಯದ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ಉಳಿದಿರುವಿರಿ?
11 Isn't Hezekiah deceiving you, surrendering you to die by famine and thirst, when he says, 'The LORD our God will save us from the hand of the king of Assyria'? ‘ನಮ್ಮ ದೇವರಾದ ಯೆಹೋವ ದೇವರು ಅಸ್ಸೀರಿಯದ ಅರಸನ ಕೈಯಿಂದ ನಮ್ಮನ್ನು ಬಿಡಿಸುವರು,’ ಎಂದು ಹಿಜ್ಕೀಯನು ಹೇಳಿ, ನಿಮ್ಮನ್ನು ಹಸಿವೆ ಮತ್ತು ದಾಹದಿಂದ ಸಾಯಿಸುವುದಕ್ಕೆ ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
12 Wasn't it Hezekiah who removed his high places and altars, telling Judah and Jerusalem to worship at one altar and burn offerings there? ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?
13 Don't you know what I and my fathers did to all peoples of other lands? Could their nations' gods rescue their lands from my hand? “ನಾನೂ, ನನ್ನ ಪಿತೃಗಳು ದೇಶಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವಿತ್ತೋ?
14 What god of nations my fathers devoted to destruction could save his people from my hand? How then can your God save you from my hand? ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವರುಗಳಲ್ಲಿ ನನ್ನ ಕೈಯಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವುದು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?
15 Don't let Hezekiah deceive or mislead you like this, and don't believe him: no god of any nation or kingdom could rescue his people from my hand or my fathers'—much less will your God rescue you from my hand!" ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.
16 And his servants spoke still more against our Father and against his servant Hezekiah. ಹೀಗೆ ಅವನ ಸೇವಕರು ಇನ್ನೂ ದೇವರಾದ ಯೆಹೋವ ದೇವರಿಗೆ ವಿರೋಧವಾಗಿಯೂ, ಅವರ ಸೇವಕನಾದ ಹಿಜ್ಕೀಯನಿಗೆ ವಿರೋಧವಾಗಿಯೂ ಮಾತನಾಡಿದರು.
17 Sennacherib also wrote letters insulting our Father, the God of Israel, speaking against him: "The nations' gods did not rescue their people from my hand; neither will Hezekiah's God rescue his people from my hand." ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ನಿಂದಿಸುವುದಕ್ಕೂ, ಅವರಿಗೆ ವಿರೋಧವಾಗಿ ಮಾತನಾಡುವುದಕ್ಕೂ ಪತ್ರಗಳನ್ನು ಬರೆದನು. ಅದರಲ್ಲಿ, “ಇತರ ದೇಶಗಳ ಜನಾಂಗಗಳ ದೇವರುಗಳು, ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ, ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸನು,” ಎಂದು ಬರೆದಿತ್ತು.
18 They shouted loudly in Judah's language to Jerusalem's people on the wall, to frighten and terrify them, to seize the city. ಇದಲ್ಲದೆ ಅವರು ಪಟ್ಟಣವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವುದಕ್ಕೂ, ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ದೊಡ್ಡ ಶಬ್ದದಿಂದ ಅವರನ್ನು ಕೂಗಿದರು.
19 They spoke of Jerusalem's God like the gods of earth's peoples, the work of human hands. ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
20 Then King Hezekiah and the prophet Isaiah son of Amoz prayed about this, crying out to heaven. ಇದರ ನಿಮಿತ್ತ ಅರಸನಾದ ಹಿಜ್ಕೀಯನೂ, ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
21 So our Father sent an angel who killed every mighty warrior, commander, and officer in the Assyrian king's camp. Sennacherib returned home in disgrace, and when he entered his god's temple, some of his own sons killed him there with the sword. ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.
22 So our Father saved Hezekiah and Jerusalem's people from the hand of Sennacherib king of Assyria and all others, and he cared for them on every side. ಹೀಗೆ ಯೆಹೋವ ದೇವರು ಹಿಜ್ಕೀಯನನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ, ಅಸ್ಸೀರಿಯದ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ, ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ, ಸಮಸ್ತ ಕಡೆಯಿಂದ ಅವರನ್ನು ನಡೆಸಿದರು.
23 Many brought gifts to our Father in Jerusalem, and treasures to Hezekiah king of Judah; afterward all nations honored Hezekiah highly. ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.
24 In those days Hezekiah grew sick to death; he prayed to our Father, who answered, giving him a sign. ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು.
25 But Hezekiah didn't repay the good done him; his heart grew proud, so anger came on him and on Judah and Jerusalem. ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.
26 Hezekiah humbled himself for his proud heart, he and Jerusalem's people, so our Father's wrath didn't reach them in Hezekiah's days. ಅನಂತರ ಹಿಜ್ಕೀಯನೂ, ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯದಲ್ಲಿ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ, ಹಿಜ್ಕೀಯನ ದಿವಸಗಳಲ್ಲಿ ಯೆಹೋವ ದೇವರ ರೌದ್ರವು ಅವರ ಮೇಲೆ ಬರಲಿಲ್ಲ.
27 Hezekiah had great wealth and honor. He built storerooms for silver, gold, gems, spices, shields, and other valuables, ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು.
28 storerooms for the harvest of grain, new wine, and oil; stalls for all kinds of livestock; pens for flocks. ಇದಲ್ಲದೆ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನೂ, ಸಕಲ ವಿಧವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ, ಕುರಿಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
29 He built cities for himself and gained huge flocks and herds, for our Father gave him very great wealth. ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು.
30 Hezekiah stopped Gihon's upper outlet and directed the water down the west side of David's city. He succeeded in all he did. ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು, ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿದನು.
31 When Babylon's rulers sent envoys to him asking about the land's sign, our Father left him to himself, to test him and to know all in his heart. ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.
32 Hezekiah's remaining acts and faithful deeds are written in the vision of Isaiah the prophet, son of Amoz, in the Book of the Kings of Judah and Israel. ಹಿಜ್ಕೀಯನ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗ ಪ್ರವಾದಿಯಾದ ಯೆಶಾಯನ ದರ್ಶನದ ಪುಸ್ತಕದಲ್ಲಿ ಮತ್ತು ಯೆಹೂದ ಇಸ್ರಾಯೇಲ್ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
33 Hezekiah slept with his ancestors, buried in the upper tombs of David's sons. All Judah and Jerusalem's residents honored him at death. His son Manasseh succeeded him. ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]